< Hebrifo 10 >

1 Mmara no yɛ nneɛma pa nsusuwso a ɛreba, na mmom ɛnyɛ nneɛma pa no ankasa nen. Wɔbɔ afɔre koro no ara afe biara, efisɛ saa afɔre koro a wɔbɔ no afe afe no rentumi mma nnipa a wɔsom no nyɛ pɛ da.
ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.
2 Sɛ nnipa a wɔresom Onyankopɔn no tumi fi wɔn bɔne mu yɛ pɛ a, ɛno de anka wɔrenni bɔne ho fɔ bio, na ne saa nti afɔrebɔ nyinaa to betwa.
ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.
3 Nea saa afɔrebɔ yi yɛ ne sɛ, ɛkae wɔn wɔn bɔne afe biara.
ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು,
4 Anantwi ne mmirekyi mogya rentumi mpepa bɔne.
ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
5 Esiane saa nti, bere a Kristo rebɛba wiase no, ɔka kyerɛɛ Onyankopɔn se: “Wompɛ afɔrebɔ ne ayɛyɛde nanso woasiesie ɔhonam ama me.
ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ, ) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,
6 Wʼani nnnye ɔhyew ne bɔne afɔre anaa afɔre a wɔbɔ de pepa bɔne ho.
ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.
7 Afei mekae se, ‘Mewɔ ha rebɛyɛ nea wopɛ sɛ meyɛ sɛnea wɔakyerɛw afa me ho wɔ Mmara nhoma no mu no.’”
ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.
8 Kan no ɔkae se, “Wompɛ, na wʼani nso nnnye afɔrebɔ ne ayɛyɛde a wɔde pepa bɔne ho.” Ɛwɔ mu, na Mmara no kyerɛ sɛ wɔnyɛ saa.
ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.
9 Na ɔkae se, “Mewɔ ha rebɛyɛ nea wopɛ sɛ meyɛ.” Ɛno nti, Onyankopɔn agu tete afɔrebɔ no nyinaa na ɔde Kristo afɔrebɔ no asi anan mu.
ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
10 Esiane sɛ Yesu Kristo yɛɛ sɛnea Onyankopɔn hwehwɛ sɛ ɔnyɛ no nti, ɔnam ne honam a ɔde bɔɔ afɔre prɛko maa yɛn no so ama yɛn ho atew afi bɔne ho.
೧೦ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.
11 Da biara Yudani sɔfo sɔre yɛ nʼasɔfodwuma na wabɔ afɔre mpɛn pii. Nanso saa afɔre yi rentumi mpepa bɔne.
೧೧ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
12 Kristo de, ɔbɔɔ bɔne ho afɔre. Afɔre a ɛtena hɔ daa nyinaa. Na ɛno akyi, ɔtenaa Onyankopɔn nifa so.
೧೨ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
13 Ɛhɔ na ɔretwɛn mprempren kosi sɛ Onyankopɔn bɛma nʼatamfo ayɛ nʼanan ase ntiaso.
೧೩ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.
14 Ɔnam afɔrebɔ baako so ama nnebɔneyɛfo ho atew daa nyinaa.
೧೪ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.
15 Na Honhom Kronkron no nso di adanse. Nea edi kan no, ɔka se,
೧೫ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ,
16 “Eyi ne apam a me ne wɔn bɛpam wɔ bere a ɛreba no mu. Awurade na ose: Mede me mmara bɛhyɛ wɔn koma mu na makyerɛw agu wɔn adwene mu.”
೧೬“ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,
17 Na afei waka se, “Merenkae wɔn bɔne ne wɔn amumɔyɛ bio.”
೧೭“ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.
18 Sɛ wɔde eyinom nyinaa kyɛ a, na afɔre a wɔbɔ de pepa bɔne no ho nhia bio.
೧೮ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.
19 Anuanom, esiane Yesu wu no nti, yɛade yɛn ho koraa sɛ yɛbɛkɔ Kronkronbea hɔ.
೧೯ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
20 Ɔnam ɔno ara ne honam so abue ɔkwan foforo a nkwa wɔ mu ama yɛn.
