< Yuhanna 11 >
1 Meryem ile kızkardeşi Marta'nın köyü olan Beytanya'dan Lazar adında bir adam hastalanmıştı.
ಮರಿಯಳ ಮತ್ತು ಆಕೆಯ ಸಹೋದರಿಯಾದ ಮಾರ್ಥಳ ಊರಾದ ಬೇಥಾನ್ಯದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
2 Meryem, Rab'be güzel kokulu yağ sürüp saçlarıyla O'nun ayaklarını silen kadındı. Hasta Lazar ise Meryem'in kardeşiydi.
ಯೇಸುಸ್ವಾಮಿಯ ಪಾದಗಳಿಗೆ ತೈಲವನ್ನು ಹಚ್ಚಿ ತನ್ನ ತಲೆಕೂದಲಿನಿಂದ ಅವರ ಪಾದಗಳನ್ನು ಒರಸಿದ ಮರಿಯಳ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.
3 İki kızkardeş İsa'ya, “Rab, sevdiğin kişi hasta” diye haber gönderdiler.
ಆದ್ದರಿಂದ ಅವನ ಸಹೋದರಿಯರು, “ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ,” ಎಂದು ಯೇಸುವಿಗೆ ಹೇಳಿ ಕಳುಹಿಸಿದರು.
4 İsa bunu işitince, “Bu hastalık ölümle sonuçlanmayacak; Tanrı'nın yüceliğine, Tanrı Oğlu'nun yüceltilmesine hizmet edecek” dedi.
ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.
5 İsa Marta'yı, kızkardeşini ve Lazar'ı severdi.
ಮಾರ್ಥಳನ್ನು ಅವಳ ಸಹೋದರಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದರು.
6 Bu nedenle, Lazar'ın hasta olduğunu duyunca bulunduğu yerde iki gün daha kaldıktan sonra öğrencilere, “Yahudiye'ye dönelim” dedi.
ಅವನು ಅಸ್ವಸ್ಥನಾಗಿದ್ದಾನೆಂದು ಯೇಸು ಕೇಳಿದ ಮೇಲೆಯೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡರು.
ತರುವಾಯ ಯೇಸು ತಮ್ಮ ಶಿಷ್ಯರಿಗೆ, “ನಾವು ತಿರುಗಿ ಯೂದಾಯಕ್ಕೆ ಹೋಗೋಣ,” ಎಂದರು.
8 Öğrenciler, “Rabbî” dediler, “Yahudi yetkililer demin seni taşlamaya kalkıştılar. Yine oraya mı gidiyorsun?”
ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು.
9 İsa şu karşılığı verdi: “Günün on iki saati yok mu? Gündüz yürüyen sendelemez. Çünkü bu dünyanın ışığını görür.
ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾರಾದರೂ ಹಗಲಿನಲ್ಲಿ ನಡೆದರೆ ಎಡವುದಿಲ್ಲ ಏಕೆಂದರೆ ಈ ಲೋಕದ ಬೆಳಕು ಅವರಿಗೆ ಕಾಣಿಸುತ್ತದೆ.
10 Oysa gece yürüyen sendeler. Çünkü kendisinde ışık yoktur.”
ಯಾರಾದರೂ ರಾತ್ರಿಯಲ್ಲಿ ನಡೆದರೆ ತಮ್ಮಲ್ಲಿ ಬೆಳಕಿಲ್ಲದಿರುವುದರಿಂದ ಅವರು ಎಡವುತ್ತಾರೆ,” ಎಂದು ಉತ್ತರಕೊಟ್ಟರು.
11 Bu sözleri söyledikten sonra, “Dostumuz Lazar uyudu” diye ekledi, “Onu uyandırmaya gidiyorum.”
ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು.
12 Öğrenciler, “Ya Rab” dediler, “Uyuduysa iyileşecektir.”
ಯೇಸುವಿನ ಶಿಷ್ಯರು, “ಸ್ವಾಮೀ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು,” ಎಂದರು.
13 İsa Lazar'ın ölümünden söz ediyordu, ama onlar olağan uykudan söz ettiğini sanmışlardı.
ಯೇಸು ಅವನ ಮರಣವನ್ನು ಕುರಿತು ಹೇಳಿದ್ದರು. ಆದರೆ ಶಿಷ್ಯರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಯೇಸು ಹೇಳಿದರೆಂದು ಯೋಚಿಸಿದರು.
14 Bunun üzerine İsa açıkça, “Lazar öldü” dedi.
ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತುಹೋಗಿದ್ದಾನೆ.
15 “İman edesiniz diye, orada bulunmadığıma sizin için seviniyorum. Şimdi onun yanına gidelim.”
