< 1 Korinthierbrevet 10 >
1 Ty jag vill säga eder detta, mina bröder: Våra fäder voro alla under molnskyn och gingo alla genom havet;
೧ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.
2 alla blevo de i molnskyn och i havet döpta till Moses;
೨ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.
3 alla åto de samma andliga mat,
೩ಅವರೆಲ್ಲರೂ ಆತ್ಮೀಕವಾದ ಒಂದೇ ಆಹಾರವನ್ನು ತಿಂದರು.
4 och alla drucko de samma andliga dryck -- de drucko nämligen ur en andlig klippa, som åtföljde dem, och den klippan var Kristus.
೪ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.
5 Men de flesta av dem hade Gud icke behag till; de blevo ju nedgjorda i öknen.
೫ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.
6 Detta skedde oss till en varnagel, för att vi icke skulle hava begärelse till det onda, såsom de hade begärelse därtill.
೬ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.
7 Ej heller skolen I bliva avgudadyrkare, såsom somliga av dem blevo; så är ju skrivet: »Folket satte sig ned till att äta och dricka, och därpå stodo de upp till all leka.»
೭ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.
8 Låtom oss icke heller bedriva otukt, såsom somliga av dem gjorde, varför ock tjugutre tusen föllo på en enda dag.
೮ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.
9 Låtom oss icke heller fresta Kristus, såsom somliga av dem gjorde, varför de ock blevo dödade av ormarna.
೯ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.
10 Knorren icke heller, såsom somliga av dem gjorde, varför de ock blevo dödade av »Fördärvaren».
೧೦ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.
11 Men detta vederfors dem för att tjäna till en varnagel, och det blev upptecknat till lärdom för oss, som hava tidernas ände inpå oss. (aiōn )
೧೧ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ. (aiōn )
12 Därför, den som menar sig stå, han må se till, att han icke faller.
೧೨ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.
13 Inga andra frestelser hava mött eder än sådana som vanligen möta människor. Och Gud är trofast; han skall icke tillstädja att I bliven frestade över eder förmåga, utan när han låter frestelsen komma, skall han ock bereda en utväg därur, så att I kunnen härda ut i den.
೧೩ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
14 Alltså, mina älskade, undflyn avgudadyrkan.
೧೪ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.
15 Jag säger detta till eder såsom till förståndiga människor; själva mån I döma om det som jag säger.
೧೫ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.
16 Välsignelsens kalk, över vilken vi uttala välsignelsen, är icke den en delaktighet av Kristi blod? Brödet, som vi bryta, är icke det en delaktighet av Kristi kropp?
೧೬ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?
17 Eftersom det är ett enda bröd, så äro vi, fastän många, en enda kropp, ty alla få vi vår del av detta ena bröd.
೧೭ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.
18 Sen på det lekamliga Israel: äro icke de som äta av offren delaktiga i altaret?
೧೮ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.
19 Vad vill jag då säga härmed? Månne att avgudaofferskött är någonting, eller att en avgud är någonting?
೧೯ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,
20 Nej, det vill jag säga, att vad hedningarna offra, det offra de åt onda andar och icke åt Gud; och jag vill icke att I skolen hava någon gemenskap med de onda andarna.
೨೦ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.
21 I kunnen icke dricka Herrens kalk och tillika onda andars kalk; I kunnen icke hava del i Herrens bord och tillika i onda andars bord.
೨೧ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.
22 Eller vilja vi reta Herren? Äro då vi starkare än han?
೨೨ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?
23 »Allt är lovligt»; ja, men icke allt är nyttigt. »Allt är lovligt»; ja, men icke allt uppbygger.
೨೩“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
24 Ingen söke sitt eget bästa, utan envar den andres.
೨೪ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.
25 Allt som säljes i köttboden mån I äta; I behöven icke för samvetets skull göra någon undersökning därom.
೨೫ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.
26 Ty »jorden är Herrens, och allt vad därpå är».
೨೬“ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.”
27 Om någon av dem som icke äro troende bjuder eder till sig och I viljen gå till honom, så mån I äta av allt som sättes fram åt eder; I behöven icke för samvetets skull göra någon undersökning därom.
೨೭ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.
28 Men om någon då säger till eder: »Detta är offerkött», så skolen I avhålla eder från att äta, för den mans skull, som gav saken till känna, och för samvetets skull --
೨೮ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.
29 jag menar icke ditt eget samvete, utan den andres; ty varför skulle jag låta min frihet dömas av en annans samvete?
೨೯ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
30 Om jag äter därav med tacksägelse, varför skulle jag då bliva smädad för det som jag tackar Gud för?
೩೦ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?
31 Alltså, vare sig I äten eller dricken, eller vadhelst annat I gören, så gören allt till Guds ära.
೩೧ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
32 Bliven icke för någon till en stötesten, varken för judar eller för greker eller för Guds församling;
೩೨ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.
33 varen såsom jag, som i alla stycken fogar mig efter alla och icke söker min egen nytta, utan de mångas, för att de skola bliva frälsta.
೩೩ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.