೨೦
21 Yɛwɔ ɔsɔfo kɛse bi a ɔhwɛ Onyankopɔn fi so.
೨೧ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.
22 Momma yɛmfa koma pa ne gyidi a mu yɛ den ntwiw mmɛn Onyankopɔn. Efisɛ wɔde Yesu mogya atew yɛn tiboa afɔbu ho, na wɔde nsu a ɛyɛ kronkron aguare yɛn nipadua.
೨೨ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
23 Momma yennyina gyidi a yɛaso mu no mu dennen, efisɛ nea ɔhyɛɛ yɛn bɔ no yɛ ɔnokwafo.
೨೩ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.
24 Momma yɛn ho yɛn ho asɛm nhia yɛn na yɛnnodɔ yɛn ho yɛn ho na yɛnyɛ papa.
೨೪ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.
25 Mommma yennnyae yɛn ho yɛn ho nhyiamu da sɛnea afoforo bi yɛ no. Mmom, momma yɛnhyɛ yɛn ho yɛn ho nkuran denneennen, efisɛ mo ara muhu sɛ ɛrenkyɛ na da no aba.
೨೫ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
26 Sɛ mohyɛ da kɔ so yɛ bɔne a, afɔrebɔ biara nni hɔ a ɛbɛpepa mo bɔne, efisɛ wɔada nokware no adi akyerɛ yɛn.
೨೬ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
27 Nea ɛwɔ hɔ ma wɔn a wotia Onyankopɔn ara ne atemmu ne ogya a ɛbɛba abɛhyew wɔn no.
೨೭ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
28 Obiara a obu Mose Mmara no so no, sɛ nnansefo baanu anaa baasa adansedi nti, wobu atɛn tia no a, wobekum no a wɔrenhu no mmɔbɔ.
೨೮ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
29 Na obi a watiatia Onyankopɔn Ba no so, na ɔmmfa Onyankopɔn mogya apam no a egyee no fii bɔne mu no nyɛ hwee anaa nea otiatia Honhom a ɔma adom no anim no, dɛn na ɛbɛto no? Asotwe a onii no benya no nyɛ adewa.
೨೯ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
30 Yenim sɛ Onyankopɔn kae se, “Me na aweretɔ wɔ me, na me na mitua ka,” na ɔno ara na ɔsan kae se, “Awurade bebu ne nkurɔfo atɛn.”
೩೦“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
31 Onyankopɔn a ɔte ase no nsam amanenya yɛ hu.
೩೧ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
32 Monkae ahohia a mokɔɔ mu bere a muhuu hann no, mumiaa mo ani huu ɔko bebree mu amane.
೩೨ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
33 Ebi ne sɛ, wɔyeyaw mo mpɛn pii, guu mo anim ase wɔ bagua mu; na ɛtɔ da bi mpo a, na moasiesie mo ho sɛ mobɛka wɔn a wɔrehu amane no ho.
೩೩ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
34 Mo ne nneduafo daa afiase na wɔfaa mo ahode nyinaa no mpo, munyaa ho boasetɔ, efisɛ munim sɛ ɛyɛ dɛn ara a mowɔ ade pa bi a ɛbɛtena hɔ daa.
೩೪ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.
35 Mommma mo koma ntutu na moanhwere mo akatua.
೩೫ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.
36 Ɛsɛ sɛ motɔ mo bo ase na moatumi ayɛ Onyankopɔn apɛde ama mo nsa aka nea wɔahyɛ mo ho bɔ no.
೩೬ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
37 Efisɛ Kyerɛwsɛm no ka se, “Ɛrenkyɛ koraa na nea ɛsɛ sɛ ɔba no aba; ɔrentwentwɛn.
೩೭“ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.
38 Na, “Nea ɔteɛ no fi gyidi mu benya nkwa, na sɛ ɔtwe ne ho a, me kra ani rensɔ no.”
೩೮ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
39 Yɛnyɛ nnipa a yɛsan yɛn akyi na yɛyera. Mmom yɛwɔ gyidi na wɔagye yɛn nkwa.
೩೯ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.

< Hebrifo 10 >