< Galatyalilar 1 >

1 İnsanlarca ya da insan aracılığıyla değil, İsa Mesih ve O'nu ölümden dirilten Baba Tanrı aracılığıyla elçi atanan ben Pavlus'tan ve benimle birlikte olan bütün kardeşlerden Galatya'daki kiliselere selam!
ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ
2
ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ,
3 Babamız Tanrı'dan ve Rab İsa Mesih'ten sizlere lütuf ve esenlik olsun.
ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
4 Mesih, Babamız Tanrı'nın isteğine uyarak bizi şimdiki kötü çağdan kurtarmak için günahlarımıza karşılık kendini feda etti. (aiōn g165)
ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. (aiōn g165)
5 Tanrı'ya sonsuzlara dek yücelik olsun! Amin. (aiōn g165)
ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್. (aiōn g165)
6 Sizi Mesih'in lütfuyla çağıranı bırakıp değişik bir müjdeye böylesine çarçabuk dönmenize şaşıyorum.
ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.
7 Gerçekte başka bir müjde yoktur. Ancak aklınızı karıştırıp Mesih'in Müjdesi'ni çarpıtmak isteyenler vardır.
ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.
8 İster biz, ister gökten bir melek size bildirdiğimize ters düşen bir müjde bildirirse, lanet olsun ona!
ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
9 Daha önce söylediğimizi şimdi yine söylüyorum: Bir kimse size kabul ettiğinize ters düşen bir müjde bildirirse, ona lanet olsun!
ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.
10 Şimdi ben insanların onayını mı, Tanrı'nın onayını mı arıyorum? Yoksa insanları mı hoşnut etmeye çalışıyorum? Eğer hâlâ insanları hoşnut etmek isteseydim, Mesih'in kulu olmazdım.
೧೦ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.
11 Kardeşlerim, yaydığım Müjde'nin insandan kaynaklanmadığını bilmenizi istiyorum.
೧೧ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.
12 Çünkü ben onu insandan almadım, kimseden de öğrenmedim. Bunu bana İsa Mesih vahiy yoluyla açıkladı.
೧೨ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.
13 Yahudi dinine bağlı olduğum zaman nasıl bir yaşam sürdüğümü duydunuz. Tanrı'nın kilisesine alabildiğine zulmediyor, onu kırıp geçiriyordum.
೧೩ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
14 Yahudi dininde yaşıtım olan soydaşlarımın birçoğundan daha ilerideydim, atalarımın geleneklerini savunmakta çok daha gayretliydim.
೧೪ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.
15 Ama beni daha annemin rahmindeyken seçip lütfuyla çağıran Tanrı, uluslara müjdelemem için Oğlu'nu bana göstermeye razı olunca hemen insanlara danışmadım;
೧೫ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,
೧೬ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,
17 Yeruşalim'e, benden önce elçi olanların yanına da gitmedim; Arabistan'a gittim, sonra yine Şam'a döndüm.
೧೭ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು.
18 Bundan üç yıl sonra Kefas'la tanışmak üzere Yeruşalim'e gittim, on beş gün onun yanında kaldım.
೧೮ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.
19 Öbür elçilerden hiçbirini görmedim, yalnız Rab İsa'nın kardeşi Yakup'u gördüm.
೧೯ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
20 Bakın, size yazdıklarımın yalan olmadığını Tanrı'nın önünde belirtiyorum.
೨೦ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ.
21 Sonra Suriye ve Kilikya bölgelerine gittim.
೨೧ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.
22 Yahudiye'nin Mesih'e ait kiliseleri beni şahsen tanımıyorlardı.
೨೨ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.
23 Yalnız, “Bir zamanlar bize zulmeden adam, önceleri yıkmaya çalıştığı imanı şimdi yayıyor” dendiğini duymuşlardı.
೨೩“ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,
24 Böylece benden ötürü Tanrı'yı yüceltiyorlardı.
೨೪ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.

< Galatyalilar 1 >