< Yona 2 >
1 Yona wɔ apataa no yam no, ɔbɔɔ Awurade ne Nyankopɔn mpae se,
೧ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು:
2 “Mʼahohia mu mefrɛɛ Awurade, na ogyee me so. Mifi ɔda ase tɔnn srɛɛ mmoa na wutiee me sufrɛ. (Sheol )
೨“ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ. (Sheol )
3 Wotow me kyenee bun mu wɔ po ase tɔnn, na ɔhweam twaa me ho hyiae; wʼasorɔkye ne mframa bu faa me so.
೩ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು
4 Na mekae se, ‘Woapam me afi wʼanim; nanso mede mʼani bɛkyerɛ wʼasɔredan kronkron no bio’
೪‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’
5 Nsu a abu afa me so no bɔɔ me hu, bun no twaa me ho hyiae; po mu nwura kyekyeree me ti ho.
೫ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು.
6 Memem kɔɔ mmepɔw no ase pɛɛ; asase ase kaa me hyɛɛ mu afebɔɔ. Nanso wugyee me nkwa fii amoa mu, Awurade, me Nyankopɔn.
೬ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.
7 “Bere a me nkwa resen akɔ no, mekaee wo Awurade, na me mpaebɔ foro baa wo nkyɛn, wɔ wʼasɔredan kronkron no mu.
೭“ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.
8 “Wɔn a wɔde wɔn ho bata ahoni huhuw ho no hwere adom a anka ɛyɛ wɔn de.
೮“ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.
9 Nanso me, mede ayeyi nnwom bɛbɔ afɔre ama wo. Nea mahyɛ ho bɔ no, mɛyɛ. Nkwagye fi Awurade.”
೯ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”
10 Na afei, Awurade hyɛɛ apataa no ma ɔfee Yona too asase so.
೧೦ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.