< 2 Krallar 11 >
1 Ahazya'nın annesi Atalya, oğlunun öldürüldüğünü duyunca, kral soyunun bütün bireylerini yok etmeye çalıştı.
೧ಅಹಜ್ಯನು ಮರಣಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಪಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.
2 Ne var ki, Kral Yehoram'ın kızı, Ahazya'nın üvey kızkardeşi Yehoşeva, Ahazya oğlu Yoaş'ı kralın öldürülmek istenen öteki oğullarının arasından alıp kaçırdı ve dadısıyla birlikte yatak odasına gizledi. Çocuğu Atalya'dan gizleyerek kurtarmış oldu.
೨ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು
3 Atalya ülkeyi yönetirken, çocuk altı yıl boyunca RAB'bin Tapınağı'nda dadısıyla birlikte gizlendi.
೩ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.
4 Yedinci yıl Yehoyada haber gönderip Karyalılar'ın ve muhafızların yüzbaşılarını çağırttı. Onları RAB'bin Tapınağı'nda toplayarak onlarla bir antlaşma yaptı. Hepsine RAB'bin Tapınağı'nda ant içirdikten sonra kralın oğlu Yoaş'ı kendilerine gösterdi.
೪ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.
5 Onlara şu buyrukları verdi: “Şabat Günü göreve gidenlerin üçte biri kral sarayını koruyacak,
೫ಯೆಹೋಯಾದಾವನು ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ರಾಜರ ಅರಮನೆಯನ್ನು ಕಾಯಬೇಕು,
6 üçte biri Sur Kapısı'nda, üçte biri de muhafızların arkasındaki kapıda bulunacak. Sırayla tapınak nöbeti tutacaksınız.
೬ಮೂರರಲ್ಲೊಂದು ಭಾಗವು ಸೂರ್ ಬಾಗಿಲಿನಲ್ಲಿಯೂ, ಮತ್ತೊಂದು ಭಾಗವು ಕಾವಲುದಂಡಿನ ಹಿಂದಿನ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.
7 Şabat Günü görevleri biten öbür iki bölükteki askerlerin tümü RAB'bin Tapınağı'nın çevresinde durup kralı koruyacak.
೭ಇದಲ್ಲದೆ, ಸಬ್ಬತ್ ದಿನದಲ್ಲಿ ಅರಸನೊಂದಿಗೆ ಯೆಹೋವನ ಆಲಯವನ್ನು ಕಾಯುವುದಕ್ಕಾಗಿ ಬರುವ ಸೈನ್ಯವು ಇಬ್ಬಗೆಯಾಗಿದ್ದುಕೊಂಡು ಯೆಹೋವನ ಆಲಯವನ್ನು ಕಾಯಬೇಕು.
8 Herkes yalın kılıç kralın çevresini sarsın, yaklaşan olursa öldürün. Kral nereye giderse, ona eşlik edin.”
೮ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು.
9 Yüzbaşılar Kâhin Yehoyada'nın buyruklarını tam tamına uyguladılar. Şabat Günü göreve gidenlerle görevi biten adamlarını alıp Yehoyada'nın yanına gittiler.
೯ಯಾಜಕನಾದ ಯೆಹೋಯಾದಾಮನು ಆಜ್ಞಾಪಿಸಿದಂತೆ, ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ರಾಜಪುತ್ರನ ಬಳಿಗೆ ಬಂದರು.
10 Kâhin RAB'bin Tapınağı'ndaki Kral Davut'tan kalan mızraklarla kalkanları yüzbaşılara dağıttı.
೧೦ಯಾಜಕನಾದ ಯೆಹೋಯಾದಾವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ರಾಜನಾದ ದಾವೀದನ ಬರ್ಜಿಯನ್ನೂ, ಗುರಾಣಿಗಳನ್ನೂ ಕೊಟ್ಟನು.
11 Kralı korumak için sunağın ve tapınağın çevresine tapınağın güneyinden kuzeyine kadar silahlı muhafızlar yerleştirildi.
೧೧ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕೋಸ್ಕರ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು.
12 Yehoyada kralın oğlu Yoaş'ı dışarı çıkarıp başına taç koydu. Tanrı'nın Yasası'nı da ona verip krallığını ilan ettiler. Onu meshedip alkışlayarak, “Yaşasın kral!” diye bağırdılar.
೧೨ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.
13 Atalya muhafızlarla halkın çıkardığı gürültüyü duyunca, RAB'bin Tapınağı'nda toplananların yanına gitti.
೧೩ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ ಅವರು ಸೇರಿ ಬಂದಿದ್ದ ಯೆಹೋವನ ಆಲಯಕ್ಕೆ ಬಂದಳು.
14 Baktı, kral geleneğe uygun olarak sütunun yanında duruyor; yüzbaşılar, borazan çalanlar çevresine toplanmış. Ülke halkı sevinç içindeydi, borazanlar çalınıyordu. Atalya giysilerini yırtarak, “Hainlik! Hainlik!” diye bağırdı.
೧೪ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
15 Kâhin Yehoyada yüzbaşılara, “O kadını aradan çıkarın. Ardından kim giderse kılıçtan geçirin” diye buyruk verdi. Çünkü kadının RAB'bin Tapınağı'nda öldürülmesini istemiyordu.
೧೫ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.
16 Atalya yakalandı ve sarayın At Kapısı'na götürülüp öldürüldü.
೧೬ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು.
17 Yehoyada RAB'bin halkı olmaları için RAB ile kral ve halk arasında bir antlaşma yaptı. Ayrıca halkla kral arasında da bir antlaşma yaptı.
೧೭ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.
18 Ülke halkı gidip Baal'ın tapınağını yıktı. Sunaklarını, putlarını parçaladılar; Baal'ın Kâhini Mattan'ı da sunakların önünde öldürdüler. Kâhin Yehoyada RAB'bin Tapınağı'na nöbetçiler yerleştirdi.
೧೮ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.
19 Sonra yüzbaşıları, Karyalılar'ı, muhafızları ve halkı yanına aldı. Kralı RAB'bin Tapınağı'ndan getirdiler. Muhafızlar Kapısı'ndan geçerek sarayına götürdüler, kral tahtına oturttular.
೧೯ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
20 Ülke halkı sevinç içindeydi, ancak kent suskundu. Çünkü Atalya sarayda kılıçla öldürülmüştü.
೨೦ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿ ನೆಲೆಸಿತು. ಅತಲ್ಯಳನ್ನು ರಾಜನ ಅರಮನೆಯ ಸಮೀಪದಲ್ಲಿ ಕತ್ತಿಯಿಂದ ಸಂಹರಿಸಿದರು.
೨೧ಯೆಹೋವಾಷನು ಅರಸನಾದಾಗ ಅವನು ಏಳು ವರ್ಷದವನಾಗಿದ್ದನು.