< Nnwom 53 >

1 Wɔde ma dwonkyerɛfo. Wɔde “mahalat” sanku nne na ɛto. Dawid dwom. Ɔkwasea ka wɔ ne koma mu se, “Onyankopɔn bi nni hɔ.” Porɔwee adi wɔn, na wɔn akwan yɛ animguase. Obiara nni hɔ a ɔyɛ ade pa.
ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಪದ್ಯ. ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
2 Onyankopɔn fi ɔsoro hwɛ adesamma wɔ fam sɛ obehu wɔn mu bi a wɔwɔ ntease, anaa ebinom a wɔhwehwɛ Onyankopɔn.
ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
3 Nanso nnipa nyinaa atwe wɔn ho afi Onyankopɔn ho; wɔn nyinaa ayɛ bɔne. Obiara nni hɔ a ɔyɛ papa. Ɔbaako mpo nni hɔ.
ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.
4 Enti abɔnefo rensua nyansa ana? Wɔwe me nkurɔfo sɛnea nnipa di aduan. Wonnsu mfrɛ Onyankopɔn.
ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ.
5 Wɔn na wɔwɔ hɔ a wɔabɔ huboa wɔ faako a ehu nni. Onyankopɔn hwetee wɔn a wɔtow hyɛɛ wo so no nnompe mu; wuguu wɔn anim ase, efisɛ Onyankopɔn buu wɔn animtiaa.
ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.
6 Ao, Israel nkwagye mfi Sion mmra! Awurade bɛsan de ne nkurɔfo agyapade ama wɔn. Na Yakob adi ahurusi, na Israel ani agye!
ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.

< Nnwom 53 >