< Mezmurlar 135 >
1 RAB'be övgüler sunun! RAB'bin adına övgüler sunun, Ey RAB'bin kulları! Ey sizler, RAB'bin Tapınağı'nda, Tanrımız'ın Tapınağı'nın avlularında hizmet edenler, Övgüler sunun!
೧ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ,
೨ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ.
3 RAB'be övgüler sunun, Çünkü RAB iyidir. Adını ilahilerle övün, Çünkü hoştur bu.
೩ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು.
4 RAB kendine Yakup soyunu, Öz halkı olarak İsrail'i seçti.
೪ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.
5 Biliyorum, RAB büyüktür, Rabbimiz bütün ilahlardan üstündür.
೫ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.
6 RAB ne isterse yapar, Göklerde, yeryüzünde, Denizlerde, bütün derinliklerde.
೬ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.
7 Yeryüzünün dört bucağından bulutlar yükseltir, Yağmur için şimşek çaktırır, Ambarlarından rüzgar estirir.
೭ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
8 İnsanlardan hayvanlara dek Mısır'da ilk doğanları öldürdü.
೮ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ, ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.
9 Ey Mısır, senin orta yerinde, Firavunla bütün görevlilerine Belirtiler, şaşılası işler gösterdi.
೯ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ, ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು, ಮಹತ್ಕಾರ್ಯಗಳನ್ನು ನಡೆಸಿದನು.
10 Birçok ulusu bozguna uğrattı, Güçlü kralları öldürdü:
೧೦ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು.
11 Amorlu kral Sihon'u, Başan Kralı Og'u, Bütün Kenan krallarını.
೧೧ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ಇದ್ದರು. ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.
12 Topraklarını mülk, Evet, mülk olarak halkı İsrail'e verdi.
೧೨ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು; ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು.
13 Ya RAB, adın sonsuza dek sürecek, Bütün kuşaklar seni anacak.
೧೩ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.
14 RAB halkını haklı çıkarır, Kullarına acır.
೧೪ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು, ತನ್ನ ಸೇವಕರನ್ನು ಕನಿಕರಿಸುವನು.
15 Ulusların putları altın ve gümüşten yapılmış, İnsan elinin eseridir.
೧೫ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
16 Ağızları var, konuşmazlar, Gözleri var, görmezler,
೧೬ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, ಕಣ್ಣಿದ್ದರೂ ನೋಡುವುದಿಲ್ಲ,
17 Kulakları var, duymazlar, Soluk alıp vermezler.
೧೭ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ.
18 Onları yapan, onlara güvenen herkes Onlar gibi olacak!
೧೮ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ.
19 Ey İsrail halkı, RAB'be övgüler sun! Ey Harun soyu, RAB'be övgüler sun!
೧೯ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ.
20 Ey Levi soyu, RAB'be övgüler sun! RAB'be övgüler sunun, ey RAB'den korkanlar!
೨೦ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ.
21 Yeruşalim'de oturan RAB'be Siyon'dan övgüler sunulsun! RAB'be övgüler sunun!
೨೧ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಲಿ, ಯೆಹೋವನಿಗೆ ಸ್ತೋತ್ರ!