< Mezmurlar 121 >

1 Hac ilahisi Gözlerimi dağlara kaldırıyorum, Nereden yardım gelecek?
ಯಾತ್ರಾಗೀತೆ. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?
2 Yeri göğü yaratan RAB'den gelecek yardım.
ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ.
3 O ayaklarının kaymasına izin vermez, Seni koruyan uyuklamaz.
ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ.
4 İsrail'in koruyucusu ne uyur ne uyuklar.
ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.
5 Senin koruyucun RAB'dir, O sağ yanında sana gölgedir.
ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.
6 Gündüz güneş, Gece ay sana zarar vermez.
ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ.
7 RAB her kötülükten seni korur, Esirger canını.
ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.
8 Şimdiden sonsuza dek RAB koruyacak gidişini, gelişini.
ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.

< Mezmurlar 121 >