< ఆదికాండము 47 >
1 ౧ యోసేపు వెళ్ళి ఫరోతో “మా నాన్న, నా అన్నలు వారి గొర్రెల మందలతో వారి పశువులతో వారికి కలిగినదంతటితో కనాను దేశం నుండి వచ్చి గోషెనులో ఉన్నారు” అని తెలియచేసి,
೧ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು.
2 ౨ తన సోదరుల్లో ఐదు గురిని వెంటబెట్టుకుని వెళ్లి వారిని ఫరో ముందు నిలబెట్టాడు.
೨ಅಲ್ಲದೆ ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.
3 ౩ ఫరో, అతని సోదరులను చూసి “మీ వృత్తి ఏంటి?” అని అడిగితే వారు “నీ దాసులమైన మేమూ మా పూర్వికులు, గొర్రెల కాపరులం” అని ఫరోతో చెప్పారు.
೩ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸುಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು.
4 ౪ వారు “కనాను దేశంలో కరువు తీవ్రంగా ఉంది. నీ దాసుల మందలకు మేత లేదు కాబట్టి ఈ దేశంలో కొంత కాలముండడానికి వచ్చాము. గోషెను ప్రాంతంలో నీ దాసులు నివసించడానికి సెలవు ఇప్పించండి” అని ఫరోతో అన్నారు.
೪ಅದಲ್ಲದೆ ಅವರು ಫರೋಹನಿಗೆ, “ಕಾನಾನ್ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು.
5 ౫ ఫరో యోసేపును చూసి “మీ నాన్న, నీ సోదరులు నీ దగ్గరికి వచ్చారు.
೫ಆಗ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ, ಅಣ್ಣತಮ್ಮಂದಿರೂ ನಿನ್ನ ಬಳಿಗೆ ಬಂದಿದ್ದಾರೆ;
6 ౬ ఐగుప్తు దేశం నీ ఎదుట ఉంది. ఈ దేశంలోని మంచి ప్రాంతంలో మీ నాన్న, నీ సోదరులూ నివసించేలా చెయ్యి. గోషెను ప్రాంతంలో వారు నివసించవచ్చు. వారిలో ఎవరైనా సమర్ధులని నీకు అనిపిస్తే నా మందల మీద వారిని అధిపతులుగా నియమించు” అని చెప్పాడు.
೬ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.
7 ౭ యోసేపు తన తండ్రి యాకోబును లోపలికి తీసుకు వచ్చి ఫరో ముందు నిలబెట్టినప్పుడు, యాకోబు ఫరోను దీవించాడు.
೭ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು.
8 ౮ ఫరో “నీ వయసెంత?” అని యాకోబును అడిగాడు.
೮ಫರೋಹನು, “ನಿನಗೆ ಈಗ ಎಷ್ಟು ವರ್ಷ?” ಎಂದು ಕೇಳಿದನು.
9 ౯ యాకోబు “నేను ప్రయాణాలు చేసినవి 130 ఏళ్ళు. నా జీవించిన దినాలు కొద్డిగానూ బాధాకరమైనవిగానూ ఉన్నాయి. అవి నా పూర్వీకులు యాత్ర చేసిన సంవత్సరాలన్ని కాలేదు” అని ఫరోతో చెప్పి,
೯ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.
10 ౧౦ ఫరోను దీవించి వెళ్ళిపోయాడు.
೧೦ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
11 ౧౧ ఫరో ఆజ్ఞ ఇచ్చినట్లే, యోసేపు తన తండ్రికీ తన సోదరులకూ ఐగుప్తు దేశంలో రామెసేసు అనే మంచి ప్రదేశంలో స్వాస్థ్యం ఇచ్చాడు.
೧೧ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು.
12 ౧౨ యోసేపు తన తండ్రినీ తన సోదరులనూ తన తండ్రి కుటుంబం వారినందరినీ పోషిస్తూ వారి పిల్లల లెక్క ప్రకారం ఆహారమిచ్చి సంరక్షించాడు.
