< Jeremia 7 >
1 Detta är det ord som kom till Jeremia från HERREN; han sade:
ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ:
2 Ställ dig i porten till HERRENS hus, och predika där detta ord och säg: Hören HERRENS ord, I alla av Juda, som gån in genom dessa portar för att tillbedja HERREN.
“ಯೆಹೋವ ದೇವರ ಆಲಯದ ಬಾಗಿಲಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು: “‘ಯೆಹೂದ್ಯರೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.
3 Så säger HERREN Sebaot, Israels Gud: Bättren edert leverne och edert väsende, så vill jag låta eder bo kvar på denna plats.
ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆಮಾಡಿರಿ. ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
4 Förliten eder icke på lögnaktigt tal, när man säger: »Här är HERRENS tempel, HERRENS tempel, HERRENS tempel!»
“ಇವುಗಳೇ ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ,” ಎಂದು ಹೇಳುವ ಮೋಸಕರ ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
5 Nej, om I bättren edert leverne och edert väsende, om I dömen rätt mellan man och man,
ಏಕೆಂದರೆ ನೀವು ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ, ಪೂರ್ಣವಾಗಿ ನೆಟ್ಟಗೆ ಮಾಡಿದರೆ; ಮನುಷ್ಯನಿಗೂ, ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯ ನಡೆಸಿದರೆ;
6 om I upphören att förtrycka främlingen, den faderlöse och änkan, att utgjuta oskyldigt blod på denna plats och att följa efter andra gudar, eder själva till olycka,
ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ;
7 då vill jag för evärdliga tider låta eder bo på denna plats, i det land som jag har givit åt edra fäder.
ನಾನು ನಿಮ್ಮನ್ನು ಈ ಸ್ಥಳದಲ್ಲಿ ಎಂದರೆ, ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
8 Men se, I förliten eder på lögnaktigt tal, som icke kan hjälpa.
ನೀವು ಪ್ರಯೋಜನವಿಲ್ಲದ ಮೋಸಕರ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
9 Huru är det? I stjälen, mörden och begån äktenskapsbrott, I svärjen falskt, I tänden offereld åt Baal och följen efter andra gudar, som I icke kännen;
“‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ,
10 sedan kommen I hit och träden fram inför mitt ansikte i detta hus, som är uppkallat efter mitt namn, och sägen: »Med oss är ingen nöd» -- för att därefter fortfara med alla dessa styggelser.
ಆಮೇಲೆ ಬಂದು ನನ್ನ ಹೆಸರನ್ನು ಹೊಂದಿರುವ ಈ ಆಲಯದಲ್ಲಿ ನನ್ನ ಮುಂದೆ ನಿಂತುಕೊಂಡು, “ನಾವು ಸುರಕ್ಷಿತರು” ಎಂದು ಹೇಳಿ ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲಾಗಿದ್ದೇವೆಂದು ಹೇಳುವಿರೋ?
11 Hållen I det då för en rövarkula, detta hus, som är uppkallat efter mitt namn? Ja, sannerligen, också jag anser det så, säger HERREN.
ನನ್ನ ಹೆಸರನ್ನು ಹೊಂದಿರುವ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.
12 Gån bort till den plats i Silo, där jag först lät mitt namn bo, och sen huru jag har gjort med den, för mitt folk Israels ondskas skull.
“‘ಆದರೆ ಈಗ ಶೀಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಎಂದರೆ, ನಾನು ಮೊದಲು ನನ್ನ ಹೆಸರನ್ನು ಸ್ಥಾಪಿಸಿದ ಸ್ಥಳಕ್ಕೆ ಹೋಗಿರಿ; ಅದಕ್ಕೆ ನಾನು, ನನ್ನ ಜನರಾದ ಇಸ್ರಾಯೇಲರ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
13 Och eftersom I haven gjort alla dessa gärningar, säger HERREN, och icke haven velat höra, fastän jag titt och ofta har talat till eder, och icke haven velat svara, fastän jag har ropat på eder,
ಈಗ ಯೆಹೋವ ದೇವರು ಹೇಳುವುದೇನೆಂದರೆ, ನೀವು ಈ ಕೆಲಸಗಳನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮನ್ನು ಕರೆದರೂ, ನೀವು ಉತ್ತರ ಕೊಡದೆ ಹೋದಿರಿ.
