< Yesaia 54 >

1 “To nnwom, obonin, wo a wonwoo da; pae mu to nnwom, teɛ mu di ahurusi, wo a awo nkaa wo da; efisɛ ɔbea a wannya awo da no mma dɔɔso sen nea ɔwɔ kunu,” Awurade na ose.
“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.
2 “Trɛw wo ntamadan no mu; twe wo ntamadan ntwamu no mu, nnyae yɛ; toa wo ntampehama no so, bobɔ wo nnyinaso no so ma entim yiye.
ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು.
3 Efisɛ wobɛtrɛw akɔ nifa ne benkum; wʼasefo begye aman afa na wɔatena wɔn nkuropɔn amamfo so.
ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.
4 “Nsuro; wʼanim rengu ase. Nsuro aniwu; wɔremmrɛ wo ase. Wo werɛ befi wo mmabun mu aniwu na wo kunayɛ mu ahohora nso worenkae bio.
“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.
5 Na wo Bɔfo yɛ wo kunu Asafo Awurade ne ne din, Israel Kronkronni no yɛ wo Gyefo. Wɔfrɛ no asase nyinaa so Nyankopɔn.
“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.
6 Awurade bɛsan afrɛ wo te sɛ ɔyere a woagyaa no na odi yaw wɔ ne koma mu, ɔyere a ɔwaree mmabaabere mu na wogyaa no mpofirim,” wo Nyankopɔn na ose.
ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.
7 “Migyaw wo bere tiaa bi mu, nanso mifi ayamhyehye a mu dɔ mu bɛsan de wo aba.
“ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು.
8 Abufuw mmoroso mu, mede mʼani hintaw wo mmere tiaa bi, nanso mʼayamye a ɛnsa da nti, mehu wo mmɔbɔ,” nea Awurade, wo Gyefo se ni.
ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.
9 “Eyi te sɛ Noa mmere so a mekaa ntam se meremma nsuyiri nkata asase ani bio. Enti afei maka ntam se meremma me bo mfuw wo bio, na merenka wʼanim bio.
“ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.
10 Sɛ mmepɔw wosow, na nkoko tutu a, me dɔ a ɛnsa da a mewɔ ma wo no renhinhim na mʼasomdwoe apam no rentwa mu,” sɛɛ na Awurade a ɔwɔ ahummɔbɔ ma mo no se.
೧೦ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.
11 “Kuropɔn a ahum abubu wo na wɔnkyekyee wo werɛ ɛ, mede abo anintɔnka besiesie wo, na mede aboɔdemmo bibiri ayɛ wo fapem.
೧೧ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.
12 Mede bogyabo bɛto wʼabantifi afasu, na mede abohemaa a ɛhyerɛn ayɛ wʼapon, na mede aboɔdemmo ayɛ wʼafasu nyinaa.
೧೨ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರ ರತ್ನಗಳಿಂದ ನಿರ್ಮಿಸುವೆನು.
13 Awurade bɛkyerɛkyerɛ wo mmabarima nyinaa, na wo mma asomdwoe bɛdɔɔso.
೧೩ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.
14 Wubetim wɔ trenee mu: Wo ne nhyɛsotraso ntam kwan bɛware worensuro biribiara. Ahupoo bɛkɔ akyirikyiri, na ɛremmɛn wo.
೧೪ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.
15 Sɛ obi tow hyɛ wo so a, na emfi me; na nea ɔtow hyɛ wo so no de ne ho bɛma wo.
೧೫ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
16 “Hwɛ, ɛyɛ me na mebɔɔ ɔtomfo a ofita nnyansramma mu ma ɛdɛw na ɔde ahoɔden bɔ akode a ɛfata ne dwumadi. Na ɛyɛ me na mabɔ ɔsɛefo sɛ ɔmmɛsɛe ade;
೧೬ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ, ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.
17 akode biara a wɔabɔ atia wo no rennyina na tɛkrɛma biara a ɛbɛbɔ wo sobo no wobɛbɔ agu. Eyi ne Awurade nkoa agyapade, ne wɔn bembu a efi me,” Awurade na ose.
೧೭ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.

< Yesaia 54 >

A Dove is Sent Forth from the Ark
A Dove is Sent Forth from the Ark