< 2 Samuel 11 >
1 Asusowbere a edi so no mu, bere a ɛsɛ sɛ ahemfo kɔ ɔsa no, Dawid somaa Yoab ne Israel asraafo nyinaa sɛ wɔnkɔsɛe Amonfo. Wokotuaa kuropɔn Raba ano, na Dawid de, ɔkaa Yerusalem.
೧ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.
2 Da bi anwummere a Dawid ayi nʼani so kakra no, ɔsɔre fii ne mpa so nantew faa nʼahemfi no atifi. Ogyina hɔ no, ohuu ɔbea bi sɛ ɔreguare. Na ɔbea no ho yɛ fɛ yiye;
೨ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.
3 na Dawid somaa obi sɛ onkobisa ne ho nsɛm. Ɔbarima no bɛkae se, “Ɛyɛ Eliam babea Batseba, a ɔyɛ Hetini Uria yere.”
೩ಕೂಡಲೆ ದಾವೀದನು ಒಬ್ಬನನ್ನು ಕರೆದು, “ಆ ಸ್ತ್ರೀ ಯಾರು?” ಎಂದು ವಿಚಾರಿಸಲು ಅವನು, “ಆಕೆಯು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆ ಅಲ್ಲವೇ?” ಎಂದು ಉತ್ತರ ಕೊಟ್ಟನು.
4 Na Dawid tuu abɔfo sɛ wɔnkɔfrɛ no mmrɛ no. Ɔbaa Dawid nkyɛn. Dawid ne no dae. (Odwiraa ne ho fii ne nsabu mu no, na ɛnkyɛe.) Afei, ɔsan kɔɔ fie.
೪ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು.
5 Bere a Batseba huu sɛ wanyinsɛn no, ɔsoma ma wɔkɔka kyerɛɛ Dawid.
೫ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು.
6 Enti Dawid soma kɔɔ Yoab nkyɛn kɔka kyerɛɛ no se, “Fa Hetini Uria brɛ me.”
೬ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.
7 Bere a Uria duu Dawid nkyɛn no, obisaa gyinabea a Yoab ne asraafo no wɔ mu ne sɛnea ɔko no rekɔ so.
೭ಊರೀಯನು ಬಂದಾಗ ದಾವೀದನು, “ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?” ಎಂದು ವಿಚಾರಿಸಿದ, ನಂತರ
8 Na ɔka kyerɛɛ Uria se, “Kɔ fie na kɔhome.” Na mpo, Uria fii ahemfi hɔ no, Dawid soma ma wɔde akyɛde bi kɔmaa no.
೮ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.
9 Nanso Uria ankɔ fie. Ɔne ɔhene asomfo no bi tenaa ahemfi pon no ano.
೯ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು.
10 Bere a Dawid tee nea Uria ayɛ no, ɔfrɛɛ no bisaa no se, “Dɛn na ɛhaw wo? Wufii fie akyɛ na adɛn na woankɔ hɔ nnɛra anadwo?”
೧೦ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ತಿಳಿದಾಗ ಅವನು ಊರೀಯನಿಗೆ, “ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ, ಯಾಕೆ ಮನೆಗೆ ಹೋಗಲಿಲ್ಲ?” ಅಂದನು.
11 Uria buae se, “Apam Adaka no ne Israel asraafo ne Yuda tete ntamadan mu, na Yoab nso ne ne mpanyimfo abɔ atenae wɔ wuram baabi petee mu. Na ɛbɛyɛ dɛn na matumi akɔ fie akɔnom nsa, adidi na me ne me yere akɔda? Meka ntam se merenyɛ eyi na madi ho fɔ.”
೧೧ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.
12 Na Dawid ka kyerɛɛ no se, “Eye, tena ha anadwo yi, na ɔkyena wobɛkɔ asraafo no mu.” Enti Uria tenaa Yerusalem da no ne nʼadekyee.
೧೨ಆಗ ದಾವೀದನು ಅವನಿಗೆ, “ನೀನು ಈ ಹೊತ್ತು ಇಲ್ಲೇ ಇರು. ನಾಳೆ ನಿನ್ನನ್ನು ಕಳುಹಿಸುತ್ತೇನೆ” ಎಂದು ಆಜ್ಞಾಪಿಸಿದನು. ಊರೀಯನು ಆ ದಿನ ಯೆರೂಸಲೇಮಿನಲ್ಲೇ ಇದ್ದನು.
13 Na Dawid frɛɛ no adidi ne ɔnom aponto, na ɔmaa no nsa ma ɔbowee. Na ɛno mpo, Uria ankɔ fie ankohu ne yere. Ɔdaa ahemfi no kwan ano bio.
