< 1 Krallar 7 >
1 Süleyman kendine, yapımı on üç yıl süren bir saray yaptırdı.
೧ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು.
2 Uzunluğu yüz, genişliği elli, yüksekliği otuz arşın olan Lübnan Ormanı adında bir saray daha yaptırdı. Saray sedir kirişler yerleştirilmiş dört sıra halindeki sedir sütunların üzerine yapılmıştı.
೨ಅವನು ಕಟ್ಟಿಸಿದ ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ ಮತ್ತು ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ, ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಅದಕ್ಕೆ ಆಧಾರವಾಗಿದ್ದವು.
3 Sütunların üstündeki kırk beş kirişin üstü sedir tahtalarıyla kaplanmıştı. Bir sıra on beş kirişten oluşuyordu.
೩ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು.
4 Kafesli pencereler üç sıra halinde birbirine bakacak biçimde yapılmıştı.
೪ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕಿನ ಕಿಟಕಿಗಳಿದ್ದವು
5 Kapılar ve kapı söveleri dört köşeliydi. Pencereler ise üç sıra halinde birbirine bakacak biçimde yapılmıştı.
೫ಎಲ್ಲಾ ದ್ವಾರಗಳೂ, ಬೆಳಕಿನ ಕಿಟಕಿಗಳೂ ಚತುಷ್ಕೋಣದ ಆಕಾರವುಳ್ಳವುಗಳಾಗಿದ್ದವು. ಮೂರು ಮೂರು ಸಾಲು ಬೆಳಕಿನ ಕಿಟಕಿಗಳು ಎದುರುಬದುರಾಗಿದ್ದವು.
6 Süleyman elli arşın uzunluğunda otuz arşın genişliğinde sütunlu bir eyvan yaptırdı. Eyvanın önünde sütunlarla desteklenmiş asma tavan vardı.
೬ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ, ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು. ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು.
7 Taht Eyvanı'nı, yani kararların verileceği Yargı Eyvanı'nı da yaptırdı. Bu eyvan da baştan aşağı sedir tahtalarıyla kaplıydı.
೭ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರ್ಮಾನ ಮಾಡುತ್ತಿದ್ದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳೂ ನೆಲದಿಂದ ಮಾಳಿಗೆಯ ವರೆಗೆ ದೇವದಾರು ಮರದ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು.
8 Eyvanın arkasında öbür avludaki kendi oturacağı saray da aynı biçimde yapılmıştı. Süleyman, karısı olan firavunun kızı için de bu eyvanın benzeri bir saray yaptırdı.
೮ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನ್ನ ವಾಸಕ್ಕಾಗಿ ಅರಮನೆಯನ್ನೂ, ತನ್ನ ಹೆಂಡತಿಯಾದ ಫರೋಹನ ಮಗಳಿಗೋಸ್ಕರ ಇನ್ನೊಂದು ಮನೆಯನ್ನು ಕಟ್ಟಿಸಿದನು. ಅದನ್ನು ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.
9 Dışarıdan büyük avluya, temelden çatıya kadar bütün bu yapılar kaliteli taşlarla yapılmıştı. Taşlar testereyle kesilmiş, ön ve arka yüzleri yontulmuş, belirli ölçülere göre hazırlanmıştı.
೯ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತು ಗೋಡೆಯನ್ನೂ, ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ, ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟ ಎರಡು ಮಗ್ಗುಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು.
10 Temeller sekiz ve on arşın uzunluğunda büyük, seçme taşlardan atılmıştı.
೧೦ಅಸ್ತಿವಾರಕ್ಕೆ ಹಾಕಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಮೊಳ ಹಾಗೂ ಹತ್ತು ಮೊಳ ಉದ್ದವಾಗಿದ್ದವು.
11 Üstlerinde belirli ölçülere göre kesilmiş kaliteli taşlar ve sedir kirişler vardı.
೧೧ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ, ದೇವದಾರಿನ ಮರವನ್ನೂ ಉಪಯೋಗಿಸಿದನು.
12 Büyük avlu üç sıra yontma taş ve bir sıra sedir kirişlerinden oluşan bir duvarla çevrilmişti. RAB'bin Tapınağı'nın iç avlusuyla eyvanın duvarları da aynı yapıdaydı.
೧೨ಒಳಗಿನ ಪ್ರಾಕಾರವೆನ್ನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ, ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.
13 Kral Süleyman haber gönderip Sur'dan Hiram'ı getirtti.
೧೩ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬುವನನ್ನು ಕರೆಯಿಸಿದನು.
14 Hiram'ın annesi Naftali oymağından dul bir kadın, babası ise Surlu bir tunç işçisiydi. Hiram tunç işlemede bilgili, deneyimli, usta biriydi. Gelip Kral Süleyman'ın bütün işlerini yaptı.
