< Ts'etta ıxhaynbı 5 >
1 Aadamne nasılın taarix inəxüd vod. Allahee insan iyxhanang'a mana Cuk akarara irxhın.
೧ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.
2 Mang'vee adamiyiy zəiyfa ipxhın. Manbışis xayir-düə huvu. İpxhınne yiğıl manbışis «insan» do gixhxhı.
೨ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು.
3 Aadamın vəşşe xhebts'al sen g'adıyng'a, cuk akarana, cune k'op'yeylna sa dix ıxha. Doyud Şet giyxhe.
೩ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
4 Aadam, Şet ıxhayle qiyğa molyud vəşşe senna axu. Mang'uka mebın dixbıyiy yişba vuxha.
೪ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು.
5 Aadam yüç'üd vəşşe xhebts'al senna axu q'ık'u.
೫ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು.
೬ಸೇತನು ನೂರ ಐದು ವರ್ಷದವನಾದಾಗ, ಎನೋಷನನ್ನು ಪಡೆದನು.
೭ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು.
೮ಸೇತನು ಒಟ್ಟು ಒಂಭೈನೂರ ಹನ್ನೆರಡು ವರ್ಷ ಬದುಕಿ ನಂತರ ಸತ್ತನು.
೯ಎನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು.
೧೦ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು.
೧೧ಎನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು.
೧೨ಕೇನಾನನು ಎಪ್ಪತ್ತು ವರ್ಷದವನಾದಾಗ, ಮಹಲಲೇಲನನ್ನು ಪಡೆದನು.
೧೩ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು.
೧೪ಕೇನಾನನು ಒಟ್ಟು ಒಂಭೈನೂರ ಹತ್ತು ವರ್ಷ ಬದುಕಿ ನಂತರ ಸತ್ತನು.
೧೫ಮಹಲಲೇಲನು ಅರವತ್ತೈದು ವರ್ಷದವನಾದಾಗ ಯೆರೆದನನ್ನು ಪಡೆದನು.
೧೬ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು.
೧೭ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು.
೧೮ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನೋಕನನ್ನು ಪಡೆದನು.
೧೯ಹನೋಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರ್ಷ ಬದುಕಿದನು.
೨೦ಯೆರೆದನು ಒಟ್ಟು ಒಂಭೈನೂರ ಅರುವತ್ತೆರಡು ವರ್ಷ ಬದುಕಿ ನಂತರ ಸತ್ತನು.
೨೧ಹನೋಕನು ಅರುವತ್ತೈದು ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು.
೨೨ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.
೨೩ಹನೋಕನು ಬದುಕಿದ ಒಟ್ಟು ಕಾಲ ಮುನ್ನೂರ ಅರುವತ್ತೈದು ವರ್ಷಗಳು.
೨೪ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.
೨೫ಮೆತೂಷೆಲಹನು ನೂರ ಎಂಭತ್ತೇಳು ವರ್ಷದವನಾದಾಗ ಲೆಮೆಕನನ್ನು ಪಡೆದನು.
೨೬ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು.
೨೭ಮೆತೂಷೆಲಹನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರ್ಷ ಬದುಕಿ ನಂತರ ಸತ್ತನು.
೨೮ಲೆಮೆಕನು ನೂರ ಎಂಭತ್ತೆರಡು ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.
೨೯ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.
೩೦ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು.
೩೧ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿ ನಂತರ ಸತ್ತನು.
೩೨ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.