< Hesekiel 38 >
1 Awurade asɛm baa me nkyɛn se,
೧ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 “Onipa ba, fa wʼani si Gog, a ɛwɔ Magog asase so no so, Mesek ne Tubal obirɛmpɔn no; hyɛ nkɔm tia no
೨“ನರಪುತ್ರನೇ, ರೋಷಿನವರನ್ನೂ, ಮೆಷೆಕಿನವರನ್ನೂ, ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ಪ್ರವಾದನೆಯನ್ನು ನುಡಿ,
3 na ka se: ‘Sɛɛ na Otumfo Awurade se: Me ne wo anya. Gog, Mesek ne Tubal birɛmpɔn.
೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ನಾನು ನಿನಗೆ ವಿರುದ್ಧವಾಗಿದ್ದೇನೆ.
4 Mekyinkyim wo na mede nnarewa asuso wʼabogye mu na mede wo ne wʼasraafo nyinaa, wʼapɔnkɔ, wʼapɔnkɔsotefo a wɔhyehyɛ akotade ne dɔm kɛse a wokurakura akokyɛm akɛse ne nketewa a wɔn nyinaa rehinhim wɔn afoa, apue.
೪ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು.
5 Persia, Kus ne Put a wɔn nyinaa kurakura nkatabo na wɔhyehyɛ wɔn nnadekyɛw bɛka wɔn ho,
೫ಅವರೊಂದಿಗೆ ಪಾರಸಿಯರು, ಕೂಷ್ಯರು, ಪೂಟ್ಯರು ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
6 afei Gomer ne nʼasraafo nyinaa ne Bet-Togarma a wofi atifi fam akyirikyiri ne nʼasraafo, aman bebree bɛka wo ho.
೬ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಗೋಮೆರ್ ಮತ್ತು ಸೈನ್ಯದವರನ್ನೂ, ತೋಗರ್ಮದವರನ್ನು ಮತ್ತು ಅನೇಕ ಜನರನ್ನು ನಿನ್ನೊಂದಿಗೆ ಬರಮಾಡುವೆನು.
7 “‘Siesie wo ho, yɛ krado, wo ne nnipakuw a wɔaboaboa wɔn ho ano wɔ wo nkyɛn nyinaa na yɛ wɔn so hwɛfo.
೭“‘ಸಿದ್ಧವಾಗಿರು! ನಿನ್ನಲ್ಲಿ ಕೂಡಿಬಂದಿರುವ ಎಲ್ಲಾ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವರ ದಂಡ ನಾಯಕನಾಗಿರು.
8 Nna bebree akyi no, wobɛtwe atuo. Mfe bi akyi no wobɛko afa asase bi a wafi ɔko mu afi na wɔaboaboa so nnipa afi amanaman so aba Israel mmepɔw a ada mpan akyɛ no so. Wɔde wɔn fi amanaman no mu, na mprempren wɔn nyinaa te asomdwoe mu.
೮ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.
9 Wo ne wʼasraafo nyinaa ne aman bebrebe a wɔwɔ wo nkyɛn no bɛforo akɔ mo anim sɛ ahum. Mobɛyɛ sɛ omununkum akata asase no so.
೯ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’”
10 “‘Sɛɛ na Otumfo Awurade se: Saa da no, nsusuwii bi bɛba wo tirim na wubeguan nhyehyɛe bɔne bi.
೧೦ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.
11 Wobɛka se, “Mɛko afa asase a wɔntoo so nkuraa ho fasu, mɛtow ahyɛ nnipa a wɔwɔ asomdwoe na wɔnnwene hwee so, a wɔn mu biara nni ɔfasu, apon ne akyi adaban.
೧೧ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ.
12 Mɛfom na mawia na madan me nsa atia amamfo a nnipa abɛtena so ne nnipa a wɔaboa wɔn ano afi amanaman so, nnipa a nyɛmmoa ne aguade abu wɔn so na wɔtete asase no mfimfini no.”