೧೪ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.
15 Hiram her birinin yüksekliği on sekiz arşın ve çevresi on iki arşın olan iki tunç sütun döktü.
೧೫ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ.
16 Sütunların üzerine koymak için beşer arşın yüksekliğinde dökme tunçtan iki sütun başlığı yaptı.
೧೬ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ,
17 Sütun başlıklarının her biri ağla kaplanmıştı. Ağın üzeri yedi sıra örgülü zincirle ve iki sıra nar motifiyle bezenmişti.
೧೭ಒಂದೊಂದಕ್ಕೆ ಏಳೇಳರಂತೆ ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು.
೧೮ಇದಲ್ಲದೆ ಅವನು ತಾಮ್ರದ ದಾಳಿಂಬೆಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.
19 Eyvanda bulunan dört arşın yüksekliğindeki sütun başlıkları da nilüfer biçimindeydi.
೧೯ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲದ ಆಕಾರ ಉಳ್ಳದ್ದಾಗಿತ್ತು.
20 Her iki sütun başlığında, örgülü ağa yakın çıkıntının yukarısında çepeçevre diziler halinde iki yüz nar motifi vardı.
೨೦ಆ ಕುಂಭಗಳ ಮೇಲಿರುವ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆ ಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು.
21 Hiram sütunları tapınağın eyvanına dikip sağdakine Yakin, soldakine Boaz adını verdi.
೨೧ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ, ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.
22 Sütun başlıkları nilüfer biçimindeydi. Böylece sütunların işi tamamlanmış oldu.
೨೨ಅವನು ಕಂಬಗಳ ಮೇಲೆ ಕಮಲಾಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು.
23 Hiram dökme tunçtan on arşın çapında, beş arşın derinliğinde, çevresi otuz arşın yuvarlak bir havuz yaptı.
೨೩ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.
24 Havuz, kenarlarının altındaki iki sıra sukabağı motifiyle birlikte dökülmüştü. Her arşında onar tane olan bu motifler havuzu çepeçevre kuşatıyordu.
೨೪ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕ ಹೊಯ್ದಿದ್ದನು.
25 Havuz üçü kuzeye, üçü batıya, üçü güneye, üçü de doğuya bakan on iki boğa heykeli üzerine oturtulmuştu. Boğaların sağrıları içe dönüktü.
೨೫ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ ಮತ್ತು ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗವು ಒಳಗಡೆ ಇತ್ತು.
26 Havuzun çeperi dört parmak kalınlığındaydı; kenarları kâse kenarlarını, nilüferleri andırıyordu. İki bin bat su alıyordu.
೨೬ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು.
27 Hiram her biri dört arşın uzunluğunda, dört arşın genişliğinde ve üç arşın yüksekliğinde on adet tunç ayaklık yaptı.
೨೭ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.
28 Ayaklıklar aynalıklarla döşenmiş, aynalıklar da çerçeve içine alınmıştı.
೨೮ಅವುಗಳನ್ನು ಮಾಡಿದ ವಿಧಾನ ಹೇಗೆಂದರೆ, ಅವುಗಳಲ್ಲಿ ನಿಲುವು ಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು.
29 Aynalıklar aslan, boğa, Keruv motifleriyle süslenmişti. Çerçeveler de böyleydi, yalnız aslanlarla boğaların üstünde ve altında sarkık çelenk işlemeleri vardı.
೨೯ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು.
30 Her bir ayaklığın dört tunç tekerleği ve dingilleri vardı. Dört köşeye de kazan için destekler yapılmıştı. Her dökme destek çelenklerle süslenmişti.
೩೦ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕ ಹೊಯ್ದ ತಾಮ್ರದ ಹಿಡಿಗಳಿದ್ದವು. ಅವು ಪೀಠದ ಮೇಲಣ ಗಂಗಾಳವನ್ನು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣ ಚಿತ್ರಗಳಿದ್ದವು.
31 Ayaklığın üst yüzeyinde kazan için bir arşın yüksekliğinde yuvarlak çerçeveli bir boşluk vardı. Boşluğun tabanı bir buçuk arşın genişliğindeydi. Çevresinde oymalar vardı. Ayaklıkların aynalıkları yuvarlak değil, kareydi.
೩೧ಗಂಗಾಳವನ್ನು ಇಡುವುದಕ್ಕೋಸ್ಕರ ಪೀಠದ ಮೇಲಣ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಈ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚೌಕಾಕಾರವಾಗಿದ್ದವು.
32 Aynalıkların altındaki dört tekerleğin dingilleri ayaklıklara bağlıydı. Her tekerleğin çapı bir buçuk arşındı.
೩೨ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ತಿರುಗೋಲು ಮತ್ತು ಪೀಠವು ಅಖಂಡವಾಗಿದ್ದವು. ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು.
