< Süleyman'In Özdeyişleri 31 >
1 Massa Kralı Lemuel'in sözleri, Annesinin ona öğrettikleri:
೧ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು,
2 “Oğlum, rahmimin ürünü, ne diyeyim? Adaklarımın yanıtı oğlum, ne diyeyim?
೨ಏನು, ಕಂದಾ? ನನ್ನ ಗರ್ಭಪುತ್ರನೇ, ಏನು, ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ?
3 Gücünü kadınlara, Gençliğini kralları mahvedenlere kaptırma!
೩ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸಬೇಡ, ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ.
4 “Şarap içmek krallara yakışmaz, ey Lemuel, Krallara yakışmaz! İçkiyi özlemek hükümdarlara yaraşmaz.
೪ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.
5 Çünkü içince kuralları unutur, Mazlumun hakkını yerler.
೫ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು.
6 İçkiyi çaresize, Şarabı kaygı çekene verin.
೬ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.
7 İçsin ki yoksulluğunu unutsun, Artık sefaletini anmasın.
೭ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.
8 Ağzını hakkını savunamayan için, Kimsesizin davasını gütmek için aç.
೮ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.
9 Ağzını aç ve adaletle yargıla, Mazlumun, yoksulun hakkını savun.”
೯ಬಾಯನ್ನು ತೆರೆದು ನ್ಯಾಯವನ್ನು ತೀರಿಸು, ದೀನದರಿದ್ರರ ವ್ಯಾಜ್ಯ ಮಾಡು.
10 Erdemli kadını kim bulabilir? Onun değeri mücevherden çok üstündür.
೧೦ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
11 Kocası ona yürekten güvenir Ve kazancı eksilmez.
೧೧ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು, ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು.
12 Kadın ona kötülükle değil, Yaşamı boyunca iyilikle karşılık verir.
೧೨ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ, ಹಿತವನ್ನೇ ಮಾಡುತ್ತಿರುವಳು.
13 Yün, keten bulur, Zevkle elleriyle işler.
೧೩ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು, ಕೈಕೆಲಸವನ್ನು ಆಸಕ್ತಿಯಿಂದ ಮಾಡುವಳು.
14 Ticaret gemileri gibidir, Yiyeceğini uzaktan getirir.
೧೪ವ್ಯಾಪಾರದ ಹಡಗುಗಳಂತೆ, ದೂರದಿಂದ ಬೇಕಾದ ಆಹಾರವನ್ನು ತರುವಳು.
15 Gün ağarmadan kalkar, Ev halkına yiyecek, hizmetçilerine paylarını verir.
೧೫ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು, ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.
16 Bir tarlayı gözüne kestirip satın alır, El emeğiyle kazandığı parayla bağ diker.
೧೬ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.
17 Giyinip kollarını sıvar, Canla başla çalışır.
೧೭ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು.
18 Ticaretinin kârlı olduğunu bilir, Çırası gece boyunca yanar.
೧೮ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
19 Eliyle örekeyi tutar, Avucunda iği tutar.
೧೯ರಾಟೆಯ ಮೇಲೆ ಕೈ ಹಾಕಿ, ಕದರನ್ನು ಹಿಡಿಯುವಳು.
20 Mazluma kollarını açar, Yoksula elini uzatır.
೨೦ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.
21 Kar yağınca ev halkı için kaygılanmaz, Çünkü hepsinin iki kat giysisi vardır.
೨೧ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.
22 Yatak örtüleri dokur, Kendi giysileri ince mor ketendendir.
೨೨ತನಗಾಗಿ ರತ್ನಗಂಬಳಿಗಳನ್ನು ಮಾಡುವಳು, ಆಕೆಯ ಉಡುಪು ನಾರುಮಡಿ, ರಕ್ತಾಂಬರ.
23 Kocası ülkenin ileri gelenleriyle oturup kalkar, Kent kurulunda iyi tanınır.
೨೩ಆಕೆಯ ಪತಿಯು ನ್ಯಾಯಸ್ಥಾನದಲ್ಲಿ, ದೇಶದ ಹಿರಿಯರ ಮಧ್ಯದಲ್ಲಿ ಕುಳಿತಿರುವಾಗ ಪ್ರಸಿದ್ಧನಾಗಿ ಕಾಣುವನು.
24 Kadın diktiği keten giysilerle Ördüğü kuşakları tüccara satar.
೨೪ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು.
25 Güç ve onurla kuşanmıştır, Geleceğe güvenle bakar.
೨೫ಬಲವನ್ನು, ತೇಜಸ್ಸನ್ನು ಹೊದ್ದುಕೊಂಡಿರುವಳು, ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು.
26 Ağzından bilgelik akar, Dili iyilik öğütler.
೨೬ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿಪೂರ್ವಕವಾಗಿ ಹೇಳುವುದು.
27 Ev halkının işlerini yönetir, Tembellik nedir bilmez.
೨೭ಸೋಮಾರಿತನದ ಅನ್ನವನ್ನು ತಿನ್ನದೆ, ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು.
28 Çocukları önünde ayağa kalkıp onu kutlar, Kocası onu över.
೨೮ಮಕ್ಕಳು ಎದ್ದುನಿಂತು ಆಕೆಯನ್ನು “ಧನ್ಯಳು” ಎಂದು ಹೇಳುವರು.
29 “Soylu işler yapan çok kadın var, Ama sen hepsinden üstünsün” der.
೨೯ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು.
30 Çekicilik aldatıcı, güzellik boştur; Ama RAB'be saygılı kadın övülmeye layıktır.
೩೦ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.
31 Ellerinin hak ettiğini verin kendisine, Yaptıkları için kent kurulunda övülsün.
೩೧ಆಕೆಯ ಕೈಕೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ, ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ.