< 5 Mose 19 >
1 Sɛ Awurade, mo Nyankopɔn no, sɛe aman a ɔde wɔn nsase rema mo no, na sɛ mopam wɔn na motena wɔn nkurow mu ne wɔn afi mu a,
೧ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಜನಾಂಗಗಳನ್ನು ಆತನು ನಾಶಮಾಡಿ ಬಿಟ್ಟ ತರುವಾಯ, ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರ ಗ್ರಾಮಗಳಲ್ಲಿಯೂ,
2 munyi nkuropɔn abiɛsa a ɛwɔ asase a Awurade, mo Nyankopɔn no, de rema mo no mfimfini.
೨ಮನೆಗಳಲ್ಲಿಯೂ ವಾಸವಾಗಿರುವಾಗ, ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.
3 Munyiyi akwan nkɔ hɔ na monkyɛ asase a Awurade, mo Nyankopɔn, de rema mo sɛ agyapade no mu abiɛsa sɛnea ɛbɛyɛ a, sɛ obi kum obi a, obeguan akɔ hɔ.
೩ನರಹತ್ಯಮಾಡಿದವರು ಆ ನಗರಗಳಿಗೆ ಓಡಿಹೊಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು.
4 Sɛ obi anhyɛ da na okum obi a onni ne ho menasepɔw anaa ɔntan no dedaw a, nea ne nsa apa no tumi guan kɔ saa nkuropɔn yi biara so de gye ne ho nkwa.
೪ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
5 Sɛ ebia, obi ne ne yɔnko bi kɔ wuram sɛ wɔrekobu nnua na sɛ ɛba sɛ ɔbaako him abonnua no sɛ ɔde rebu dua bi na sɛ abonnua no hɔn fi ne dua mu kum ne yɔnko no a, saa onipa no tumi guan kɔ nkuropɔn no baako so de gye ne ho nkwa.
೫ಉದಾಹರಣೆ, ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ, ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ, ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
6 Sɛ anyɛ saa a ɔweretɔni no de abufuw bɛtaa no. Sɛ ɔkwan no ware dodo a ɔbɛto no akum no bi, a anka ɔmfata owu, esiane sɛ ɔnnam adwemmɔne biara so na okum no.
೬ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.
7 Eyi nti na merehyɛ mo sɛ munyi nkuropɔn abiɛsa nsi nkyɛn no.
೭ಈ ಕಾರಣದಿಂದ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿದ್ದೇನೆ.
8 Sɛ Awurade, mo Nyankopɔn no, trɛw mo man mu sɛnea ɔkaa ho ntam kyerɛɛ mo agyanom no na ɔde asase no nyinaa ma mo sɛnea ɔhyɛɛ wɔn ho bɔ no a,
೮ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ತಾನು ನಿಮ್ಮ ಪೂರ್ವಿಕರಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವಾಗ, ಇನ್ನೂ ಮೂರು ನಗರಗಳನ್ನು ನಿಮಗಾಗಿ ಗೊತ್ತುಮಾಡಬೇಕು. ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ,
9 esiane sɛ motɔ mo bo ase di mmara a mehyɛ mo nnɛ yi sɛ monnɔ Awurade, mo Nyankopɔn no, na daa monnantew nʼakwan so no so nti na, ɛsɛ sɛ muyi nkuropɔn abiɛsa si nkyɛn no.
೯ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆಯುವುದಾದರೆ, ಆಗ ಯೆಹೋವನು ಈ ಮೂರು ನಗರಗಳನ್ನು ನಿಮಗೆ ಕೊಡುವನು.
10 Monyɛ eyi, sɛnea ɛbɛyɛ a wɔrenhwie mogya a enni fɔ no ngu mo asase a Awurade, mo Nyankopɔn no, de rema mo sɛ mo agyapade no so, na moanni mogyahwiegu ho fɔ.
೧೦ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.
11 Sɛ obi fi nitan mu hyɛ da kɔtɛw obi pira no, kum no na oguan kɔ nkuropɔn yi mu baako so a,
೧೧ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು, ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ
12 ɛsɛ sɛ mpanyimfo a wɔwɔ ne kurow no mu hɔ no soma ma wɔkɔfa no fi kuropɔn no mu brɛ ɔweretɔni no ma okum no.
೧೨ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಒಪ್ಪಿಸಬೇಕು.
13 Munnya ahummɔbɔ biara. Munyi awudi ho afɔdi biara mfi Israel na ama asi mo yiye.
೧೩ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನನ್ನು ಇಸ್ರಾಯೇಲರಲ್ಲಿ ಉಳಿಯದಂತೆ ಮಾಡಬೇಕು.
14 Sɛ mudu asase a Awurade, mo Nyankopɔn no, de rema mo sɛ agyapade no so a, munntutu mo yɔnkonom ntɔmmɛ a mo agyanom asisi no ngu.
೧೪ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು.
15 Mummmu obi a ɔdanseni baako pɛ abedi atia no no fɔ. Sobobɔ bedi mu, bere a nnipa baanu anaa baasa abedi adanse atia obi.
೧೫ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು.
16 Sɛ atoro danseni bi ba bɛbɔ obi amumɔyɛ bi ho kwaadu a,
೧೬ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿಹೇಳಿದರೆ,
17 ɛsɛ sɛ nnipa baanu a wodi asɛm no nyinaa ba asɔfo ne atemmufo a wɔreyɛ Awurade adwuma no anim.
೧೭ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ, ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.
18 Ɛsɛ sɛ atemmufo no yɛ nhwehwɛmu a emu dɔ yiye, na sɛ ɛda adi sɛ ɔdanseni no retwa atoro, a ɔredi adansekurum agu ne yɔnko Israelni no so a,
೧೮ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆ ಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ,
19 ɛno de, monyɛ ɔdansekurumni no sɛnea anka ɔpɛe sɛ wɔyɛ ne yɔnko no. Muntu abɔnefo ase mfi mo mu.
೧೯ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.
20 Nnipa nkae no bɛte na wɔasuro, na wɔrenyɛ saa bɔne no wɔ mo mu bio.
೨೦ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ.
21 Munnhu obiara mmɔbɔ! Mo mmara a ɛsɛ sɛ mudi so no yɛ nkwa nsi nkwa anan mu, aniwa nsi aniwa anan mu, ɛse nsi se anan mu, nsa nsi nsa anan mu na nan nsi nan anan mu.
೨೧ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ, ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ, ಕೈಗೆ ಪ್ರತಿಯಾಗಿ ಕೈಯನ್ನೂ ಮತ್ತು ಕಾಲಿಗೆ ಪ್ರತಿಯಾಗಿ ಕಾಲನ್ನೂ ತೆಗೆದುಬಿಡಬೇಕು.