೧೨ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
13 ౧౩ కరువు చాలా తీవ్రంగా ఉంది కాబట్టి ఆ దేశమంతటా ఆహారం లేదు. కరువుతో ఐగుప్తు దేశం, కనాను దేశం దుర్బలమైన స్థితికి వచ్చాయి.
೧೩ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್ ದೇಶವು ಕ್ಷಾಮದಿಂದ ಬರಡಾದವು.
14 ౧౪ యోసేపు ప్రజలకు ధాన్యం అమ్ముతూ ఐగుప్తు దేశంలోనూ కనాను దేశంలోనూ ఉన్న డబ్బంతా పోగుచేశాడు. ఆ డబ్బంతా, ఫరో భవనంలోకి యోసేపు తెప్పించాడు.
೧೪ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.
15 ౧౫ ఐగుప్తు దేశంలో కనాను దేశంలో డబ్బు అయిపోయిన తరువాత ఐగుప్తీయులంతా యోసేపు దగ్గరికి వచ్చి “మాకు ఆహారం ఇప్పించు. నీ ముందు మేమెందుకు చావాలి? మా డబ్బంతా అయిపోయింది” అన్నారు.
೧೫ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.
16 ౧౬ అందుకు యోసేపు “మీ పశువులు ఇవ్వండి, మీ డబ్బులు అయిపోతే మీ పశువులకు బదులు నేను మీకు ధాన్యమిస్తాను” అని చెప్పాడు.
೧೬ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು.
17 ౧౭ కాబట్టి వారు తమ పశువులను యోసేపు దగ్గరికి తెచ్చారు. ఆ సంవత్సరం, వారి మందలన్నిటికి బదులుగా అతడు వారికి ఆహారమిచ్చి వారిని పోషించాడు.
೧೭ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
18 ౧౮ ఆ సంవత్సరం గడిచాక, తరువాత సంవత్సరం వారు అతని దగ్గరికి వచ్చి “మా డబ్బంతా అయిపోయింది. ఆ సంగతి మా యజమానులైన మీ దగ్గర దాచలేము. మా పశువుల మందలన్నీ మా యజమానులైన మీ వశమయ్యాయి. మా శరీరాలూ మా భూములూ తప్ప ఇంకేమీ మాకు మిగలలేదు.
೧೮ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ” ಎಂದರು.
19 ౧౯ మీ కళ్ళముందు మేమూ మా పొలాలు ఎందుకు నశించాలి? ఆహారమిచ్చి మమ్మల్నీ మా పొలాలనూ కొనండి. మా పొలాలతో పాటు మేము ఫరోకు దాసులమవుతాం. మేము చావకుండా బతికేలా, పొలాలు పాడైపోకుండా మాకు విత్తనాలివ్వండి” అని అడిగారు.
೧೯“ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು.
20 ౨౦ ఆవిధంగా, యోసేపు ఐగుప్తు భూములన్నిటినీ ఫరో కోసం కొన్నాడు. కరువు ఇగుప్తు వారిపాలిట తీవ్రంగా ఉండడం వలన వారంతా తమ పొలాలను అమ్మేశారు కాబట్టి, భూమి ఫరోది అయింది.
೨೦ಹೀಗೆ ಯೋಸೇಫನು ಐಗುಪ್ತರಿಂದ ಎಲ್ಲಾ ಸಾಗುವಳಿಯ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಪ್ರತಿಯೊಬ್ಬ ಐಗುಪ್ತನ್ನು ತನ್ನ ಹೊಲಗದ್ದೆಗಳನ್ನು ಮಾರಿಬಿಟ್ಟನು. ಬರವು ಐಗುಪ್ತದಲ್ಲಿ ಘೋರವಾಗಿದ್ದದರಿಂದ ಅವರೆಲ್ಲರ ಭೂಮಿಯು ಫರೋಹನ ವಶವಾಯಿತು.
21 ౨౧ అతడు ఐగుప్తు పొలిమేరల ఈ చివరనుండి ఆ చివర వరకూ ప్రజలను దాసులుగా చేశాడు.
೨೧ಯೋಸೇಫನು ಐಗುಪ್ತ ದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.
22 ౨౨ యాజకుల భూమి మాత్రమే అతడు కొనలేదు, యాజకులకు ఫరో భత్యం నియమించాడు. వారు ఫరో ఇచ్చిన ఆహారం తినే వారు కాబట్టి వారు తమ భూములను అమ్మలేదు.
೨೨ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ.
23 ౨౩ యోసేపు “ఇదిగో నేడు మిమ్మల్ని, మీ భూములను ఫరో కోసం కొన్నాను. మీకు విత్తనాలు ఇవిగో. పొలాల్లో చల్లండి.
೨೩ಯೋಸೇಫನು ಪ್ರಜೆಗಳಿಗೆ, “ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ.
24 ౨౪ నాలుగు భాగాలు మీవి. పంటలో అయిదవ భాగం మీరు ఫరోకు ఇవ్వాలి. అది పొలాల్లో విత్తడానికీ మీ పిల్లలకూ మీ ఇంట్లోవారి ఆహారానికి” అని ప్రజలతో చెప్పాడు.
೨೪ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.
25 ౨౫ వారు “నువ్వు మా ప్రాణాలు నిలబెట్టావు. మాపై నీ దయ ఉండుగాక. మేము ఫరోకు బానిసలమవుతాం” అని చెప్పారు.
೨೫ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.
26 ౨౬ అప్పుడు ఐదవ భాగం ఫరోది అని యోసేపు ఐగుప్తు వారికి చట్టం నియమించాడు. అది ఇప్పటివరకూ నిలిచి వుంది. యాజకుల భూములు మాత్రమే ఫరోవి కాలేదు.
೨೬ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.
27 ౨౭ ఇశ్రాయేలీయులు ఐగుప్తు దేశంలోని గోషెను ప్రాంతంలో నివసించారు. అందులో వారు ఆస్తి సంపాదించుకుని సంతానాభివృద్ధి పొంది చాలా విస్తరించారు.
೨೭ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.
28 ౨౮ యాకోబు ఐగుప్తుదేశంలో 17 ఏళ్ళు జీవించాడు. యాకోబు మొత్తం 147 ఏళ్ళు బతికాడు.
೨೮ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರ್ಷ ಬದುಕಿದನು. ಅವನ ಜೀವಿತ ಕಾಲದ ದಿನಗಳು ನೂರ ನಲ್ವತ್ತೇಳು ವರ್ಷಗಳು.
29 ౨౯ ఇశ్రాయేలు అవసాన కాలం దగ్గర పడినప్పుడు అతడు తన కొడుకు యోసేపును పిలిపించి “నాపట్ల నీకు అభిమానం ఉంటే, నీ చెయ్యి నా తొడ కింద ఉంచి నాకు నమ్మకాన్నీ విశ్వాసాన్నీ కలిగించు. దయచేసి నన్ను ఐగుప్తులో పాతిపెట్టవద్దు.
೨೯ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.
30 ౩౦ నేను నా పితరులతో నిద్రించినప్పుడు ఐగుప్తులో నుంచి నన్ను తీసుకెళ్ళి, వారి సమాధిలో నన్ను పాతిపెట్టు” అని అతనితో చెప్పాడు.
೩೦ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು.
31 ౩౧ అందుకు యోసేపు “నేను నీ మాట చొప్పున చేస్తాను” అన్నాడు. ఇశ్రాయేలు “నాతో ప్రమాణం చెయ్యి” అంటే, యోసేపు అతనితో ప్రమాణం చేశాడు. అప్పుడు ఇశ్రాయేలు తన పడక తలగడ దగ్గర వంగి నమస్కరించాడు.
೩೧ಇಸ್ರಾಯೇಲನು, “ಪ್ರಮಾಣಮಾಡು” ಎನ್ನಲು ಅವನು ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಬಾಗಿ ದೇವರಿಗೆ ನಮಸ್ಕಾರ ಮಾಡಿದನು.