< Ufunuo 2 >
1 “Kwa malaika wa kanisa la Efeso andika hivi: “Huu ndio ujumbe kutoka kwake yeye ashikaye nyota saba katika mkono wake wa kulia, na ambaye hutembea katikati ya vinara saba vya taa vya dhahabu.
೧“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡುಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,
2 Najua mambo yako yote; najua bidii yako na uvumilivu wako. Najua kwamba huwezi kuwavumilia watu waovu, na kwamba umewapima wale wanaojisemea kuwa mitume na kumbe sio, ukagundua kwamba ni waongo.
೨“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನುಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.
3 Wewe unayo saburi, umestahimili taabu nyingi kwa ajili ya jina langu, wala hukuvunjika moyo.
೩ನೀನು ತಾಳ್ಮೆಯುಳ್ಳವನಾಗಿನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.
4 Lakini ninayo hoja moja juu yako: wewe hunipendi tena sasa kama pale awali.
೪ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.
5 Basi, pakumbuke pale ulipokuwa kabla ya kuanguka, ukayaache madhambi yako, na kufanya kama ulivyofanya pale awali. La sivyo, naja kwako na kukiondoa kinara chako mahali pake.
೫ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.
6 Lakini nakusifu juu ya kitu kimoja: wewe unayachukia wanayoyatenda Wanikolai kama ninavyoyachukia mimi.
೬ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ.
7 “Aliye na masikio, basi, na asikie yale Roho anayoyaambia makanisa! “Wale wanaoshinda nitawapa haki ya kula matunda ya mti wa uzima ulioko ndani ya bustani ya Mungu.
೭ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆದೇವರ ಪರದೈಸಿನಲ್ಲಿರುವಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.
8 “Kwa malaika wa kanisa la Smurna andika hivi: “Huu ndio ujumbe kutoka kwake yeye wa kwanza na wa mwisho, ambaye alikufa na akaishi tena.
೮“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂಹೇಳುವುದೇನಂದರೆ,
9 Najua taabu zako; najua pia umaskini wako, ingawaje kwa kweli wewe ni tajiri; najua kashfa walizokufanyia wale wanaojiita Wayahudi lakini si Wayahudi wa kweli, bali ni kundi lake Shetani.
೯ನಾನು ನಿನ್ನ ಸಂಕಟವನ್ನೂನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನಸಭಾಮಂದಿರದವರಾಗಿದ್ದಾರೆ.
10 Usiogope hata kidogo yale ambayo itakulazimu kuteseka. Sikiliza! Ibilisi anataka kuwajaribu kwa kuwatia baadhi yenu gerezani; nanyi mtapata dhiki kwa muda wa siku kumi. Muwe waaminifu hata mpaka kufa, nami nitawapeni taji ya uzima.
೧೦ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತುಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕನಂಬಿಗಸ್ತನಾಗಿರು, ನಾನು ನಿನಗೆಜೀವದ ಕಿರೀಟವನ್ನು ಕೊಡುವೆನು.
11 “Aliye na masikio, basi, na asikie yale Roho anayoyaambia makanisa! “Wale wanaoshinda hawataumizwa na kifo cha pili.
೧೧ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.
12 “Kwa malaika wa kanisa la Pergamoni andika hivi: “Huu ndio ujumbe wake yeye aliye na upanga mkali wenye kuwili.
೧೨“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ, ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,
13 Najua unakoishi: Wewe unaishi kwenye makao makuu ya Shetani! Lakini bado unashikilia jina langu; hukuikana imani yako kwangu hata siku zile Antipa shahidi wangu mwaminifu, alipouawa pale mahali anapoishi Shetani.
೧೩ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.
14 Lakini ninayo machache dhidi yako: baadhi yenu ni wafuasi wa Balaamu aliyemfundisha Balaki kuwatega wana wa Israeli wale vyakula vilivyotambikiwa sanamu za kufanya uzinzi.
೧೪ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದುಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.
15 Vivyo hivyo, wako pia miongoni mwenu watu wanaofuata mafundisho ya Wanikolai.
೧೫ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.
16 Basi, achana na madhambi yako. La sivyo, nitakuja kwako upesi na kupigana na watu hao kwa upanga utokao kinywani mwangu.
೧೬ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆನಾನು ಬೇಗನೆ ನಿನ್ನ ಬಳಿಗೆ ಬಂದುನನ್ನ ಬಾಯಿಂದ ಹೊರಬರುವ ಕತ್ತಿಯಿಂದಅವರ ಮೇಲೆ ಯುದ್ಧ ಮಾಡುವೆನು.
17 “Aliye na masikio, basi, na asikie yale Roho anayoyaambia makanisa! “Wale wanaoshinda nitawapa ile mana iliyofichika. Nitawapa pia jiwe jeupe lililoandikwa jina jipya ambalo hakuna mtu aliyelijua isipokuwa tu wale wanaolipokea.
೧೭ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆಬಚ್ಚಿಟ್ಟಿರುವಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.
18 “Kwa malaika wa kanisa la Thuatira andika hivi: “Huu ndio ujumbe wa Mwana wa Mungu, ambaye macho yake yametameta kama moto, na miguu yake inang'aa kama shaba iliyosuguliwa.
೧೮“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,
19 Najua mambo yako yote. Najua upendo wako, imani yako, utumishi wako na uvumilivu wako. Wewe unafanya vizuri zaidi sasa kuliko pale awali.
೧೯ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು.
20 Lakini nina hoja moja juu yako: wewe unamvumilia yule mwanamke Yezabeli anayejiita nabii wa Mungu. Yeye huwafundisha na kuwapotosha watumishi wangu wafanye uzinzi na kula vyakula vilivyotambikiwa sanamu.
೨೦ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.
21 Nimempa muda wa kutubu dhambi zake, lakini hataki kuachana na uzinzi wake.
೨೧ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.
22 Sikiliza! Sasa namtupa kitandani ambapo yeye pamoja na wote waliofanya uzinzi naye watapatwa na mateso makali. Naam, nitafanya hivyo, kama wasipotubu matendo yao mabaya waliyotenda naye.
೨೨ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.
23 Tena nitawaua wafuasi wake, ili makanisa yote yatambue kwamba mimi ndiye ninayechunguza mioyo na fikira za watu.
೨೩ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.
24 “Lakini ninyi wengine mlioko huko Thuatira ambao hamfuati mafundisho yake Yezabeli, na ambao hamkujifunza kile wanachokiita Siri ya Shetani, nawaambieni kwamba sitawapeni mzigo mwingine.
೨೪“ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನುಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.
25 Lazima mzingatie yale mliyo nayo sasa mpaka nitakapokuja.
೨೫ಆದರೆನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.
26 “Wanaoshinda, na wale watakaozingatia mpaka mwisho kutenda ninayotaka, nitawapa mamlaka juu ya mataifa.
೨೬ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನುಕಡೆಯವರೆಗೂ ನಡಿಸುತ್ತಾನೋ, ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.‘ಅವನುಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.
27 Naam, nitawapa uwezo uleule nilioupokea kwa Baba: yaani, watayatawala mataifa kwa fimbo ya chuma na kuyavunjavunja kama chombo cha udongo.
೨೭
28 Tena nitawapa nyota ya asubuhi.
೨೮
29 “Aliye na masikio, basi, na ayasikie yale Roho anayoyaambia makanisa!
೨೯ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.