< Nnwom 84 >

1 Koramma dwom. Awurade Asafo, wʼatenae hɔ yɛ ahomeka!
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ. ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
2 Me kra pere, mpo ɛtɔ beraw, sɛ ɔbɛkɔ Awurade adiwo; me koma ne me honam teɛ mu frɛ Onyankopɔn teasefo.
ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.
3 Mpo akasanoma anya ofi, na asomfena nso anwen ne berebuw, faako a obesow ne mma wɔ beae bi a ɛbɛn wʼafɔremuka, Awurade Asafo, me Hene ne me Nyankopɔn.
ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!
4 Nhyira nka wɔn a wɔte wo fi; na wɔkamfo wo din daa.
ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. (ಸೆಲಾ)
5 Nhyira nka wɔn a wɔwɔ wo mu ahoɔden, na wɔde wɔn koma fi akwantu ase kɔhwehwɛ wo.
ನಿನ್ನಲ್ಲೇ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಿಕರಾಗಿ,
6 Sɛ wɔfa Baka Bon no mu a wɔma hɔ yɛ nsuwansuwa; asusow bere nsu so taataa hɔ.
ಕಣ್ಣೀರಿನ ತಗ್ಗನ್ನು ದಾಟುವಾಗ, ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ.
7 Wɔkɔ no ahoɔden so bere nyinaa, kosi sɛ wɔn mu biara bepue Onyankopɔn anim wɔ Sion.
ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,
8 Asafo Awurade Nyankopɔn, tie me mpaebɔ; Yakob Nyankopɔn, yɛ aso ma me.
“ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು” ಅನ್ನುತ್ತಾರೆ. (ಸೆಲಾ)
9 Ao, Onyankopɔn, hwɛ yɛn nkatabo; fa ahummɔbɔ hwɛ nea woasra no ngo no.
ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.
10 Wʼadiwo hɔ da koro tena ye sen nnafua apem wɔ baabi foforo; mepɛ sɛ mɛyɛ ɔponanohwɛfo wɔ Onyankopɔn fi sen sɛ mɛtena amumɔyɛfo ntamadan mu.
೧೦ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.
11 Efisɛ Awurade Nyankopɔn yɛ owia ne kyɛm; Awurade hu mmɔbɔ na ɔhyɛ anuonyam; ɔmmfa ade pa biara nkame wɔn a wɔteɛ.
೧೧ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?
12 Asafo Awurade, nhyira nka onipa a ɔde ne ho to wo so. Wɔde ma dwonkyerɛfo.
೧೨ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.

< Nnwom 84 >