< 1 Samuel 26 >
1 Sififoɔ kɔɔ Saulo nkyɛn wɔ Gibea kɔka kyerɛɛ no sɛ, “Dawid akɔhinta ne ho wɔ Hakila bepɔ a ɛkyerɛ Yesimon no mu.”
೧ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವುದು ನಿನಗೆ ಗೊತ್ತಿಲ್ಲವೋ?” ಅಂದರು.
2 Enti, Saulo yii nʼakodɔm mpensa kaa wɔn ho kɔɔ Sif ɛserɛ so sɛ wɔrekɔhwehwɛ Dawid.
೨ಆಗ ಸೌಲನು ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕೋಸ್ಕರ ಜೀಫ್ ಅರಣ್ಯಕ್ಕೆ ಹೋಗಿ ಅದರ ಮೂಡಣದಿಕ್ಕಿನಲ್ಲಿ,
3 Saulo bɔɔ nʼatenaeɛ wɔ kwankyɛn wɔ ɛkwan a ɛbɛn Hakila bepɔ a ɛne Yesimon di nhwɛanimu, baabi a Dawid akɔhinta hɔ. Dawid tee sɛ Saulo aba hɔ, enti
೩ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯಮಾಡಿಕೊಂಡರು. ಸೌಲನು ತನ್ನನ್ನು ಹಿಡಿಯುವುದಕ್ಕೋಸ್ಕರ ಅರಣ್ಯಕ್ಕೆ ಬಂದಿದ್ದಾನೆಂಬ ವರ್ತಮಾನವು ಅಲ್ಲಿಯೇ ಇದ್ದ ದಾವೀದನಿಗೆ ತಲುಪಲು
4 ɔsomaa akwansrafoɔ sɛ wɔn tetɛ no.
೪ಅವನು ಕೂಡಲೇ ಗೂಢಚಾರರನ್ನು ಕಳುಹಿಸಿ ಸೌಲನು ಇಳಿದುಕೊಂಡಿದ್ದ ಸ್ಥಳವನ್ನು ಗೊತ್ತುಮಾಡಿಕೊಂಡನು.
5 Dawid kɔpuee baabi a Saulo abɔ ne ho atenaseɛ hɔ anadwo bi. Ɔhunuu sɛ Saulo ne Abner a ɔyɛ Ner babarima a ɔyɛ safohene adeda atenaeɛ no mu a asraafoɔ a wɔadeda atwa ne ho ahyia.
೫ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರ ಹೋಗಿ, ಸೌಲನೂ, ನೇರನ ಮಗನಾದ ಅವನ ಸೇನಾಪತಿ ಅಬ್ನೇರನೂ ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ರಥಗಳನ್ನು ಬಿಟ್ಟಿರುವ ಸ್ಥಳಮಧ್ಯದಲ್ಲಿ ಮಲಗಿದ್ದನು. ಅವನ ಸುತ್ತಲೂ ಸೈನಿಕರು ಇದ್ದರು.
6 Dawid bisaa Hetini Ahimelek ne Seruia babarima Abisai, Yoab nua sɛ, “Hwan na ɔde ne ho bɛbɔ afɔdeɛ ɔne me bɛkɔ Saulo nkyɛn atenaeɛ no mu hɔ?” Abisai buaa sɛ, “Me ne wo bɛkɔ.”
೬ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು.
7 Enti, Dawid ne Abisai kɔɔ asraafoɔ no nkyɛn anadwo, kɔtoo Saulo sɛ wada wɔ atenaeɛ no mu a, ɔde ne pea apoma fam wɔ ne tiri ho pɛɛ. Na Abner ne asraafoɔ no nso atwa ne ho ahyia a wɔadeda.
೭ದಾವೀದನೂ ಮತ್ತು ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ, ಸೈನಿಕರೂ ಅವನ ಸುತ್ತಲೂ ಮಲಗಿದ್ದರು.
8 Abisai ka kyerɛɛ Dawid brɛoo sɛ, “Ɛnnɛ deɛ, Onyankopɔn ayi wo ɔtamfoɔ ahyɛ wo nsa. Enti, ma memfa me pea no nwɔ no pɛn koro, nka no ntim fam. Merenwɔ no mprenu.”
೮ಅಬೀಷೈಯು ದಾವೀದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.
9 Nanso, Dawid ka kyerɛɛ Abisai sɛ, “Dabi, nsɛe no. Hwan na ɔbɛtumi de ne nsa aka onipa a Awurade asra no, na ɔnni ho fɔ?
