< Mezmurlar 15 >
1 Davut'un mezmuru Ya RAB, çadırına kim konuk olabilir? Kutsal dağında kim oturabilir?
೧ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?
2 Kusursuz yaşam süren, adil davranan, Yürekten gerçeği söyleyen.
೨ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
3 İftira etmez, Dostuna zarar vermez, Komşusuna kara çalmaz böylesi.
೩ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು.
4 Aşağılık insanları hor görür, Ama RAB'den korkanlara saygı duyar. Kendi zararına ant içse bile, dönmez andından.
೪ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
5 Parasını faize vermez, Suçsuza karşı rüşvet almaz. Böyle yaşayan asla sarsılmayacak.
೫ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.