೧೩ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.
14 Ade kyee anɔpa no, Dawid kyerɛw krataa maa Uria sɛ ɔmfa nkɔma Yoab.
೧೪ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು.
15 Krataa no mu nsɛm kyerɛɛ Yoab se, “Ma Uria nkɔ akono baabi a ɔko no ano yɛ den pa ara. Wo de, san wʼakyi, sɛnea ɛbɛyɛ a, wobekum no.”
೧೫ಅದರಲ್ಲಿ, “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂಭಾಗದಲ್ಲಿ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿರಿ” ಎಂಬುದಾಗಿ ಬರೆದಿದ್ದನು.
16 Enti Yoab maa Uria kogyinaa baabi a ɛbɛn kurow no fasu, a ɛhɔ na onim sɛ atamfo no mmarima a wɔyɛ den no reko.
೧೬ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶೂರರಾದ ಶತ್ರುಸೈನಿಕರು ಎಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು.
17 Ɛhɔ na wokum Hetini Uria ne Israel asraafo no bebree.
೧೭ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಾಡಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಸಹ ಸತ್ತನು.
18 Na Yoab de ɔsa mu amanneɛ kɔbɔɔ Dawid.
೧೮ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ, “ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು.
19 Ɔka kyerɛɛ nʼabɔfo no se, “Monka ɔsa mu nsɛm no nyinaa nkyerɛ ɔhene.
೧೯ನೀನು ಯುದ್ಧ ಸಮಾಚಾರವನ್ನು ಹೇಳಿ ಮುಗಿಸಿದ ನಂತರ ಅರಸನು ಕೋಪಗೊಂಡು ನಿನ್ನನ್ನು,
20 Nanso ebia ne bo befuw, ama wabisa se, ‘Adɛn nti na asraafo no kɔbɛn kurow no pɛɛ saa? Na wonnim sɛ wɔbɛtow agyan afi afasu no mu?
೨೦‘ನೀವು ಯುದ್ಧ ಮಾಡುವುದಕ್ಕಾಗಿ ಪಟ್ಟಣದ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರಗೋಡೆಯ ಮೇಲಣಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ?
21 Ɔbeabasia antow awiyammo ammɔ Gideon babarima Abimelek wɔ Tebes ankum no?’ Afei, monka nkyerɛ no se, wɔakum Hetini Uria nso.”
೨೧ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.
22 Enti abɔfo no kɔɔ Yerusalem kɔbɔɔ ɔsa no mu amanneɛ kyerɛɛ Dawid sɛnea Yoab somaa no sɛ ɔnkɔka no.
೨೨ಆ ದೂತನು ಹೋಗಿ ಯೋವಾಬನ ಆಜ್ಞೆಯಂತೆ ದಾವೀದನಿಗೆ ತಿಳಿಸಿದ್ದೇನೆಂದರೆ,
23 Abɔfo no ka kyerɛɛ Dawid se, “Mmarima no bu faa yɛn so, na wotiaa yɛn petee mu de, nanso yepiaa wɔn kɔɔ kurow no pon ano.
೨೩“ಆ ಊರಿನವರು ಮಹಾಸೈನ್ಯಬಲದೊಡನೆ ಯುದ್ಧಮಾಡುವುದಕ್ಕೆ ಬಯಲಿಗೆ ಬಂದರು. ನಾವು ಅವರನ್ನು ಊರ ಬಾಗಿಲಿನವರೆಗೂ ಹಿಂದಟ್ಟಿದೆವು.
24 Ɛhɔ na agyantowfo tow wʼasomfo fii ɔfasu ho, maa ɔhene mmarima no bi wuwui. Na wo somfo Hetini Uria nso awu.”
೨೪ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು” ಎಂದನು.
25 Dawid ka kyerɛɛ abɔfo no se, “Monka nkyerɛ Yoab se ɔmmma nʼaba mu mmu, na ɔko mu de obiara tumi wu. Monyere mo ho nko ɔkoden na munni kuropɔn no so nkonim.”
೨೫ಅದಕ್ಕೆ ದಾವೀದನು ದೂತನಿಗೆ, “ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು” ಎಂದನು.
26 Bere a Batseba tee sɛ ne kunu awu no, osuu no.
೨೬ಊರೀಯನ ಮರಣದ ವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.
27 Na osu no akyi no, Dawid soma ma wɔkɔfaa no baa ne fi. Ɔbɛyɛɛ ne yere, na ɔwoo ɔbabarima. Na nea Dawid yɛe no ansɔ Awurade ani.
೨೭ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.