೯ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.
10 Nokorɛ nie, Awurade bɛbɔ Saulo ahwe da koro, anaasɛ ɔbɛtɔ wɔ ɔko mu, anaasɛ ɔbɛnyini na wawu.
೧೦ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.
11 Awurade mma ɛmpare me sɛ mede me nsa bɛka onipa a Onyankopɔn asra no. Na wonim biribi? Yɛbɛfa ne pea ne ne sukuruwa na yɛakɔ.”
೧೧ತನ್ನ ಅಭಿಷಿಕ್ತನಿಗೆ ಕೈಯೆತ್ತದಂತೆ ಯೆಹೋವನು ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನು, ನೀರಿನ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ” ಎಂದು ಹೇಳಿ
12 Na Dawid faa pea no ne sukuruwa a ɛsi Saulo tiri ho no, na wɔkɔeɛ a obiara anhunu wɔn na wɔn mu biara nso annyane mpo. Na wɔn nyinaa adeda, ɛfiri sɛ, Awurade de nnahɔɔ too wɔn so.
೧೨ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.
13 Dawid foroo bepɔ a ɛne atenaeɛm hɔ di nhwɛanimu kɔsii sɛ ɔduruu baabi a bɔne bi ntumi nka no.
೧೩ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸ್ವಲ್ಪ ದೂರಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತು,
14 Ɔteaam frɛɛ Abner ne Saulo sɛ, “Sɔre oo! Abner.” Abner bisaa sɛ, “Hwan nie?”
೧೪“ಅಬ್ನೇರನೇ ಕಿವಿಗೊಡುವುದಿಲ್ಲವೋ?” ಎಂದು ನೇರನ ಮಗನಾದ ಅವನಿಗೂ, ಸೈನಿಕರಿಗೂ ಕೇಳಿಸುವಂತೆ ಕೂಗಿದನು. ಅಬ್ನೇರನು, “ಅರಸನನ್ನು ಕೂಗುವ ನೀನಾರು?” ಎಂದು ಕೇಳಿದನು.
15 Dawid goroo ne ho sɛ, “Abner, woyɛ onipa kɛseɛ, ɛnte saa? Israelman mu nyinaa, ɛhe na otumfoɔ bi wɔ? Na adɛn enti na woannwɛn wo wura, ɔhene no ɛberɛ a obi baa sɛ ɔrebɛkum no no?
೧೫ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೋ? ಇಸ್ರಾಯೇಲರಲ್ಲಿ ನಿನಗೆ ಸಮಾನನಾದವನು ಯಾರು? ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ. ಜನರಲ್ಲೊಬ್ಬನು ಒಳಕ್ಕೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.
16 Saa asɛm yi nyɛ koraa! Meka ntam wɔ Awurade din mu sɛ, wo ne wo mmarima no nyinaa sɛ owuo, ɛfiri sɛ, moantumi ammɔ mo wura, deɛ Awurade asra noɔ no ho ban. Monhwɛ mo ho nhyia. Ɔhene no pea ne ne sukuruwa a na ɛsi ne tiri ho no wɔ he?”
೧೬ನೀನು ಹೀಗೆ ಮಾಡುವುದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು” ಎಂದು ಕೂಗಿ ಹೇಳಿದನು.
17 Saulo tee Dawid nne enti ɔfrɛɛ sɛ, “Wo nie me ba Dawid?” Na Dawid buaa no sɛ, “Nana, ɛyɛ me.
೧೭ಸೌಲನು ದಾವೀದನ ಸ್ವರದ ಗುರುತು ಹಿಡಿದು ಅವನನ್ನು, “ದಾವೀದನೇ ನನ್ನ ಮಗನೇ, ಇದು ನಿನ್ನ ಸ್ವರವೋ” ಎಂದು ಕೇಳಲು ಅವನು, “ಅರಸನೇ, ನನ್ನ ಒಡೆಯನೇ ಹೌದು, ನನ್ನ ಸ್ವರವೇ,
18 Adɛn enti na wotaa me? Ɛdeɛn na mayɛ? Me bɔne ne sɛn?
೧೮ನನ್ನ ಸ್ವಾಮಿಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೇ? ನಾನೇನು ಮಾಡಿದೆನು?
19 Na afei mepɛ sɛ me wura tie ne ɔsomfoɔ, Nana. