< Matta 24 >
1 İsa tapınaktan çıkıp giderken, öğrencileri, tapınağın binalarını O'na göstermek için yanına geldiler.
೧ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.
2 İsa onlara, “Bütün bunları görüyor musunuz?” dedi. “Size doğrusunu söyleyeyim, burada taş üstünde taş kalmayacak, hepsi yıkılacak!”
೨ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.
3 İsa, Zeytin Dağı'nda otururken öğrencileri yalnız olarak yanına geldiler. “Söyle bize” dediler, “Bu dediklerin ne zaman olacak, senin gelişini ve çağın bitimini gösteren belirti ne olacak?” (aiōn )
೩ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು (aiōn )
4 İsa onlara şu karşılığı verdi: “Sakın kimse sizi saptırmasın!
೪ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.
5 Birçokları, ‘Mesih benim’ diyerek benim adımla gelip birçok kişiyi aldatacaklar.
೫ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
6 Savaş gürültüleri, savaş haberleri duyacaksınız. Sakın korkmayın! Bunların olması gerek, ama bu daha son demek değildir.
೬ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
7 Ulus ulusa, devlet devlete savaş açacak; yer yer kıtlıklar, depremler olacak.
೭ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;
8 Bütün bunlar, doğum sancılarının başlangıcıdır.
೮ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ.
9 “O zaman sizi sıkıntıya sokacak, öldürecekler. Benim adımdan ötürü bütün uluslar sizden nefret edecek.
೯“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.
10 O zaman birçok kişi imandan sapacak, birbirlerini ele verecek ve birbirlerinden nefret edecekler.
೧೦ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.
11 Birçok sahte peygamber türeyecek ve bunlar birçok kişiyi saptıracak.
೧೧ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.
12 Kötülüklerin çoğalmasından ötürü birçoklarının sevgisi soğuyacak.
೧೨ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು.
13 Ama sonuna kadar dayanan kurtulacaktır.
೧೩ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.
14 Göksel egemenliğin bu Müjdesi bütün uluslara tanıklık olmak üzere dünyanın her yerinde duyurulacak. İşte o zaman son gelecektir.
೧೪ಇದಲ್ಲದೆರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.
15 “Peygamber Daniel'in sözünü ettiği yıkıcı iğrenç şeyin kutsal yerde dikildiğini gördüğünüz zaman –okuyan anlasın– Yahudiye'de bulunanlar dağlara kaçsın.
೧೫“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)
೧೬ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ;
17 Damda olan, evindeki eşyalarını almak için aşağı inmesin.
೧೭ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ,
18 Tarlada olan, abasını almak için geri dönmesin.
೧೮ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ.
19 O günlerde gebe olan, çocuk emziren kadınların vay haline!
೧೯ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ.
20 Dua edin ki, kaçışınız kışa ya da Şabat Günü'ne rastlamasın.
೨೦ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ.
21 Çünkü o günlerde öyle korkunç bir sıkıntı olacak ki, dünyanın başlangıcından bu yana böylesi olmamış, bundan sonra da olmayacaktır.
೨೧ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.
22 O günler kısaltılmamış olsaydı, hiç kimse kurtulamazdı. Ama seçilmiş olanlar uğruna o günler kısaltılacak.
೨೨ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.
23 Eğer o zaman biri size, ‘İşte Mesih burada’, ya da ‘İşte şurada’ derse, inanmayın.
೨೩ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ.
24 Çünkü sahte mesihler, sahte peygamberler türeyecek; bunlar büyük belirtiler ve harikalar yapacaklar. Öyle ki, ellerinden gelse, seçilmiş olanları bile saptıracaklar.
೨೪ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
25 İşte size önceden söylüyorum.
೨೫ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.
26 “Bunun için size, ‘İşte Mesih çölde’ derlerse gitmeyin. ‘Bakın, iç odalarda’ derlerse inanmayın.
೨೬ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.
27 Çünkü İnsanoğlu'nun gelişi, doğuda çakıp batıya kadar her taraftan görülen şimşek gibi olacaktır.
೨೭ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.
28 “Leş neredeyse, akbabalar oraya üşüşecek.
೨೮ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.
29 “O günlerin sıkıntısından hemen sonra, ‘Güneş kararacak, Ay ışık vermez olacak, Yıldızlar gökten düşecek, Göksel güçler sarsılacak.’
೨೯“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.
30 “O zaman İnsanoğlu'nun belirtisi gökte görünecek. Yeryüzündeki bütün halklar ağlayıp dövünecek, İnsanoğlu'nun gökteki bulutlar üzerinde büyük güç ve görkemle geldiğini görecekler.
೩೦ಆಗಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.
31 Kendisi güçlü bir borazan sesiyle meleklerini gönderecek. Melekler O'nun seçtiklerini göğün bir ucundan öbür ucuna dek, dünyanın dört bucağından toplayacaklar.
೩೧ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
32 “İncir ağacından ders alın! Dalları filizlenip yaprakları sürünce, yaz mevsiminin yakın olduğunu anlarsınız.
೩೨“ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.
33 Aynı şekilde, bütün bunların gerçekleştiğini gördüğünüzde bilin ki, İnsanoğlu yakındır, kapıdadır.
೩೩ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.
34 Size doğrusunu söyleyeyim, bütün bunlar olmadan bu kuşak ortadan kalkmayacak.
೩೪ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
35 Yer ve gök ortadan kalkacak, ama benim sözlerim asla ortadan kalkmayacaktır.”
೩೫ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
36 “O günü ve saati, ne gökteki melekler, ne de Oğul bilir; Baba'dan başka kimse bilmez.
೩೬“ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,
37 Nuh'un günlerinde nasıl olduysa, İnsanoğlu'nun gelişinde de öyle olacak.
೩೭ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು.
38 Nuh'un gemiye bindiği güne dek, tufandan önceki günlerde insanlar yiyip içiyor, evlenip evlendiriliyorlardı.
೩೮ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.
39 Tufan gelinceye, hepsini süpürüp götürünceye dek başlarına geleceklerden habersizdiler. İnsanoğlu'nun gelişi de öyle olacak.
೩೯ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.
40 O gün tarlada bulunan iki kişiden biri alınacak, biri bırakılacak.
೪೦ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು.
41 Değirmende buğday öğüten iki kadından biri alınacak, biri bırakılacak.
೪೧ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು.
42 “Bunun için uyanık kalın. Çünkü Rabbiniz'in geleceği günü bilemezsiniz.
೪೨“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.
43 Ama şunu bilin ki, ev sahibi, hırsızın gece hangi saatte geleceğini bilse, uyanık kalır, evinin soyulmasına fırsat vermez.
೪೩ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.
44 Bunun için siz de hazır olun! Çünkü İnsanoğlu beklemediğiniz saatte gelecektir.
೪೪ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
45 “Efendinin, hizmetkârlarına vaktinde yiyecek vermek için başlarına atadığı güvenilir ve akıllı köle kimdir?
೪೫ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?
46 Efendisi eve döndüğünde işinin başında bulacağı o köleye ne mutlu!
೪೬ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು.
47 Size doğrusunu söyleyeyim, efendisi onu bütün malının üzerinde yetkili kılacak.
೪೭ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
48 Ama o köle kötü olur da içinden, ‘Efendim gecikiyor’ der ve öteki köleleri dövmeye başlarsa, sarhoşlarla birlikte yiyip içerse, efendisi, onun beklemediği günde, ummadığı saatte gelecek, onu şiddetle cezalandırıp ikiyüzlülerle bir tutacak. Orada ağlayış ve diş gıcırtısı olacaktır.”
೪೮ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು
೪೯ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ,
೫೦ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ
೫೧ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.