< 2 Samuel 3 >

1 Ɔko a ɛbɛtɔɔ wɔn a wɔwɔ Saulo afa ne wɔn a wɔwɔ Dawid afa no kyɛe yiye, na ne mfiase ni. Bere a Dawid adedi renya ahoɔden no na Saulo adedi no resɛe.
ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.
2 Eyinom ne Dawid mmabarima a wɔwoo wɔn wɔ Hebron: Nʼabakan no din de Amnon a ɔyɛ Ahinoam a ofi Yesreel no babarima.
ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು; ಚೊಚ್ಚಲ ಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು.
3 Nea ɔto so abien no din de Kileab a ɔyɛ Abigail a na ɔyɛ Nabal a ofi Karmel no kunabea babarima; nea ɔto so abiɛsa no din de Absalom a ɔyɛ Gesurhene Talmai babea Maaka babarima.
ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.
4 Nea ɔto so anan no din de Adoniya a ɔyɛ Hagit babarima; nea ɔto so anum no din de Sefatia a ɔyɛ Abital babarima.
ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು. ಐದನೆಯವನು ಶೆಫಟ್ಯನು, ಇವನು ಅಬೀಟಲಳ ಮಗನು.
5 Na nea ɔto so asia no din de Yitream a ɔyɛ Dawid yere Egla babarima. Wɔwoo saa mma yi maa Dawid wɔ Hebron.
ಆರನೆಯವನು ಇತ್ರಾಮನು. ಇವನು ದಾವೀದನಿಗೆ ಅವನ ಹೆಂಡತಿಯಾದ ಎಗ್ಲಳಲ್ಲಿ ಹುಟ್ಟಿದವನು. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರೇ.
6 Bere a na ɔko a ɛda Saulo fi ne Dawid fi no gu so no, na Abner agye din ama nʼankasa ne ho wɔ Saulo fi.
ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧ ನಡೆಯುತ್ತಿರುವಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು.
7 Na Saulo wɔ mpena bi a wɔfrɛ no Rispa, a ɔyɛ Aia babea. Na Is-Boset bisaa Abner se, “Adɛn nti na wo ne mʼagya mpena dae?”
ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯರನ್ನು ಕೂಡಿದ್ದೇಕೆ?” ಎಂದು ಕೇಳಿದನು.
8 Abner bo fuw yiye kae se, “Meyɛ akraman sodifo wɔ Yuda na wɔadwoodwoo me saa? Nea mayɛ ama wo ne wʼagya, a manyi mo amma Dawid no, mʼayeyi ne sɛ, mode ɔbea yi ho asɛm rekyekyere me?
ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈ ವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ಮಿತ್ರರಿಗೂ ದಯೆತೋರಿಸುತ್ತಿದ್ದೇನಲ್ಲಾ. ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?
9 Sɛ mammoa Dawid amma ne nsa anka nea Awurade hyɛɛ ho bɔ no a, Onyankopɔn ne me nni no ɔnwene so.
ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,
10 Mede Saulo ahenni bɛkɔ akɔma Dawid na matim Dawid ahengua ase wɔ Israel ne Yuda so afi Dan akosi Beer-Seba.”
೧೦ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು.
11 Esiane sɛ na Is-Boset suro Abner nti, wantumi ankasa bio.
೧೧ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು.
12 Afei, Abner tuu abɔfo kɔɔ Dawid nkyɛn kɔka kyerɛɛ no se, “Ma yɛnyɛ nhyehyɛe na mɛboa ama yɛadan Israelman mu no nyinaa ama wo.”
೧೨ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ” ಎಂದು ಹೇಳಿಸಿದನು.
13 Dawid buae se, “Ɛyɛ asɛm papa, nanso me ne wo renyɛ saa nhyehyɛe no gye sɛ, sɛ woreba a, wode me yere Mikal a ɔyɛ Saulo babea no brɛ me.”
೧೩ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನಿನ್ನಿಂದ ನನಗೆ ಒಂದು ಸಹಾಯ ಬೇಕು. ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ, ನೀನು ನನ್ನ ಮುಖವನ್ನು ನೋಡಕೂಡದು” ಎಂದು ಉತ್ತರಕೊಟ್ಟನು.
14 Enti, Dawid soma ma wɔkɔbɔɔ Saulo babarima Is-Boset amanneɛ se, “Ma me nsa nka me yere Mikal, efisɛ mede Filistifo ɔha nkwa na ɛtɔɔ no.”
೧೪ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಆಜ್ಞಾಪಿಸಿದನು.
15 Enti Is-Boset gyee Mikal fii ne kunu Paltiel a ɔyɛ Lais babarima no nsam.
೧೫ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆಯಿಸಿದನು.
16 Na Paltiel de osu dii ɔbea no akyi koduu Bahurim. Na Abner ka kyerɛɛ no se, “San kɔ fie.” Na Paltiel san kɔɔ fie.
೧೬ಆಗ ಪಲ್ಟೀಯೇಲನು ಬಹುರೀಮಿನವರೆಗೆ ಅಳುತ್ತಾ ಆಕೆಯ ಹಿಂದೆ ಹೋದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗಿ ಮನೆಗೆ ಹೋಗು” ಎಂದು ಹೇಳಲು ಅವನು ಹಿಂದಿರುಗಿ ಹೋದನು.
17 Na Abner ne Israel ntuanofo adidi nkɔmmɔ. Ɔka kyerɛɛ wɔn se, “Mmere kakra a atwam no, na mopɛ sɛ musi Dawid ɔhene.
೧೭ಅಬ್ನೇರನು ಇಸ್ರಾಯೇಲರ ಹಿರಿಯರಿಗೆ, “ದಾವೀದನು ನಮ್ಮ ಅರಸನಾಗಬೇಕೆಂದು ನೀವು ಮೊದಲು ಅಪೇಕ್ಷಿಸಿದಂತೆಯೇ ಈಗ ಮಾಡಿರಿ.
18 Bere no ni. Efisɛ Awurade aka se, ‘Mayi Dawid sɛ onnye me nkurɔfo mfi Filistifo ne wɔn atamfo nyinaa nsam.’”
೧೮ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು.
19 Abner san ne Benyamin abusua mu ntuanofo kasae. Afei, ɔkɔɔ Hebron kɔbɔɔ Dawid amanneɛ se, Israel nyinaa ne Benyamin taa wʼakyi.
೧೯ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿಕೊಂಡು ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕೋಸ್ಕರ ಹೆಬ್ರೋನಿಗೆ ಹೊರಟನು.
20 Bere a Abner ne ne mmarima aduonu baa Hebron no, Dawid too wɔn pon kɛse.
೨೦ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣ ಮಾಡಿಸಿದನು.
21 Na Abner ka kyerɛɛ Dawid se, “Ma menkɔ na menkɔfrɛ Israel nnipa nyinaa na wɔmmra wʼafa. Wɔne wo bɛyɛ apam, na wɔasi wo hene. Na ɛbɛma woadi biribiara a wo koma pɛ so.” Enti Dawid maa Abner kɔɔ dwoodwoo.
೨೧ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು” ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು.
22 Abner kɔe ara pɛ, Yoab ne Dawid asraafo no bi fi ɔsa mu bae a wokura asade bebree.
೨೨ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಭಟರು ಯೋವಾಬನೂ ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂತಿರುಗಿ ಬಂದರು. ಅವನು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.
23 Bere a wɔka kyerɛɛ Yoab se Abner baa hɔ nkyɛe koraa, na ɔbɛsraa ɔhene, ama ɔhene ama no kɔ asomdwoe mu no,
೨೩ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ, ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು, ಅರಸನ ಬಳಿಗೆ ಹೋಗಿ,
24 Yoab yɛɛ ntɛm kohuu ɔhene bisaa no se, “Dɛn na woayɛ yi? Abner kɔ a womaa no kɔe yi, wokyerɛ dɛn?
೨೪“ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ?
25 Wunim pefee sɛ, ɔbaa wo so sɛ ɔkwansrafo, bɛhwehwɛɛ nea woreyɛ nyinaa mu ana?”
೨೫ನೇರನ ಮಗನಾದ ಅಬ್ನೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ” ಎಂದು ಹೇಳಿ,
26 Ɛhɔ ara, Yoab fi Dawid nkyɛn, na ɔsomaa abɔfo sɛ wontiw Abner. Wɔkɔtoo no Sira ɔtare ho, twee no de no bae. Nanso na Dawid nnim ho hwee.
೨೬ಯೋವಾಬನು ದಾವೀದನನ್ನು ಬಿಟ್ಟು, ಹೊರಗೆ ಹೋಗಿ, ಅಬ್ನೇರನನ್ನು ಕರೆತರುವಂತೆ ದೂತರನ್ನು ಕಳುಹಿಸಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.
