< Yeremya 5 >
1 “Yeruşalim sokaklarında dolaşın, Çevrenize bakıp düşünün, Kent meydanlarını araştırın. Eğer adil davranan, Gerçeği arayan bir kişi bulursanız, Bu kenti bağışlayacağım.
೧ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.
2 ‘RAB'bin varlığı hakkı için’ deseler de, Aslında yalan yere ant içiyorlar.”
೨ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.
3 Ya RAB, gözlerin gerçeği arıyor. Onları vurdun, ama incinmediler, Onları yiyip bitirdin, Ama yola gelmeyi reddettiler. Yüzlerini kayadan çok sertleştirdiler, Geri dönmek istemediler.
೩ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.
4 “Bunlar sadece yoksul kişiler, Akılsızlar” dedim, “Çünkü RAB'bin yolunu, Tanrıları'nın buyruklarını bilmiyorlar.
೪ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;
5 Büyüklere gidip onlarla konuşayım. RAB'bin yolunu, Tanrıları'nın buyruklarını bilirler kuşkusuz.” Gelgelelim onlar da boyunduruğu kırmış, Bağları koparmıştı.
೫ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.
6 Bu yüzden ormandan bir aslan çıkıp onlara saldıracak, Çölden gelen bir kurt onları parça parça edecek, Bir pars kentlerinin önünde pusu kuracak, Oradan çıkan herkes parçalanacak. Çünkü isyanları çok, Döneklikleri sayısızdır.
೬ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.
7 “Yaptıklarından ötürü neden bağışlayayım seni? Çocukların beni terk etti, Tanrı olmayan ilahların adıyla ant içtiler. Onları doyurduğumda zina ettiler, Fahişelerin evlerine doluştular.
೭ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.
8 Şehvet düşkünü, besili aygırlar! Her biri komşusunun karısına kişniyor.
೮ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು.
9 Bu yüzden onları cezalandırmayayım mı?” diyor RAB, “Böyle bir ulustan öcümü almayayım mı?
೯ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.
10 “Bağlarını dolaşıp Asmalarını kesin, Ama büsbütün yok etmeyin. Dallarını koparıp atın, Çünkü onlar RAB'be ait değil.
೧೦“ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.
11 İsrail ve Yahuda halkı Bana sürekli ihanet etti” diyor RAB.
೧೧ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ.
12 RAB için yalan söyleyerek, “O bir şey yapmaz. Felaket bize uğramayacak, Kılıç da kıtlık da görmeyeceğiz” dediler.
೧೨ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;
13 Peygamberler lafebesidir, Tanrı'nın sözü onlarda değil. Onlara böyle yapılacak.
೧೩ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯು ಅವರಲ್ಲಿಲ್ಲ; ಅವರಿಗೆ ಹೀಗೆಯೇ ಆಗಲಿ’” ಅಂದುಕೊಂಡಿದ್ದಾರೆ.
14 Bu yüzden, Her Şeye Egemen RAB Tanrı diyor ki, “Madem böyle şeyler konuşuyorsunuz, Ben de sözümü ağzınıza ateş, Bu halkı da odun edeceğim; Ateş onları yakıp yok edecek.
೧೪ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.
15 Ey İsrail halkı, Uzaktan gelecek bir ulusu Üzerinize saldırtacağım” diyor RAB, “Köklü, eski bir ulus; Sen onların dilini bilmez, Ne dediklerini anlamazsın.
೧೫ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.
16 Oklarının kılıfı açık bir mezar gibidir, Hepsi birer yiğittir.
೧೬ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ.
17 Ürününü, yiyeceklerini tüketecek, Oğullarını, kızlarını öldürecekler; Davarlarını, sığırlarını, Asmalarının, incir ağaçlarının meyvesini yiyecek, Güvendiğin surlu kentlerini Kılıçla yerle bir edecekler.
೧೭ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.
18 “Ama o günlerde bile sizi büsbütün yok etmeyeceğim” diyor RAB.
೧೮ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ” ಎಂದು ಹೇಳುತ್ತಾನೆ.
19 “‘Tanrımız RAB neden bize bütün bunları yaptı?’ diye sorduklarında, şöyle yanıtlayacaksın: ‘Beni nasıl bıraktınız, ülkenizde yabancı ilahlara nasıl kulluk ettinizse, siz de kendinize ait olmayan bir ülkede yabancılara öyle kulluk edeceksiniz.’
೧೯“ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.
20 “Yakup soyuna bildirin, Yahuda halkına duyurun:
೨೦ಯಾಕೋಬನ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ,
21 Ey gözleri olan ama görmeyen, Kulakları olan ama işitmeyen, Sağduyudan yoksun akılsız halk, Şunu dinle:
೨೧ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,
22 Benden korkman gerekmez mi?” diyor RAB, “Huzurumda titremen gerekmez mi? Ben ki, sonsuza dek geçerli bir kuralla Denize sınır olarak kumu koydum. Deniz sınırı geçemez; Dalgalar kabarsa da üstün gelemez, Kükrese de sınırı aşamaz.
೨೨ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.
23 Ama bu halkın yüreği asi ve inatçı. Sapmışlar, kendi yollarına gitmişler.
೨೩ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.
24 İçlerinden, ‘İlk ve son yağmurları zamanında yağdıran, Belli ürün biçme haftalarını bizim için koruyan Tanrımız RAB'den korkalım’ demiyorlar.
೨೪“ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.
25 Bunları uzaklaştıran suçlarınızdı, Bu iyilikten sizi yoksun bırakan günahlarınızdı.
೨೫ನಿಮ್ಮ ಅಪರಾಧಗಳು ನಿಮಗಾಗುವ ಪ್ರಯೋಜನಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ.
26 “Halkım arasında kötü kişiler var. Kuş avlamak için pusuya yatanlar gibi Tuzak kuruyor, insan yakalıyorlar.
೨೬ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.
27 Kuş dolu bir kafes nasılsa, Onların evleri de hileyle dolu. Bu sayede güçlenip zengin oldular,
೨೭ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ.
28 Semirip parladılar, Yaptıkları kötülüklerle sınırı aştılar. Kazanabilecekleri halde öksüzün davasına bakmıyor, Yoksulun hakkını savunmuyorlar.
೨೮ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.
29 Bu yüzden onları cezalandırmayayım mı?” diyor RAB, “Böyle bir ulustan öcümü almayayım mı?
೨೯ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.
30 “Ülkede korkunç, dehşet verici bir şey oldu:
೩೦ಭೀಕರವೂ, ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ;
31 Peygamberler yalan peygamberlik ediyor, Halkı başına buyruk kâhinler yönetiyor, Halkım da bunu benimsiyor. Ama bunun sonunda ne yapacaksınız?”
೩೧ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?