< 4 Mosebok 5 >

1 Och Herren talade med Mose, och sade:
ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
2 Bjud Israels barnom, att de låta alla spitelska komma utu lägret, och alla de som etterflöd hafva, och de som på något dödt orene vordne äro.
“ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.
3 Både man och qvinno skola de drifva ut för lägret, att de icke skola göra deras lägre orent, der jag uti bor ibland dem.
ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”
4 Och Israels barn gjorde så, och drefvo dem ut för lägret, såsom Herren hade sagt till Mose.
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಹಾಗೆಯೇ ಮಾಡಿದರು. ಇಸ್ರಾಯೇಲರು ಯೆಹೋವನಿಗೆ ವಿಧೇಯರಾಗಿ ಅಶುದ್ಧರಾದವರನ್ನೆಲ್ಲಾ ಪಾಳೆಯದಿಂದ ಹೊರಗೆ ಕಳುಹಿಸಿದರು.
5 Och Herren talade med Mose, och sade:
ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
6 Tala till Israels barn, och säg till dem: Om en man eller qvinna gör en synd på en mennisko, och förbryter sig dermed emot Herranom, så hafver den själen en skuld uppå sig.
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ,
7 Och de skola bekänna deras synd, som de gjort hafva, och skola försona deras skuld med lika värd, och derutöfver lägga femtedelen till, och gifva honom, som de emot syndat hafva.
ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು.
8 Om ingen är, hvilkom man betala skulle, så skall man gifvat Herranom inför Prestenom, undantagen försoningenes vädur, der han med försonad varder.
“ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು.
9 Desslikes skall allt häfoffer af allo thy, som Israels barn helga och offra Prestenom, vara hans.
ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.
10 Och hvilken något helgar, det skall ock vara hans; och hvad någor gifver Prestenom, det skall ock vara hans.
೧೦ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.”
11 Och Herren talade med Mose, och sade:
೧೧ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
12 Tala till Israels barn, och säg till dem: Om en mans hustru förlöper honom, och förbryter sig emot honom;
೧೨“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ‘ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಗಸ್ತಳಾಗಿ,
13 Och någor köttsliga belägrar henne, och varder dock mannenom fördoldt för hans ögon, och varder förskyldt att hon oren vorden är, och han kan icke öfvertygat henne; ty hon är icke beslagen dermed;
೧೩ಯಾರ ಕೈಗೆ ಸಿಕ್ಕದೆಯೂ ಸಾಕ್ಷಿ ಇಲ್ಲದೆಯೂ ರಹಸ್ಯವಾಗಿಯೇ ಪರಪುರುಷನೊಡನೆ ಸಂಗಮಿಸಿ ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾದ ಸಂದರ್ಭದಲ್ಲಿ,
14 Och misstankoanden upptänder honom, att han sina hustru misstänker, ehvad hon är oren, eller ej oren;
೧೪ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ,
15 Så skall han hafva henne fram för Presten, och bära fram ett offer öfver henne, tiondeparten af ett epha bjuggmjöl, och skall ingen oljo gjuta deruppå, ej heller lägga der rökelse på; ty det är ett misstankaoffer, och ett röjelseoffer, som missgerning röjer.
೧೫ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.
16 Då skall Presten hafva henne fram, och ställa henne för Herran;
೧೬“‘ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು.
17 Och taga af det helga vattnet uti ett lerkar, och lägga stoft af tabernaklets golf i vattnet;
೧೭ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.
18 Och skall ställa qvinnona inför Herran, och blotta hennes hufvud, och lägga röjelseoffret, det ett misstankaoffer är, på hennes hand; och Presten skall hafva i sine hand bittert förbannadt vatten.
೧೮ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.
19 Han skall besvärja qvinnan, och säga till henne: Hafver ingen man belägrat dig, och du icke hafver förlupit din man, så att du hafver orenat dig, så skall detta bittra förbannade vattnet intet skada dig.
೧೯ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ.
20 Men hafver du förlupit din man, så att du äst oren, och någor hafver belägrat dig förutan din man;
೨೦ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಪರಪುರುಷನೊಡನೆ ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನೊಡನೆ ನೀನು ಸಂಗಮಿಸಿದ್ದರೆ,”
21 Så skall Presten besvärja qvinnona med sådana förbannelse, och skall säga till henne: Herren sätte dig i förbannelse och till en ed ibland ditt folk; så att Herren låter förfalla dina länder, och din buk svälla.
೨೧“ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇಮಿಸಲಿ.
22 Så gånge nu det förbannade vattnet i ditt lif, så att din buk sväller, och dina länder förfalla. Och qvinnan skall säga: Amen, amen.
೨೨ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು.
23 Och så skall Presten skrifva denna förbannelsen på en sedel, och två det af med vattnet;
೨೩“‘ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು.
24 Och skall gifva qvinnone dricka af det bittra förbannade vattnet; och när det bittra förbannade vattnet är gånget uti henne;
೨೪ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು.
25 Då skall Presten taga det misstankaoffret af hennes hand, och veftoffra det för Herranom till ett spisoffer, och offrat uppå altaret.
೨೫ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು.
26 Han skall taga en hand full af spisoffret till hennes åminnelse, och bränna det upp på altaret, och derefter gifva qvinnone dricka vattnet.
೨೬ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಆ ನೀರನ್ನು ಸ್ತ್ರೀಗೆ ಕುಡಿಸಬೇಕು.
27 Och när hon hafver druckit vattnet, om hon är oren, och hafver sig emot sin man förbrutit; så skall det förbannade vattnet gå in i henne, och vara henne bittert, så att buken sväller på henne, och länderna förfalla; och den qvinna skall vara till en förbannelse ibland hennes folk.
೨೭ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು.
28 Är samma qvinna intet orenad, utan är ren; så skall det intet skada henne, så att hon ju må varda hafvandes.
೨೮ಆದರೆ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು.
29 Detta är misstankas lag, när en qvinna förlöper sin man och varder oren;
೨೯ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ.
30 Eller när en misstankoande upptänder en man, att han misstänker sina hustru, att han skall ställa henne inför Herran; och Presten göre med henne allt efter denna lagen.
೩೦ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಟ್ಟರೆ ಅವನು ಅವಳನ್ನು ಯೆಹೋವನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿನಿಯಮವನ್ನು ನೆರವೇರಿಸಬೇಕು.
31 Och mannen skall vara utan skuld för den missgerning, men qvinnan skall bära sin skuld.
೩೧ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’”

< 4 Mosebok 5 >