ಆದರೆ ನಾನು ಅಲ್ಲಿ ಇಲ್ಲದೆ ಹೋದದ್ದು ನಿಮ್ಮ ನಿಮಿತ್ತವಾಗಿ ಸಂತೋಷಪಡುತ್ತೇನೆ, ಯಾಕೆಂದರೆ ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಆದರೆ ಅವನ ಬಳಿಗೆ ಹೋಗೋಣ,” ಎಂದು ಹೇಳಿದರು.
16 “İkiz” diye anılan Tomas öbür öğrencilere, “Biz de gidelim, O'nunla birlikte ölelim!” dedi.
ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಗುರುವಿನೊಂದಿಗೆ ಸಾಯುವುದಕ್ಕೆ ಹೋಗೋಣ,” ಎಂದನು.
17 İsa Beytanya'ya yaklaşınca Lazar'ın dört gündür mezarda olduğunu öğrendi.
ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದವೆಂದು ತಿಳಿಯಿತು.
18 Beytanya, Yeruşalim'e on beş ok atımı kadar uzaklıktaydı.
ಬೇಥಾನ್ಯವು ಯೆರೂಸಲೇಮಿನಿಂದ ಸುಮಾರು ಮೂರು ಕಿಲೋಮೀಟರಿನಷ್ಟು ದೂರವಿತ್ತು.
19 Birçok Yahudi, kardeşlerini yitiren Marta'yla Meryem'i avutmaya gelmişti.
ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು.
20 Marta İsa'nın geldiğini duyunca O'nu karşılamaya çıktı, Meryem ise evde kaldı.
ಯೇಸು ಬರುತ್ತಿದ್ದಾರೆಂದು ಮಾರ್ಥಳು ಕೇಳಿದಾಗ ಅವರನ್ನು ಎದುರುಗೊಳ್ಳಲು ಹೋದಳು. ಆದರೆ ಮರಿಯಳು ಮನೆಯಲ್ಲಿಯೇ ಕುಳಿತುಕೊಂಡಿದ್ದಳು.
21 Marta İsa'ya, “Ya Rab” dedi, “Burada olsaydın, kardeşim ölmezdi.
ಆಗ ಮಾರ್ಥಳು ಯೇಸುವಿಗೆ, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ.
22 Şimdi bile, Tanrı'dan ne dilersen Tanrı'nın onu sana vereceğini biliyorum.”
ಆದರೆ ಈಗಲೂ ನೀವು ದೇವರನ್ನು ಏನು ಕೇಳಿಕೊಂಡರೂ ದೇವರು ಅದನ್ನು ನಿಮಗೆ ಕೊಡುವರೆಂದು ನಾನು ಬಲ್ಲೆನು,” ಎಂದಳು.
23 İsa, “Kardeşin dirilecektir” dedi.
ಯೇಸು ಆಕೆಗೆ, “ನಿನ್ನ ಸಹೋದರನು ಪುನಃ ಜೀವಂತನಾಗಿ ಎದ್ದೇಳುವನು,” ಎಂದು ಹೇಳಿದರು.
24 Marta, “Son gün, diriliş günü onun dirileceğini biliyorum” dedi.
ಮಾರ್ಥಳು ಯೇಸುವಿಗೆ, “ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನು ಪುನಃ ಎದ್ದು ಬರುವನೆಂದು ನಾನು ಬಲ್ಲೆನು,” ಎಂದು ಹೇಳಿದಳು.
25 İsa ona, “Diriliş ve yaşam Ben'im” dedi. “Bana iman eden kişi ölse de yaşayacaktır.
ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.
26 Yaşayan ve bana iman eden asla ölmeyecek. Buna iman ediyor musun?” (aiōn )
ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?” ಎಂದು ಕೇಳಿದ್ದಕ್ಕೆ, (aiōn )
27 Marta, “Evet, ya Rab” dedi. “Senin, dünyaya gelecek olan Tanrı'nın Oğlu Mesih olduğuna iman ettim.”
ಆಕೆಯು ಯೇಸುವಿಗೆ, “ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾಗಿದ್ದ ದೇವರ ಪುತ್ರನಾದ ಕ್ರಿಸ್ತನು ನೀವೇ ಎಂದು ನಾನು ನಂಬಿದ್ದೇನೆ,” ಎಂದಳು.
28 Bunu söyledikten sonra gidip kızkardeşi Meryem'i gizlice çağırdı. “Öğretmen burada, seni çağırıyor” dedi.
ಇದನ್ನು ಹೇಳಿ ಆಕೆಯು ಹೊರಟುಹೋಗಿ ತನ್ನ ಸಹೋದರಿ ಮರಿಯಳನ್ನು ರಹಸ್ಯವಾಗಿ ಕರೆದು, “ಬೋಧಕರು ಇಲ್ಲಿದ್ದಾರೆ, ನಿನ್ನನ್ನು ಕರೆಯುತ್ತಾರೆ,” ಎಂದಳು.