೧೨ಸುಲಿಗೆಯನ್ನು, ಕೊಳ್ಳೆಯನ್ನು ಹೊಡೆಯಬೇಕೆಂತಲೂ, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಧನ ಕನಕ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು, ಭೂಮಿಯ ಮಧ್ಯದಲ್ಲಿ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.
13 Seba ne Dedan ne Tarsis aguadifo ne ne nkuraa nyinaa bebisa wo se, “Woaba sɛ worebɛfom ana? Woaboa wo dɔm ano sɛ morebewia na moasoa dwetɛ ne sikakɔkɔɔ, nyɛmmoa ne aguade akɔ na moafa asade bebree abran so ana?”’
೧೩ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’” ಎಂದು ಕೇಳುವರು.
14 “Ɛno nti, onipa ba, hyɛ nkɔm kyerɛ Gog se, ‘Sɛɛ na Otumfo Awurade se: Saa da no, bere a me nkurɔfo Israelfo te hɔ asomdwoe mu no, woanhu ana?
೧೪ಹೀಗಿರಲು, “ನರಪುತ್ರನೇ, ನೀನು ಗೋಗನಿಗೆ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಜನರಾದ ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವುದು.
15 Wubefi wʼasase so wɔ atifi fam nohɔ tɔnn, wo ne aman bebree a wɔn nyinaa tete apɔnkɔ so, nnipadɔm kɛse, asraafodɔm a ɛso.
೧೫ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪು ಕೂಡಿದ ಅನೇಕ ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವಿ.
16 Mubetu ateɛ akɔ me nkurɔfo Israelfo so te sɛ omununkum a ɛkata asase no so. Nna a ɛbɛba no mu. Gog, mɛma woasɔre atia mʼasase, sɛnea aman no behu me, bere a menam wo so bɛda me ho adi sɛ ɔkronkronni wɔ wɔn anim no.
೧೬ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”
17 “‘Sɛɛ na Otumfo Awurade se: Ɛnyɛ wo ne nea menam mʼasomfo Israel adiyifo so kaa wo ho asɛm nna a atwa mu no ana? Saa bere no, wɔde mfe bebree hyɛɛ nkɔm se mɛma wo so de atia wɔn.
೧೭ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನ ಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ, ನಾನು ಒಬ್ಬನನ್ನು ಇಸ್ರಾಯೇಲರ ಮೇಲೆ ಬೀಳ ಮಾಡುವೆನು” ಎಂದು ಮುಂತಿಳಿಸಿದಂತೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.
18 Eyi ne nea ebesi saa da no. Sɛ Gog tow hyɛ Israel asase so a, mʼabufuwhyew bɛsɔre, Otumfo Awurade asɛm ni.
೧೮ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.
19 Mʼanem ne mʼabufuwhyew mu, mepae mu ka se, saa bere no asasewosow kɛse bɛba Israel asase so.
೧೯ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, ‘ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ.
20 Po mu mpataa, wim nnomaa, wuram mmoa, abɔde biara a ɛwea wɔ asase so ne nnipa a wɔwɔ asase so nyinaa ho bɛpopo wɔ mʼanim. Mmepɔw betutu agu, abotan bedwiriw na afasu nyinaa abubu agu fam.
೨೦ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.’”
21 Mɛfrɛ afoa aba Gog so wɔ me mmepɔw nyinaa so, Otumfo Awurade asɛm ni. Wɔde afoa bɛsɔre atia wɔn ho wɔn ho.
೨೧ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.
22 Mede ɔyaredɔm ne mogyahwiegu bebu no atɛn, mehwie osuhweam, mparuwbo, ogya ne sufre a ɛdɛw agu ɔno ne nʼasraafo ne aman bebree a wɔka ne ho no so.
೨೨ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.
23 Enti mɛda me kɛseyɛ ne me kronkronyɛ adi, na mama amanaman ahu me. Afei wobehu sɛ mene Awurade no.’
೨೩ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”