< Matta 7 >
1 “Başkasını yargılamayın ki, siz de yargılanmayasınız.
೧“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.
2 Çünkü nasıl yargılarsanız öyle yargılanacaksınız. Hangi ölçekle verirseniz, aynı ölçekle alacaksınız.
೨ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.
3 Sen neden kardeşinin gözündeki çöpü görürsün de kendi gözündeki merteği farketmezsin?
೩“ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?
4 Kendi gözünde mertek varken kardeşine nasıl, ‘İzin ver, gözündeki çöpü çıkarayım’ dersin?
೪ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.
5 Seni ikiyüzlü! Önce kendi gözündeki merteği çıkar, o zaman kardeşinin gözündeki çöpü çıkarmak için daha iyi görürsün.
೫ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.
6 “Kutsal olanı köpeklere vermeyin. İncilerinizi domuzların önüne atmayın. Yoksa bunları ayaklarıyla çiğnedikten sonra dönüp sizi parçalayabilirler.”
೬“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.
7 “Dileyin, size verilecek; arayın, bulacaksınız; kapıyı çalın, size açılacaktır.
೭“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;
8 Çünkü her dileyen alır, arayan bulur, kapı çalana açılır.
೮ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.
9 Hanginiz kendisinden ekmek isteyen oğluna taş verir?
೯“ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?
10 Ya da balık isterse yılan verir?
೧೦ಮೀನು ಕೇಳಿದರೆ ಹಾವನ್ನು ಕೊಡುವನೋ?
11 Sizler kötü yürekli olduğunuz halde çocuklarınıza güzel armağanlar vermeyi biliyorsanız, göklerdeki Babanız'ın, kendisinden dileyenlere güzel armağanlar vereceği çok daha kesin değil mi?
೧೧ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
12 “İnsanların size nasıl davranmasını istiyorsanız, siz de onlara öyle davranın. Çünkü Kutsal Yasa'nın ve peygamberlerin söylediği budur.”
೧೨ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
13 “Dar kapıdan girin. Çünkü yıkıma götüren kapı geniş ve yol enlidir. Bu kapıdan girenler çoktur.
೧೩“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.
14 Oysa yaşama götüren kapı dar, yol da çetindir. Bu yolu bulanlar azdır.”
೧೪ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
15 “Sahte peygamberlerden sakının! Onlar size kuzu postuna bürünerek yaklaşırlar, ama özde yırtıcı kurtlardır.
೧೫“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.
16 Onları meyvelerinden tanıyacaksınız. Dikenli bitkilerden üzüm, devedikenlerinden incir toplanabilir mi?
೧೬ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?
17 Bunun gibi, her iyi ağaç iyi meyve verir, kötü ağaç ise kötü meyve verir.
೧೭ಹಾಗೆಯೇಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;
18 İyi ağaç kötü meyve, kötü ağaç da iyi meyve veremez.
೧೮ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು.
19 İyi meyve vermeyen her ağaç kesilip ateşe atılır.
೧೯ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.
20 Böylece sahte peygamberleri meyvelerinden tanıyacaksınız.
೨೦ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.
21 “Bana, ‘Ya Rab, ya Rab!’ diye seslenen herkes Göklerin Egemenliği'ne girmeyecek. Ancak göklerdeki Babam'ın isteğini yerine getiren girecektir.
೨೧“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
22 O gün birçokları bana diyecek ki, ‘Ya Rab, ya Rab! Biz senin adınla peygamberlik etmedik mi? Senin adınla cinler kovmadık mı? Senin adınla birçok mucize yapmadık mı?’
೨೨ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.
23 O zaman ben de onlara açıkça, ‘Sizi hiç tanımadım, uzak durun benden, ey kötülük yapanlar!’ diyeceğim.”
೨೩ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.
24 “İşte bu sözlerimi duyup uygulayan herkes, evini kaya üzerine kuran akıllı adama benzer.
೨೪“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.
25 Yağmur yağar, seller basar, yeller eser, eve saldırır; ama ev yıkılmaz. Çünkü kaya üzerine kurulmuştur.
೨೫ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.
26 Bu sözlerimi duyup da uygulamayan herkes, evini kum üzerine kuran budala adama benzer.
೨೬ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.
27 Yağmur yağar, seller basar, yeller eser, evi sarsar. Ev yıkılır; yıkılışı da korkunç olur.”
೨೭ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.
28 İsa konuşmasını bitirince, halk O'nun öğretişine şaşıp kaldı.
೨೮“ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.
29 Çünkü onlara kendi din bilginleri gibi değil, yetkili biri gibi öğretiyordu.
೨೯ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.