29 Meryem bunu işitince hemen kalkıp İsa'nın yanına gitti.
ಆಕೆಯು ಇದನ್ನು ಕೇಳಿದಾಗ ತಟ್ಟನೆ ಎದ್ದು ಯೇಸುವಿನ ಬಳಿಗೆ ಹೋದಳು.
30 İsa henüz köye varmamıştı, hâlâ Marta'nın kendisini karşıladığı yerdeydi.
ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಅವರನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದರು.
31 Meryem'le birlikte evde bulunan ve kendisini teselli eden Yahudiler, onun hızla kalkıp dışarı çıktığını gördüler. Ağlamak için mezara gittiğini sanarak onu izlediler.
ಮರಿಯಳೊಂದಿಗೆ ಮನೆಯಲ್ಲಿ ಆಕೆಯ ಜೊತೆಗಿದ್ದು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುತ್ತಿರುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹಿಂಬಾಲಿಸಿದರು.
32 Meryem İsa'nın bulunduğu yere vardı. O'nu görünce ayaklarına kapanarak, “Ya Rab” dedi, “Burada olsaydın, kardeşim ölmezdi.”
ಯೇಸು ಇದ್ದ ಸ್ಥಳಕ್ಕೆ ಮರಿಯಳೂ ಬಂದು ಅವರನ್ನು ಕಂಡು ಅವರ ಪಾದಗಳಿಗೆ ಬಿದ್ದು, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದು ಹೇಳಿದಳು.
33 Meryem'in ve onunla gelen Yahudiler'in ağladığını gören İsa'nın içini hüzün kapladı, yüreği sızladı.
ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಅಳುವುದನ್ನು ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ಕಳವಳಗೊಂಡವರಾಗಿ,
34 “Onu nereye koydunuz?” diye sordu. O'na, “Ya Rab, gel gör” dediler.
“ಅವನನ್ನು ಎಲ್ಲಿ ಸಮಾಧಿಮಾಡಿದ್ದೀರಿ?” ಎಂದು ಕೇಳಿದರು. ಅವರು ಯೇಸುವಿಗೆ, “ಸ್ವಾಮೀ, ಬಂದು ನೋಡಿರಿ,” ಎಂದರು.
36 Yahudiler, “Bakın, onu ne kadar seviyormuş!” dediler.
ಆಗ ಯೆಹೂದ್ಯರು, “ನೋಡಿರಿ, ಈತನಿಗೆ ಲಾಜರನ ಮೇಲೆ ಎಷ್ಟು ಪ್ರೀತಿ,” ಎಂದರು.
37 Ama içlerinden bazıları, “Körün gözlerini açan bu kişi, Lazar'ın ölümünü de önleyemez miydi?” dediler.
ಅವರಲ್ಲಿ ಕೆಲವರು, “ಆ ಕುರುಡನ ಕಣ್ಣುಗಳನ್ನು ತೆರೆದ ಈತನು ಲಾಜರನನ್ನೂ ಸಾಯದಂತೆ ಮಾಡಬಾರದಿತ್ತೆ?” ಎಂದರು.
38 İsa yine derinden hüzünlenerek mezara vardı. Mezar bir mağaraydı, girişinde de bir taş duruyordu.
ಯೇಸು ತಿರುಗಿ ತಮ್ಮಲ್ಲಿ ನೊಂದುಕೊಳ್ಳುತ್ತಾ ಸಮಾಧಿಗೆ ಬಂದರು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಬಾಗಿಲಿಗೆ ಮುಚ್ಚಲಾಗಿತ್ತು.
39 İsa, “Taşı çekin!” dedi. Ölenin kızkardeşi Marta, “Rab, o artık kokmuştur, öleli dört gün oldu” dedi.
ಯೇಸು, “ಆ ಕಲ್ಲನ್ನು ತೆಗೆದುಹಾಕಿರಿ,” ಎಂದರು. ಅದಕ್ಕೆ ಸತ್ತವನ ಸಹೋದರಿ ಮಾರ್ಥಳು ಯೇಸುವಿಗೆ, “ಸ್ವಾಮೀ, ಈಗ ದುರ್ವಾಸನೆ ಇರುವುದು. ಅವನು ಸತ್ತು ನಾಲ್ಕು ದಿನಗಳಾಗಿವೆ,” ಎಂದಳು.
40 İsa ona, “Ben sana, ‘İman edersen Tanrı'nın yüceliğini göreceksin’ demedim mi?” dedi.
ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.
41 Bunun üzerine taşı çektiler. İsa gözlerini gökyüzüne kaldırarak şöyle dedi: “Baba, beni işittiğin için sana şükrediyorum.
ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
42 Beni her zaman işittiğini biliyordum. Ama bunu, çevrede duran halk için, beni senin gönderdiğine iman etsinler diye söyledim.”
ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.
43 Bunları söyledikten sonra yüksek sesle, “Lazar, dışarı çık!” diye bağırdı.
ಯೇಸು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ,” ಎಂದು ಗಟ್ಟಿಯಾದ ಸ್ವರದಿಂದ ಕೂಗಿದರು.
44 Ölü, elleri ayakları sargılarla bağlı, yüzü peşkirle sarılmış olarak dışarı çıktı. İsa oradakilere, “Onu çözün, bırakın gitsin” dedi.
ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅಲ್ಲಿದ್ದವರಿಗೆ, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಹೇಳಿದರು.
45 O zaman, Meryem'e gelen ve İsa'nın yaptıklarını gören Yahudiler'in birçoğu İsa'ya iman etti.
ಆದ್ದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯಗಳನ್ನು ಕಂಡು ಅವರಲ್ಲಿ ನಂಬಿಕೆಯಿಟ್ಟರು.
46 Ama içlerinden bazıları Ferisiler'e giderek İsa'nın yaptıklarını onlara bildirdiler.
ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕೃತ್ಯಗಳನ್ನು ಅವರಿಗೆ ಹೇಳಿದರು.
47 Bunun üzerine başkâhinler ve Ferisiler, Yüksek Kurul'u toplayıp dediler ki, “Ne yapacağız? Bu adam birçok doğaüstü belirti gerçekleştiriyor.
ಆಗ ಮುಖ್ಯಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ, “ಈತನು ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
48 Böyle devam etmesine izin verirsek, herkes O'na iman edecek. Romalılar da gelip kutsal yerimizi ve ulusumuzu ortadan kaldıracaklar.”
ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.
49 İçlerinden biri, o yıl başkâhin olan Kayafa, “Hiçbir şey bilmiyorsunuz” dedi.
ಅವರಲ್ಲಿ ಆ ವರ್ಷದ ಮಹಾಯಾಜಕನಾದ ಕಾಯಫನೆಂಬವನು ಅವರಿಗೆ, “ನಿಮಗೆ ಏನೂ ತಿಳಿಯುವುದಿಲ್ಲ.
50 “Bütün ulus yok olacağına, halk uğruna bir tek adamın ölmesi sizin için daha uygun. Bunu anlamıyor musunuz?”
ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಎಣಿಸುವುದೇ ಇಲ್ಲ,” ಎಂದನು.
51 Bunu kendiliğinden söylemiyordu. O yılın başkâhini olarak İsa'nın, ulusun uğruna, ve yalnız ulusun uğruna değil, Tanrı'nın dağılmış çocuklarını toplayıp birleştirmek için de öleceğine ilişkin peygamberlikte bulunuyordu.
ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ ಯೇಸು ಆ ರಾಷ್ಟ್ರಕ್ಕಾಗಿ ಮಾತ್ರವಲ್ಲದೆ
ಚದುರಿರುವ ದೇವರ ಮಕ್ಕಳನ್ನು ಒಂದಾಗಿ ಕೂಡಿಸುವುದಕ್ಕಾಗಿಯೂ ಯೇಸು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
53 Böylece o günden itibaren İsa'yı öldürmek için düzen kurmaya başladılar.
ಅವರು ಆ ದಿನದಿಂದ ಯೇಸುವನ್ನು ಕೊಲ್ಲಬೇಕೆಂಬ ಒಳಸಂಚು ಮಾಡಿಕೊಂಡರು.
54 Bu yüzden İsa artık Yahudiler arasında açıkça dolaşmaz oldu. Oradan ayrılarak çöle yakın bir yere, Efrayim denilen kente gitti. Öğrencileriyle birlikte orada kaldı.
ಹೀಗಿರುವುದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅವರು ಅಲ್ಲಿಂದ ಅರಣ್ಯಕ್ಕೆ ಸಮೀಪದಲ್ಲಿದ್ದ ಎಫ್ರಾಯೀಮ್ ಎಂಬ ಊರಿಗೆ ಹೋಗಿ ಅಲ್ಲಿ ತಮ್ಮ ಶಿಷ್ಯರ ಸಂಗಡ ವಾಸಮಾಡಿದರು.
55 Yahudiler'in Fısıh Bayramı yakındı. Taşradakilerin birçoğu bayramdan önce arınmak için Yeruşalim'e gitti.
ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
56 Orada İsa'yı arayıp durdular. Tapınaktayken birbirlerine, “Ne dersiniz, bayrama hiç gelmeyecek mi?” diye soruyorlardı.
ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುತ್ತಾನೋ ಇಲ್ಲವೋ? ನಿಮಗೆ ಹೇಗೆ ಕಾಣುತ್ತದೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
57 Başkâhinlerle Ferisiler O'nu yakalayabilmek için, yerini bilenlerin haber vermesini buyurmuşlardı.
ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.