< Yeremia 11 >
1 Asɛm a efi Awurade hɔ baa Yeremia nkyɛn ni:
೧ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
2 “Tie apam yi mu nhyehyɛe na ka kyerɛ Yudafo ne wɔn a wɔtete Yerusalem.
೨“ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಹಾಗೂ ಯೆರೂಸಲೇಮಿನ ನಿವಾಸಿಗಳಿಗೂ,
3 Ka kyerɛ wɔn se, sɛɛ na Awurade, Israel Nyankopɔn se: ‘Nnome nka onipa a onni apam yi mu nhyehyɛe so,
೩ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.
4 nea mehyɛ maa mo agyanom bere a miyii wɔn fii Misraim, fononoo a wɔnan dade wɔ mu no.’ Mekae se, ‘Monyɛ osetie mma me na monyɛ biribiara a mehyɛ mo, na mobɛyɛ me nkurɔfo na mayɛ mo Nyankopɔn.
೪ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.
5 Na afei mɛma ntam a mekaa mo agyanom se, mɛma wɔn asase a nufusu ne ɛwo sen wɔ so no aba mu,’ asase a mote so nnɛ yi.” Mibuae se, “Amen, Awurade.”
೫ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.
6 Awurade ka kyerɛɛ me se, “Bɔ saa asɛm yi ho dawuru wɔ Yuda nkurow ne Yerusalem mmɔnten so se: ‘Muntie apam yi ho nhyehyɛe na munni so.
೬ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.
7 Efi bere a miyii mo agyanom fii Misraim besi nnɛ yi, mebɔɔ wɔn kɔkɔ bere biara se, “Monyɛ osetie mma me.”
೭ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.
8 Nanso wɔantie na wɔamfa no asɛm; na mmom, wodii asoɔden a efi wɔn koma bɔne mu no akyi. Ɛno nti memaa nnome a efi apam a mahyɛ wɔn sɛ wonni so na wɔanni so no mu no baa wɔn so.’”
೮ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.
9 Na afei Awurade ka kyerɛɛ me se, “Atuatew apam bi wɔ Yudafo ne wɔn a wɔtete Yerusalem no ntam.
೯ಯೆಹೋವನು ನನಗೆ, “ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
10 Wɔasan kɔ wɔn agyanom a wɔampɛ sɛ wotie mʼasɛm no bɔne ho. Wɔadi anyame foforo akyi akɔsom wɔn. Yerusalem fifo ne Yuda fifo abu apam a me ne wɔn agyanom yɛe no so.
೧೦ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.
11 Ɛno nti nea Awurade se ni: ‘Mede amanehunu a wɔrentumi nguan mfi mu bɛba wɔn so. Ɛwɔ mu sɛ, wosu frɛ me de, nanso merennye wɔn so.
೧೧ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.
12 Yuda nkurow ne Yerusalemfo bɛkɔ akosu afrɛ anyame a wɔhyew nnuhuam ma wɔn no, nanso sɛ amanehunu ba a wɔrentumi mmoa wɔn koraa.
೧೨ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’
13 Wo Yuda, wowɔ anyame a wɔn dodow bɛyɛ sɛ wo nkurow; na afɔremuka a moasisi sɛ mobɛhyew nnuhuam wɔ so ama animguase nyame Baal no dɔɔso sɛ Yerusalem mmɔnten.’
೧೩ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.
14 “Mmɔ mpae mma saa nnipa yi, nni mma wɔn na nsrɛ mma wɔn, efisɛ, sɛ wosu frɛ me wɔ wɔn amanehunu mu a merennye wɔn so.
೧೪ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.
15 “Dɛn na me dɔfo reyɛ wɔ mʼasɔredan mu bere a ɔne bebree hyehyɛ nsɛmmɔnedi ho? Ahodwira nam betumi abɔ wo asotwe agu ana? Sɛ woyɛ wʼamumɔyɛsɛm a na wʼani agye.”
೧೫ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?
16 Awurade, frɛ wo ngodua a enyin frɔmfrɔm a ɛsow aba a ɛyɛ fɛ. Nanso ɔde ahum kɛse bi nteɛmu bɛto mu gya, na ne mman bebubu.
೧೬ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.
17 Asafo Awurade a oduaa wo no ahyɛ amanehunu ho nkɔm wɔ wo ho, efisɛ Israel fifo ne Yuda fifo ayɛ bɔne ahyɛ me abufuw sɛ wɔhyew nnuhuam ma Baal.
೧೭ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.
18 Esiane sɛ Awurade yii pɔw a wabɔ kyerɛɛ me no nti, mihui, efisɛ saa bere no ɔde nea wɔreyɛ no kyerɛɛ me.
೧೮ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ.
19 Meyɛɛ sɛ oguamma a odwo a wɔde no rekɔ akokum no; amma mʼadwene mu sɛ wɔabɔ wɔn tirim pɔw atia me sɛ, “Momma yɛnsɛe dua no ne nʼaba no; momma yentwa no mfi ateasefo asase so, sɛnea wɔnnkae ne din bio.”
೧೯ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.
20 Nanso wo, Asafo Awurade, wo a wubu atɛntrenee na wosɔ koma ne adwene hwɛ, ma minhu wʼaweretɔ wɔ wɔn so, na wo nsam na mede me nsɛm nyinaa hyɛ.
೨೦ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.
21 Ɛno nti nea Awurade ka fa Anatot mmarima a wɔrehwehwɛ wo akum wo na wɔka se, “Nhyɛ nkɔm wɔ Awurade din mu anyɛ saa a, wubewu wɔ yɛn nsa ano,”
೨೧ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.
22 Ɛno nti, nea Asafo Awurade se ni: “Mɛtwe wɔn aso. Wɔn mmerante bewuwu afoa ano, na ɔkɔm bekunkum wɔn mmabarima ne mmabea.
೨೨ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.
23 Wɔrennya wɔn nkae biara mpo, efisɛ mede amanehunu bɛba Anatotfo so wɔ wɔn asotwe afe mu.”
೨೩ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ.