< Vahiy 7 >

1 Bundan sonra yeryüzünün dört köşesinde duran dört melek gördüm. Bunlar karaya, denize ya da herhangi bir ağaç üzerine esmesin diye, yeryüzünün dört rüzgarını tutuyorlardı.
ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.
2 Sonra gündoğusundan yükselen başka bir melek gördüm. Yaşayan Tanrı'nın mührünü taşıyordu. Karaya, denize zarar vermek için yetki verilen dört meleğe yüksek sesle bağırdı:
ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,
3 “Biz Tanrımız'ın kullarını alınlarından mühürleyene dek karaya, denize ya da ağaçlara zarar vermeyin!”
“ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
4 Mühürlenmiş olanların sayısını işittim. İsrailoğulları'nın bütün oymaklarından 144 000 kişi mühürlenmişti:
ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.
5 Yahuda oymağından 12 000 kişi mühürlenmişti. Ruben oymağından 12 000, Gad oymağından 12 000,
ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದ್ ಕುಲದವರಲ್ಲಿ ಹನ್ನೆರಡು ಸಾವಿರ,
6 Aşer oymağından 12 000, Naftali oymağından 12 000, Manaşşe oymağından 12 000,
ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ,
7 Şimon oymağından 12 000, Levi oymağından 12 000, İssakar oymağından 12 000,
ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ,
8 Zevulun oymağından 12 000, Yusuf oymağından 12 000, Benyamin oymağından 12 000 kişi mühürlenmişti.
ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು.
9 Bundan sonra gördüm ki, her ulustan, her oymaktan, her halktan, her dilden oluşan, kimsenin sayamayacağı kadar büyük bir kalabalık tahtın ve Kuzu'nun önünde duruyordu. Hepsi de birer beyaz kaftan giymişti, ellerinde hurma dalları vardı.
ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.
10 Yüksek sesle bağırıyorlardı: “Kurtarış, tahtta oturan Tanrımız'a Ve Kuzu'ya özgüdür!”
೧೦ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.
11 Bütün melekler tahtın, ihtiyarların ve dört yaratığın çevresinde duruyordu. Tahtın önünde yüzüstü yere kapanıp Tanrı'ya tapınarak şöyle diyorlardı:
೧೧ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,
12 “Amin! Övgü, yücelik, bilgelik, Şükran, saygı, güç, kudret, Sonsuzlara dek Tanrımız'ın olsun! Amin!” (aiōn g165)
೧೨“ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. (aiōn g165)
13 Bu sırada ihtiyarlardan biri bana sordu: “Beyaz kaftan giymiş olan bu kişiler kim, nereden geldiler?”
೧೩ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು.
14 “Sen bunu biliyorsun, efendim” dedim. Bana dedi ki, “Bunlar o büyük sıkıntıdan geçip gelenlerdir. Kaftanlarını Kuzu'nun kanıyla yıkamış, bembeyaz etmişlerdir.
೧೪ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.
15 Bunun için, “Tanrı'nın tahtı önünde duruyor, Tapınağında gece gündüz O'na tapınıyorlar. Tahtta oturan, çadırını onların üzerine gerecek.
೧೫ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.
16 Artık acıkmayacak, Artık susamayacaklar. Ne güneş ne kavurucu sıcak Çarpacak onları.
೧೬ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.
17 Çünkü tahtın ortasında olan Kuzu onları güdecek Ve yaşam sularının pınarlarına götürecek. Tanrı gözlerinden bütün yaşları silecek.”
೧೭ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.

< Vahiy 7 >