< Yeremya 45 >
1 Yahuda Kralı Yoşiya oğlu Yehoyakim'in dördüncü yılında Neriya oğlu Baruk, Peygamber Yeremya'nın kendisine söylediği sözleri tomara yazdıktan sonra Yeremya ona şunları söyledi:
೧ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.
2 “Ey Baruk, İsrail'in Tanrısı RAB sana şöyle diyor:
೨“ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, ‘ನನ್ನ ಗತಿಯನ್ನು ಏನು ಹೇಳಲಿ?
3 Sen, ‘Vay başıma! Çünkü RAB acıma acı kattı. İnlemekten bitkin düştüm, bana rahat yok’ dedin.
೩ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ,
4 “RAB bana, ‘Ona şöyle diyeceksin’ dedi: ‘RAB diyor ki, bütün ülkeyi yıkacağım; bina ettiğimi yıkacak, diktiğimi sökeceğim.
೪ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.
5 Sana gelince, büyük şeyler peşinde mi koşuyorsun? Sakın koşma! Çünkü bütün halkın üzerine felaket getirmek üzereyim’ diyor RAB, ‘Ama sen nereye gidersen git, canını bağışlayacağım.’”
೫ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”