27 Afei, Abner san kɔɔ Hebron no, Yoab frɛɛ no kɔɔ nkyɛn kosii ɔpon ano te sɛ nea ɔrekɔka kokoamsɛm akyerɛ no no. Na ɛhɔ no na esiane sɛ ɔpɛ sɛ ɔtɔ ne nuabarima Asahel so were no nti, Yoab wɔɔ Abner yafunu mu afoa ma owui.
೨೭ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.
28 Akyiri no a Dawid tee asɛm no, ɔkae se, “Me ne mʼaheman nnim saa asɛm a ɛfa Abner yi ho hwee wɔ Awurade anim.
೨೮ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.
29 Ne mogya ngu Yoab ne nʼagya fi so! Yoab fi de, awo ntoatoaso mu nyinaa, obi a watutu akuru anaa ɔyare kwata, nea ɔnam pema ho nantew anaa nea owu afoa ano ne nea ɔsrɛsrɛ aduan rempa hɔ da.”
೨೯ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.
30 Yoab ne ne nuabarima Abisai kum Abner, efisɛ Abner kum wɔn nuabarima Asahel wɔ akono wɔ Gibeon.
೩೦ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.
31 Na Dawid ka kyerɛɛ Yoab ne nnipa a wɔka ne ho no nyinaa se, “Munsunsuan mo ntama mu, na mumfura atweaatam. Muntwa Abner ho agyaadwo.” Na ɔhene Dawid ankasa dii santen a wɔato no akyi, kɔɔ ɔda no so.
೩೧ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.
32 Wosiee Abner wɔ Hebron, na ɔhene Dawid ne nnipa no nyinaa suu wɔ ne da no ho.
೩೨ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು.
33 Afei, ɔhene too saa kwadwom yi maa Abner: “Ɛsɛ sɛ Abner wu sɛnea nkwaseafo wu ana?
೩೩ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ ನಿನಗೆ ಮೂರ್ಖರಿಗಾಗುವಂತೆ ದುರ್ಮರಣವಾಯಿತೋ?
34 Wɔankyekyere wo nsa; wɔangu wo nan nkɔnsɔnkɔnsɔn. Dabi, wodii wo awu; amumɔyɛfo atirimpɔw so ade.” Nnipa no nyinaa suu Abner bio.
೩೪ನಿನ್ನ ಕೈಗಳು ಕಟ್ಟಲ್ಪಡಲಿಲ್ಲ. ನಿನ್ನ ಕಾಲುಗಳಿಗೆ ಬೇಡಿಗಳು ಹಾಕಿರಲಿಲ್ಲ. ನೀನು ದುಷ್ಟರಿಂದ ಹತನಾದಂತೆ ಹತನಾದಿ” ಎಂದು ಶೋಕಗೀತೆಯನ್ನು ಹಾಡಲು ಜನರು ತಿರುಗಿ ಅತ್ತರು.
35 Da a wɔreyɛ ayi no, Dawid annidi da mu no nyinaa, maa afei, obiara srɛɛ no se onnidi. Nanso na Dawid aka ntam se, “Sɛ mididi ansa na owia akɔtɔ a, Onyankopɔn nkum me.”
೩೫ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.
36 Eyi sɔɔ nnipa no ani yiye. Nokware, biribiara a ɔhene no yɛe no sɔɔ ɔmanfo no ani.
೩೬ಜನರು ಇದನ್ನು ಕಂಡು ಮೆಚ್ಚಿದರು. ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.
37 Eyi maa obiara a ɔte Yuda ne Israel no huu sɛ, ɛnyɛ ɔhene Dawid na okum Abner.
೩೭ನೇರನ ಮಗನಾದ ಅಬ್ನೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು.
38 Na ɔhene Dawid bisaa ɔmanfo no se, “Munhu sɛ ɔkannifo kɛse ne onipa kɛse atɔ fam nnɛ wɔ Israel ana?
೩೮ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ.
39 Na ɛwɔ mu sɛ me ne ɔhene a wɔasra no de, nanso Seruia mmabarima Yoab ne Abisai de, wɔyɛ den dodo ma me sɛ metumi aka wɔn ahyɛ. Ɛno nti, Awurade ntua saa mmarima amumɔyɛfo yi so ka wɔ wɔn amumɔyɛsɛm ho.”
೩೯ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.

< 2 Samuel 3 >