14 därför vill jag nu med detta hus, som är uppkallat efter mitt namn, och som I förliten eder på, och med denna plats, som jag har givit åt eder och edra fäder, göra såsom jag gjorde med Silo.
ಆದಕಾರಣ ನನ್ನ ಹೆಸರಿನಿಂದ ಕರೆಯಲಾದಂಥ ಮತ್ತು ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ, ನಿಮ್ಮ ಪಿತೃಗಳಿಗೆ ಕೊಟ್ಟ ಸ್ಥಳಕ್ಕೂ, ಶೀಲೋವಿಗೆ ಮಾಡಿದ ಹಾಗೆ ಮಾಡುವೆನು.
15 Och jag skall kasta eder bort ifrån mitt ansikte, såsom jag har bortkastat alla edra bröder all Efraims släkt.
ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’
16 Så må du nu icke bedja för detta folk eller frambära någon klagan och förbön för dem eller lägga dig ut för dem hos mig, ty jag vill icke höra dig.
“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ. ಏಕೆಂದರೆ ನಾನು ಅದನ್ನು ಕೇಳಿಸಿಕೊಳ್ಳುವುದಿಲ್ಲ.
17 Ser du icke vad de göra i Juda städer och på Jerusalems gator?
ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡುವುದನ್ನು ನೀನು ನೋಡುವುದಿಲ್ಲವೋ?
18 Barnen samla tillhopa ved, fäderna tända upp eld och kvinnorna knåda deg, allt för att baka offerkakor åt himmelens drottning; och drickoffer utgjuta de åt andra gudar, mig till sorg.
‘ಗಗನದ ಒಡತಿ,’ ಎಂದು ಇವರು ಕರೆಯುವ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯ ದೇವತೆಗಳಿಗೆ ಪಾನ ನೈವೇದ್ಯವನ್ನು ಅರ್ಪಿಸುತ್ತಾರೆ.”
19 Men är det då mig som de bereda sorg därmed, säger HERREN, och icke fastmer sig själva, så att de komma på skam?
ಯೆಹೋವ ದೇವರು ಅನ್ನುತ್ತಾನೆ: “ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖ ಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೇ?”
20 Därför säger Herren, HERREN så: Se, min vrede och förtörnelse skall utgjuta sig över denna plats, över både människor och djur, över både träden på marken och frukten på jorden; och den skall brinna och icke bliva utsläckt.
“‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.
21 Så säger HERREN Sebaot, Israels Gud: Läggen edra brännoffer tillhopa med edra slaktoffer och äten så kött.
“‘ಇಸ್ರಾಯೇಲಿನ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ, ಮಾಂಸವನ್ನು ತಿನ್ನಿರಿ.
22 Ty på den tid då jag förde edra fäder ut ur Egyptens land gav jag dem icke någon befallning eller något bud angående brännoffer och slaktoffer;
ಏಕೆಂದರೆ, ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ದಿವಸದಲ್ಲಿ, ದಹನಬಲಿಗಳ ಮತ್ತು ಬಲಿಗಳ ವಿಷಯ ನಾನು ಅವರ ಸಂಗಡ ಮಾತನಾಡಲಿಲ್ಲ; ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
23 utan detta var det bud jag gav dem: »Hören min röst, så vill jag vara eder Gud, och I skolen vara mitt folk; och vandren i allt på den väg som jag bjuder eder, på det att det må gå eder väl.»
ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.
24 Men de ville icke höra eller böja sitt öra till mig, utan vandrade efter sina egna rådslag, i sina onda hjärtans hårdhet, och veko tillbaka i stället för att gå framåt.
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
25 Allt ifrån den dag då edra fäder drogo ut ur Egyptens land ända till nu har jag dag efter dag, titt och ofta, sänt till eder alla mina tjänare profeterna.
ನಿಮ್ಮ ಪಿತೃಗಳು ಈಜಿಪ್ಟ್ ದೇಶವನ್ನು ಬಿಟ್ಟುಹೋದ ದಿನದಿಂದ ಇಂದಿನವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ಪ್ರತಿದಿನವೂ ನಿಮ್ಮ ಬಳಿಗೆ ಕಳುಹಿಸುತ್ತಾ ಬಂದೆನು.
