< Nnwom 23 >
1 Dawid dwom. Awurade ne me hwɛfo, hwee renhia me.
೧ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು.
2 Ɔma meda wura frɔmfrɔm adidibea; ogya me kɔ nsu a ɛho dwo ho,
೨ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.
3 odwudwo me kra. Ɔde me fa akwantrenee so, ne din nti.
೩ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.
4 Sɛ menam owu sum kabii mu mpo a, minsuro bɔne bi, efisɛ wo ne me na ɛwɔ hɔ; wʼabaa ne wo pema na ɛkyekye me werɛ.
೪ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
5 Woto me pon wɔ mʼatamfo anim. Wode ngo fɔw me tirim; me kuruwa yɛ ma bu so.
೫ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
6 Yiye ne adɔe nko na ebedi mʼakyi me nkwanna nyinaa; na mɛtena Awurade fi daa.
೬ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.