33 Tekerlekler savaş arabalarının tekerlekleri gibiydi. Dingilleri, jantları, parmakları ve göbeklerinin hepsi dökümdü.
೩೩ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ ಇವುಗಳಿಗೆ ಸಂಬಂಧಪಟ್ಟ ತಿರುಗೋಲು ತಾಮ್ರದವುಗಳು.
34 Her ayaklığın dört köşesinde de kendinden dört destek vardı.
೩೪ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು.
35 Ayaklıkların üstünde yarım arşın yüksekliğinde yuvarlak birer halka vardı. Ayaklıkların başındaki dayanaklar ve yan aynalıklar da ayaklıklara bitişikti.
೩೫ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡ ಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು.
36 Hiram dayanakların ve aynalıklarının genişliği oranında her birinin yüzeyine Keruvlar, aslanlar, hurma ağaçları, çevrelerine de çelenkler oydu.
೩೬ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು.
37 Böylece on ayaklığı yaptı; hepsinin dökümü, ölçüsü ve biçimi aynıydı.
೩೭ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವು ಅಳತೆಯೂ ಒಂದೇಯಾಗಿತ್ತು.
38 Hiram ayrıca on ayaklığın üzerine oturan dörder arşın genişliğinde on tunç kazan yaptı. Her kazan kırk bat su alıyordu.
೩೮ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.
39 Ayaklıkların beşini tapınağın güneyine, beşini kuzeyine yerleştirdi. Havuzu ise tapınağın güneydoğu köşesine yerleştirdi.
೩೯ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ, ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.
40 Hiram kazanlar, kürekler, çanaklar yaptı. Böylece Kral Süleyman için üstlenmiş olduğu RAB'bin Tapınağı'yla ilgili bütün işleri tamamlamış oldu:
೪೦ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ.
41 İki sütun ve iki yuvarlak sütun başlığı, bu başlıkları süsleyen iki örgülü ağ,
೪೧ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು
42 Sütunların yuvarlak başlıklarını süsleyen iki örgülü ağın üzerini ikişer sıra halinde süsleyen dört yüz nar motifi,
೪೨ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,
43 On kazan ve ayaklıkları,
೪೩ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಾಳಗಳು,
44 Havuz ve havuzu taşıyan on iki boğa heykeli,
೪೪ಸಮುದ್ರವೆನಿಸಿಕೊಳ್ಳುವ ಪಾತ್ರೆಯೂ, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,
45 Kovalar, kürekler, çanaklar. Hiram'ın Kral Süleyman için RAB'bin Tapınağı'na yaptığı bütün bu eşyalar parlak tunçtandı.
೪೫ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು.
46 Kral bunları Şeria Ovası'nda, Sukkot ile Saretan arasındaki killi topraklarda döktürmüştü.
೪೬ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಮತ್ತು ಚಾರೆತಾನಿಗೂ ಮಧ್ಯದಲ್ಲಿರುವ ಜೇಡಿ ಮಣ್ಣು ಇರುವ ನೆಲದಲ್ಲಿ ಎರಕ ಹೊಯ್ಯಿಸಿದನು.
47 Eşyalar o kadar çoktu ki, Süleyman hepsini tartmadı. Kullanılan tuncun hesabı tutulmadı.
೪೭ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬುದನ್ನು ಗೊತ್ತುಮಾಡಲಾಗಲ್ಲಿಲ್ಲ.
48 Süleyman'ın RAB'bin Tapınağı için yaptırdığı altın eşyalar şunlardı: Sunak, ekmeklerin Tanrı'nın huzuruna konduğu masa,
೪೮ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,
49 İç odanın girişine, beşi sağa, beşi sola yerleştirilen saf altın kandillikler, çiçek süslemeleri, kandiller, maşalar,
೪೯ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ, ಬಲಗಡೆಯಲ್ಲಿಯೂ ಇಡುವುದಕ್ಕಾಗಿ ಐದೈದರಂತೆ ಇಡುವುದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆ, ಇಕ್ಕಳಗಳು, ಚೊಕ್ಕ ಬಂಗಾರದ ಬಟ್ಟಲುಗಳು,
50 Saf altın taslar, fitil maşaları, çanaklar, tabaklar, buhurdanlar. Tapınaktaki iç odanın, yani En Kutsal Yer'in ve ana bölümün kapı menteşeleri de altındandı.
೫೦ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ
51 RAB'bin Tapınağı'nın yapımı tamamlanınca Kral Süleyman, babası Davut'un adadığı altın, gümüş ve öbür eşyaları getirip tapınağın hazine odalarına yerleştirdi.
೫೧ಪರಿಶುದ್ಧಸ್ಥಳದ ಬಾಗಿಲುಗಳಿಗೂ ಇರುವ ಬಂಗಾರದ ತಿರುಗುಣಿಗಳು ಇವುಗಳೇ. ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಮತ್ತು ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.