26 Men man ville icke höra mig eller böja sitt öra till mig; de voro hårdnackade och gjorde ännu mer ont än deras fäder.
ಆದರೂ ಅವರು ನನ್ನ ಮಾತಿಗೆ ಕಿವಿಗೊಡದೆ, ತಮ್ಮನ್ನು ಕಠಿಣ ಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.’
27 Och om du än säger dem allt detta, så skola de dock icke höra dig; och om du än ropar till dem, så skola de dock icke svara dig.
“ಆದ್ದರಿಂದ ನೀನು ಈ ಮಾತುಗಳನ್ನೆಲ್ಲಾ ಅವರಿಗೆ ಹೇಳಬೇಕು. ಆದರೆ ಅವರು ನಿನ್ನ ಮಾತನ್ನು ಕೇಳುವುದಿಲ್ಲ. ಅವರನ್ನು ನೀನು ಕರೆಯುವೆ. ಆದರೆ ಅವರು ನಿನಗೆ ಉತ್ತರ ಕೊಡುವುದಿಲ್ಲ.
28 Säg därför till dem: »Detta är det folk som icke vill höra HERRENS, sin Guds, röst eller taga emot tuktan. Sanningen är försvunnen och utrotad ur deras mun.»
ಆದ್ದರಿಂದ ಅವರಿಗೆ ಹೀಗೆ ಹೇಳು, ‘ಇದು ಅವರ ದೇವರಾದ ಯೆಹೋವ ದೇವರಿಗೆ ವಿಧೇಯನಾಗದ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸದಂಥ ಜನಾಂಗವಾಗಿದೆ. ಸತ್ಯವು ನಾಶವಾಯಿತು. ಇದು ಅವರ ಬಾಯಿಂದ ತೆಗೆದುಹಾಕಲಾಗಿದೆ.
29 Skär av dig ditt huvudhår och kasta det bort, och stäm upp en klagosång på höjderna. Ty HERREN har förkastat och förskjutit detta släkte, som har uppväckt hans vrede.
“‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.
30 Juda barn hava ju gjort vad ont är i mina ögon, säger HERREN; de hava satt upp sina styggelser i det hus som är uppkallat efter mitt namn, och de hava så orenat det.
“‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.
31 Och Tofethöjderna i Hinnoms sons dal hava de byggt upp, för att där uppbränna sina söner och döttrar i eld, fastän jag aldrig har bjudit eller ens tänkt mig något sådant.
ಬೆನ್ ಹಿನ್ನೋಮ್ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಪುತ್ರಪುತ್ರಿಯರನ್ನು ಬೆಂಕಿಯಲ್ಲಿ ಸುಡುವುದಕ್ಕೆ ಕಟ್ಟಿದ್ದಾರೆ. ಇದನ್ನು ನಾನು ಆಜ್ಞಾಪಿಸಲಿಲ್ಲ. ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
32 Se, därför skola dagar komma, säger HERREN, då man icke mer skall säga »Tofet» eller »Hinnoms sons dal», utan »Dråpdalen», och då man skall begrava i Tofet, därför att ingen annan plats finnes.
ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ದಿನಗಳು ಬರಲಿವೆ, ಆ ಕಣಿವೆಗೆ ತೋಫೆತ್ ಮತ್ತು ಬೆನ್ ಹಿನ್ನೋಮ್ ಎಂಬ ಹೆಸರುಗಳು ಹೋಗಿ, ಸಂಹಾರದ ಕಣಿವೆ ಎಂದು ಕರೆಯಲಾಗುವುದು. ಏಕೆಂದರೆ, ಸ್ಥಳವಿಲ್ಲದವರೆಗೂ ತೋಫೆತಿನಲ್ಲಿ ಅವರು ಹೂಳಿಡುವರು.
33 Ja, detta folks döda kroppar skola bliva mat åt himmelens fåglar och markens djur, och ingen skall skrämma bort dem.
ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು. ಯಾರೂ ಅವುಗಳನ್ನು ಬೆದರಿಸುವುದಿಲ್ಲ.
34 Och i Juda städer och på Jerusalems gator skall jag göra slut på fröjderop och glädjerop, på rop för brudgum och rop för brud, ty landet skall bliva ödelagt.
ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.