< 2 Korintliler 10 >

1 Sizinle birlikteyken ürkek, ama aranızda değilken yiğit kesilen ben Pavlus, Mesih'teki alçakgönüllülük ve yumuşaklıkla size rica ediyor, yalvarıyorum: Yanınıza geldiğim zaman, bizi olağan insanlar gibi yaşayanlardan sayan bazılarına karşı güvenle takınmak niyetinde olduğum tavrı aynı cesaretle size karşı takınmaya zorlamayın beni.
ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,
2
ಯಾರು ನಮ್ಮನ್ನು ಲೋಕ ರೀತಿಯಾಗಿ ಜೀವಿಸುವವರೆಂದು ಎಣಿಸುತ್ತಾರೋ ಅವರೊಂದಿಗೆ ದಿಟ್ಟತನದಿಂದಲೇ ಇರಬೇಕೆಂದು ಅಂದುಕೊಂಡಿದೇನೆ. ನಾವು ನಿಮ್ಮೊಂದಿಗಿರುವಾಗ ಅಂಥ ದಿಟ್ಟತನವನ್ನು ತೋರಿಸುವುದಕ್ಕೆ ಅವಕಾಶವುಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
3 Olağan insanlar gibi yaşıyorsak da, insansal güce dayanarak savaşmıyoruz.
ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.
4 Çünkü savaşımızın silahları insansal silahlar değil, kaleleri yıkan tanrısal güce sahip silahlardır.
ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.
5 Safsataları, Tanrı bilgisine karşı diklenen her engeli yıkıyor, her düşünceyi tutsak edip Mesih'e bağımlı kılıyoruz.
ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,
6 Mesih'e tümüyle bağımlı olduğunuz zaman, O'na bağımlı olmayan her eylemi cezalandırmaya hazır olacağız.
ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಪ್ರತಿಕಾರವನ್ನು ನೀಡುವುದಕ್ಕೆ ಸಿದ್ಧರಾಗಿದ್ದೇವೆ.
7 Gözünüzün önündekine bakın. Bir kimse Mesih'e ait olduğuna güveniyorsa, yine düşünsün: Kendisi kadar biz de Mesih'e aitiz.
ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.
8 Sizi yıkmak için değil, geliştirmek için Rab'bin bize verdiği yetkiyle biraz fazla övünsem de utanmam.
ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು.
9 Mektuplarımla sizi korkutmaya çalışıyormuş gibi görünmek istemiyorum.
ನಾನು ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುತ್ತಿದ್ದೆನೆಂದು ತಿಳಿದುಕೊಳ್ಳಬೇಡಿರಿ.
10 Çünkü bazıları, “Mektupları ağır ve etkilidir, ama kişisel varlığı etkisiz, konuşma yeteneği de sıfır” diyormuş.
೧೦“ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”
11 Böyle diyenler şunu bilsin ki, uzaktayken mektuplarımızda ne diyorsak, aranızdayken de öyle davranıyoruz.
೧೧ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳಿದುಕೊಳ್ಳಲಿ.
12 Kendilerini tavsiye eden bazılarıyla kendimizi bir tutmaya ya da karşılaştırmaya elbette cesaret edemeyiz! Onlar kendilerini kendileriyle ölçüp karşılaştırmakla akılsızlık ediyorlar.
೧೨ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವುದಕ್ಕಾಗಲಿ ಅವರೊಂದಿಗೆ ಹೋಲಿಸುವುದಕ್ಕಾಗಲಿ ನಾನು ಇಷ್ಟಪಡುವುದಿಲ್ಲ. ಅವರಂತೂ ತಮ್ಮತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮ್ಮನ್ನು ತಮಗೇ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.
13 Ama biz haddimizi aşıp fazla övünmeyiz; övünmemiz, Tanrı'nın bizim için belirlediği, sizlere kadar da uzanan alanın sınırları içinde kalır.
೧೩ನಾವಾದರೋ ನಮ್ಮ ಯೋಗ್ಯತೆಗೆ ಮೀರಿ ಹೊಗಳಿಕೊಳ್ಳದೇ ದೇವರು ನಮಗೆ ನೇಮಿಸಿರುವಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ತನಕ ಬಂದಿದ್ದೇವೆ.
14 Etkinlik alanımız size kadar uzanmasaydı, sizinle ilgilenmekle sınırlarımızın dışına çıkmış sayılabilirdik. Oysa Mesih'in Müjdesi'ni size kadar ilk ulaştıran biz olduk.
೧೪ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು ನಿಮ್ಮ ಬಳಿಗೆ ಬಂದದ್ದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರಮಿಸಿಹೋಗುತ್ತಿಲ್ಲ.
15 Başkalarının emeğiyle övünüp haddimizi aşmayız. Umudumuz odur ki, sizin imanınız büyüdükçe sayenizde etkinlik alanımız alabildiğine genişleyecek.
೧೫ನಾವು ಮಿತಿಗಳನ್ನು ಮೀರಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತೆಗೆದುಕೊಂಡು, ಇವು ನಮ್ಮವು ಎಂದು ಹಿಗ್ಗುವವರಲ್ಲ. ಆದರೆ ನಿಮ್ಮ ನಂಬಿಕೆಯು ಹೆಚ್ಚಿದಾಗೆಲ್ಲಾ ನಿಮ್ಮ ಮೂಲಕ ನಮ್ಮ ಮಿತಿಯು ಇನ್ನೂ ವಿಸ್ತರಿಸಿತು.
16 Böylelikle Müjde'yi sizlerden daha ötelere yayabileceğiz. Çünkü başkasının etkinlik alanında başarılmış işlerle övünmek istemiyoruz.
೧೬ನಿಮಗೆ ಆಚೆಯಿರುವ ಸೀಮೆಗಳಲ್ಲಿಯೂ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆಯನ್ನಿಟ್ಟುಕೊಂಡಿದ್ದೆವಷ್ಟೇ. ಮತ್ತೊಬ್ಬರ ಜಾಗದಲ್ಲಿ ಸಿದ್ಧವಾಗಿ ನಮಗೆ ಸಿಕ್ಕಿದ ಫಲವನ್ನು ಕುರಿತು ನಾವು ಹೆಚ್ಚಳಪಡುವುದಿಲ್ಲ.
17 “Övünen, Rab'le övünsün.”
೧೭“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.”
18 Kabule değer kişi kendi kendini tavsiye eden değil, Rab'bin tavsiye ettiği kişidir.
೧೮ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.

< 2 Korintliler 10 >