< Ezra 3 >
1 İsrailliler kendi kentlerine yerleştikten sonra, yedinci ay Yeruşalim'de tek vücut halinde toplandılar.
೧ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.
2 Yosadak oğlu Yeşu ve kâhin olan kardeşleri, Şealtiel oğlu Zerubbabil'le kardeşleri İsrail'in Tanrısı'nın sunağını yeniden kurdular. Amaçları, Tanrı adamı Musa'nın yasası uyarınca, sunağın üzerinde yakmalık sunular sunmaktı.
೨ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.
3 Çevrelerinde yaşayan halklardan korkmalarına karşın, sunağı eski temeli üzerine yeniden kurdular. Üzerinde RAB'be sabah, akşam öngörülen yakmalık sunuları sundular.
೩ಅವರು ಸುತ್ತಣ ಪ್ರಾಂತ್ಯಗಳ ಜನರಿಗೆ ಹೆದರಿಕೊಂಡಿದ್ದರಿಂದ ವೇದಿಯನ್ನು ಅದರ ಸ್ಥಳದಲ್ಲಿ ಕಟ್ಟಿ, ಅದರ ಮೇಲೆ ಯೆಹೋವನಿಗೋಸ್ಕರ ಮುಂಜಾನೆಯ ಹಾಗು ಸಾಯಂಕಾಲಗಳ ಸರ್ವಾಂಗಹೋಮಗಳನ್ನು ಅರ್ಪಿಸಿದರು.
4 Sonra yazılanlara uygun biçimde Çardak Bayramı'nı kutladılar. Kural uyarınca, her gün için belirlenen sayıya göre, yakmalık sunuları sundular.
೪ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.
5 Bundan sonra da günlük yakmalık sunuyu, Yeni Ay sunularını, RAB'bin belirlediği bütün kutsal bayramların sunularını ve RAB'be gönülden verilen sunuları sundular.
೫ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.
6 RAB'bin Tapınağı'nın temeli henüz atılmadığı halde, yedinci ayın birinci günü RAB'be yakmalık sunular sunmaya başladılar.
೬ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸತೊಡಗಿದರು. ಆಗ ಯೆಹೋವನ ಆಲಯದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.
7 İsrailliler taşçılarla marangozlara para ödediler. Ayrıca sedir tomruklarını Lübnan'dan denize indirerek Yafa'ya getirmeleri için Saydalılar'a ve Surlular'a yiyecek, içecek, zeytinyağı sağladılar. Bütün bunlara Pers Kralı Koreş izin vermişti.
೭ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.
8 Tanrı'nın Yeruşalim'deki Tapınağı'na vardıktan sonra, ikinci yılın ikinci ayında Şealtiel oğlu Zerubbabil, Yosadak oğlu Yeşu ve bütün öteki kardeşleri, kâhinler, Levililer ve sürgünden Yeruşalim'e dönenlerin tümü işe başladılar. RAB'bin Tapınağı'nın yapımını denetlemek için yirmi ve daha yukarı yaştaki Levililer'i görevlendirdiler.
೮ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.
9 Levililer'den Yeşu, oğulları ve kardeşleri, Yahuda soyundan Kadmiel ile oğulları, Henadat'ın oğullarıyla torunları Tanrı'nın Tapınağı'nın yapımında çalışanları denetleme işini hep birlikte yüklendiler.
೯ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು ಅವನ ಮಕ್ಕಳು ಮತ್ತು ಸಹೋದರರು, ಕದ್ಮೀಯೇಲನು ಮತ್ತು ಅವನ ಮಕ್ಕಳು, ಹೇನಾದಾದನ ಮಕ್ಕಳು ಅವರ ಮಕ್ಕಳು ಮತ್ತು ಬಂಧುಗಳು ಇವರೆಲ್ಲರೂ ಕೂಡಿಕೊಂಡು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.
10 Yapıcılar RAB'bin Tapınağı'nın temelini atınca, İsrail Kralı Davut'un kuralı uyarınca kâhinler RAB'bi övmek için tören giysilerini giymiş olarak ellerinde borazanlarla, Levili Asafoğulları da zillerle yerlerini aldılar.
೧೦ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲರ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಸ್ತುತಿಸಿ ಕೀರ್ತಿಸುವುದಕ್ಕೋಸ್ಕರ ಯಾಜಕರು ತಮ್ಮ ದೀಕ್ಷಾವಸ್ತ್ರಗಳಿಂದ ಭೂಷಿತರಾಗಿ ತುತ್ತೂರಿಗಳೊಡನೆಯೂ, ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡರು.
11 RAB'be övgüler, şükranlar sunarak ezgi okudular: “RAB iyidir; İsrail'e sevgisi sonsuzdur.” RAB'bin Tapınağı'nın temeli atıldığı için herkes yüksek sesle RAB'bi övmeye başladı.
೧೧ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.
12 Eski tapınağı görmüş birçok yaşlı kâhin, Levili ve boy başı tapınağın temelinin atıldığını görünce hıçkıra hıçkıra ağladılar. Birçokları da sevinç çığlıkları attı.
೧೨ಆದರೆ ಯಾಜಕರಲ್ಲಿಯೂ, ಲೇವಿಯರಲ್ಲಿಯೂ, ಗೋತ್ರಪ್ರಧಾನರಲ್ಲಿಯೂ ಅನೇಕರು ಅಂದರೆ ಮೊದಲಿನ ದೇವಾಲಯವನ್ನು ನೋಡಿದ್ದ ಹಿರಿಯರು ತಮ್ಮ ಕಣ್ಣ ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಟ್ಟಿದ್ದನ್ನು ನೋಡಿದಾಗ ಬಹಳವಾಗಿ ಅತ್ತರು. ಬೇರೆ ಹಲವರು ಹರ್ಷಧ್ವನಿಯಿಂದ ಜಯಘೋಷ ಮಾಡಿದರು.
13 Sevinç çığlıkları ağlama sesinden ayırt edilemiyordu. Çünkü halk avaz avaz bağırıyordu. Ses uzak yerlerden bile duyuluyordu.
೧೩ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು.