< Matta 25 >
1 “O zaman Göklerin Egemenliği, kandillerini alıp güveyi karşılamaya çıkan on kıza benzeyecek.
೧“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನುತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.
2 Bunların beşi akıllı, beşi akılsızdı.
೨ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು.
3 Akılsızlar yanlarına kandillerini aldılar, ama yağ almadılar.
೩ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.
4 Akıllılar ise, kandilleriyle birlikte kaplar içinde yağ da aldılar.
೪ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.
5 Güvey gecikince hepsini uyku bastı, dalıp uyudular.
೫ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
6 “Gece yarısı bir ses yankılandı: ‘İşte güvey geliyor, onu karşılamaya çıkın!’
೬ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.
7 Bunun üzerine kızların hepsi kalkıp kandillerini tazelediler.
೭ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು.
8 “Akılsızlar akıllılara, ‘Kandillerimiz sönüyor, bize yağ verin!’ dediler.
೮ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.
9 “Akıllılar, ‘Olmaz! Hem bize hem size yetmeyebilir. En iyisi satıcılara gidin, kendinize yağ alın’ dediler.
೯ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.
10 “Ne var ki, onlar yağ satın almaya giderlerken güvey geldi. Hazırlıklı olan kızlar, onunla birlikte düğün şölenine girdiler ve kapı kapandı.
೧೦ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.
11 “Daha sonra gelen öbür kızlar, ‘Efendimiz, efendimiz, aç kapıyı bize!’ dediler.
೧೧ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.
12 “Güvey ise, ‘Size doğrusunu söyleyeyim, sizi tanımıyorum’ dedi.
೧೨ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.
13 “Bu nedenle uyanık kalın. Çünkü o günü ve o saati bilemezsiniz.”
೧೩ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.
14 “Göksel egemenlik, yolculuğa çıkan bir adamın kölelerini çağırıp malını onlara emanet etmesine benzer.
೧೪“ದೇವರ ರಾಜ್ಯವು ಹೇಗೆಂದರೆದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.
15 “Adam, her birinin yeteneğine göre, birine beş, birine iki, birine de bir talant vererek yola çıktı.
೧೫ಅವನು ಒಬ್ಬನಿಗೆ ಐದುತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.
16 Beş talant alan, hemen gidip bu parayı işletti ve beş talant daha kazandı.
೧೬ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.
17 İki talant alan da iki talant daha kazandı.
೧೭ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.
18 Bir talant alan ise gidip toprağı kazdı ve efendisinin parasını sakladı.
೧೮ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
19 “Uzun zaman sonra bu kölelerin efendisi döndü, onlarla hesaplaşmaya oturdu.
೧೯ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು
20 Beş talant alan gelip beş talant daha getirdi, ‘Efendimiz’ dedi, ‘Bana beş talant emanet etmiştin; bak, beş talant daha kazandım.’
೨೦ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.
21 “Efendisi ona, ‘Aferin, iyi ve güvenilir köle!’ dedi. ‘Sen küçük işlerde güvenilir olduğunu gösterdin, ben de seni büyük işlerin başına geçireceğim. Gel, efendinin şenliğine katıl!’
೨೧ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.
22 “İki talant alan da geldi, ‘Efendimiz’ dedi, ‘Bana iki talant emanet etmiştin; bak, iki talant daha kazandım.’
೨೨ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.
23 “Efendisi ona, ‘Aferin, iyi ve güvenilir köle!’ dedi. ‘Sen küçük işlerde güvenilir olduğunu gösterdin, ben de seni büyük işlerin başına geçireceğim. Gel, efendinin şenliğine katıl!’
೨೩ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.
24 “Sonra bir talant alan geldi, ‘Efendimiz’ dedi, ‘Senin sert bir adam olduğunu biliyordum. Ekmediğin yerden biçer, harman savurmadığın yerden devşirirsin.
೨೪ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು
25 Bu nedenle korktum, gidip senin verdiğin talantı toprağa gömdüm. İşte, al paranı!’
೨೫ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು.
26 “Efendisi ona şu karşılığı verdi: ‘Kötü ve tembel köle! Ekmediğim yerden biçtiğimi, harman savurmadığım yerden devşirdiğimi bildiğine göre paramı faize vermeliydin. Ben de geldiğimde onu faiziyle geri alırdım...
೨೬ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?
೨೭ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,
28 Haydi, elindeki talantı alın, on talantı olana verin!
೨೮ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು.
29 Çünkü kimde varsa, ona daha çok verilecek ve o bolluk içinde olacak. Ama kimde yoksa, kendisinde olan da elinden alınacak.
೨೯ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
30 Şu yararsız köleyi dışarıya, karanlığa atın. Orada ağlayış ve diş gıcırtısı olacaktır.’”
೩೦ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’
31 “İnsanoğlu kendi görkemi içinde bütün melekleriyle birlikte gelince, görkemli tahtına oturacak.
೩೧“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;
32 Ulusların hepsi O'nun önünde toplanacak, O da koyunları keçilerden ayıran bir çoban gibi, insanları birbirinden ayıracak.
೩೨ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.
33 Koyunları sağına, keçileri soluna alacak.
೩೩ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.
34 “O zaman Kral, sağındaki kişilere, ‘Sizler, Babam'ın kutsadıkları, gelin!’ diyecek. ‘Dünya kurulduğundan beri sizin için hazırlanmış olan egemenliği miras alın!
೩೪ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.
35 Çünkü acıkmıştım, bana yiyecek verdiniz; susamıştım, bana içecek verdiniz; yabancıydım, beni içeri aldınız.
೩೫ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;
36 Çıplaktım, beni giydirdiniz; hastaydım, benimle ilgilendiniz; zindandaydım, yanıma geldiniz.’
೩೬ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.
37 “O vakit doğru kişiler O'na şu karşılığı verecek: ‘Ya Rab, seni ne zaman aç görüp doyurduk, susuz görüp su verdik?
೩೭ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು?
38 Ne zaman seni yabancı görüp içeri aldık, ya da çıplak görüp giydirdik?
೩೮ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು?
39 Seni ne zaman hasta ya da zindanda görüp yanına geldik?’
೩೯ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು.
40 “Kral da onları şöyle yanıtlayacak: ‘Size doğrusunu söyleyeyim, bu en basit kardeşlerimden biri için yaptığınızı, benim için yapmış oldunuz.’
೪೦ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
41 “Sonra solundakilere şöyle diyecek: ‘Ey lanetliler, çekilin önümden! İblis'le melekleri için hazırlanmış sönmez ateşe gidin! (aiōnios )
೪೧ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. (aiōnios )
42 Çünkü acıkmıştım, bana yiyecek vermediniz; susamıştım, bana içecek vermediniz; yabancıydım, beni içeri almadınız; çıplaktım, beni giydirmediniz; hastaydım, zindandaydım, benimle ilgilenmediniz.’
೪೨ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.
೪೩ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.
44 “O vakit onlar da şöyle karşılık verecekler: ‘Ya Rab, seni ne zaman aç, susuz, yabancı, çıplak, hasta ya da zindanda gördük de yardım etmedik?’
೪೪ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.
45 “Kral da onlara şu yanıtı verecek: ‘Size doğrusunu söyleyeyim, mademki bu en basit kardeşlerimden biri için bunu yapmadınız, benim için de yapmamış oldunuz.’
೪೫ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
46 “Bunlar sonsuz azaba, doğrular ise sonsuz yaşama gidecekler.” (aiōnios )
೪೬ಮತ್ತು ಅನೀತಿವಂತರಾದ ಇವರುನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು. (aiōnios )