< Psaltaren 61 >
1 För sångmästaren, till strängaspel; av David. Hör, o Gud, mitt rop, akta på min bön.
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ತಂತಿವಾದ್ಯದೊಡನೆ ಹಾಡತಕ್ಕದ್ದು. ದಾವೀದನ ಕೀರ್ತನೆ. ದೇವರೇ, ನನ್ನ ಮೊರೆಯನ್ನು ಕೇಳಿರಿ. ನನ್ನ ಪ್ರಾರ್ಥನೆಯನ್ನು ಆಲಿಸಿರಿ.
2 Från jordens ända ropar jag till dig, ty mitt hjärta försmäktar; för mig upp på en klippa, som är mig alltför hög.
ನನ್ನ ಹೃದಯವು ಕುಂದಿ ಹೋಗಿರಲಾಗಿ ಭೂಮಿಯ ಅಂತ್ಯದಿಂದ ನಿಮಗೆ ಮೊರೆಯಿಡುತ್ತಿರುವೆನು. ನನಗಿಂತ ಎತ್ತರವಾದ ಬಂಡೆಗೆ ನನ್ನನ್ನು ನಡೆಸಿರಿ.
3 Ty du är min tillflykt, ett starkt torn mot fienden.
ನೀವೇ ನನಗೆ ಆಶ್ರಯವಾಗಿದ್ದೀರಿ. ಶತ್ರುವಿಗೆ ಎದುರಾಗಿ ಬಲವಾದ ಬುರುಜಾಗಿದ್ದೀರಿ.
4 Låt mig bo i din hydda evinnerligen; under dina vingars beskärm tager jag min tillflykt. (Sela)
ನಿಮ್ಮ ಗುಡಾರದಲ್ಲಿ ನಿತ್ಯವಾಗಿ ನಿವಾಸಿಸಲು ಹಾರೈಸುತ್ತಿದ್ದೇನೆ. ನಿಮ್ಮ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
5 Ty du, o Gud, hör mina löften, åt dem som frukta ditt namn giver du en arvedel.
ದೇವರೇ, ನೀವು ನನ್ನ ಹರಕೆಗಳನ್ನು ಕೇಳಿದ್ದೀರಿ. ನಿಮ್ಮ ಹೆಸರಿಗೆ ಭಯಪಡುವವರಿಗೆ ಕೊಡುವ ಸೊತ್ತನ್ನು ನನಗೂ ಕೊಟ್ಟಿದ್ದೀರಿ.
6 Du förökar konungens dagar; hans år skola vara från släkte till släkte.
ಅರಸನ ಜೀವನದ ದಿನಗಳನ್ನು ಹೆಚ್ಚಿಸಿರಿ. ಆತನ ವರ್ಷಗಳನ್ನು ತಲತಲಾಂತರಗಳವರೆಗೆ ವೃದ್ಧಿಪಡಿಸಿರಿ.
7 Må han sitta på sin tron inför Gud evinnerligen; låt nåd och trofasthet bevara honom.
ಆತನು ಎಂದೆಂದಿಗೂ ದೇವರ ಮುಂದೆ ಆಳಿಕೆಮಾಡಲಿ. ಆತನನ್ನು ಕಾಯುವ ಹಾಗೆ ನಿಮ್ಮ ಪ್ರೀತಿ, ಸತ್ಯವನ್ನು ನೇಮಿಸಿರಿ.
8 Då skall jag lovsjunga ditt namn till evig tid, i det jag får infria mina löften dag efter dag.
ಆಗ ನಾನು ನನ್ನ ಹರಕೆಗಳನ್ನು ದಿನದಿನವೂ ಸಲ್ಲಿಸುವೆನು. ನಿಮ್ಮ ಹೆಸರನ್ನು ನಾನು ಎಂದೆಂದಿಗೂ ಕೀರ್ತಿಸುವೆನು.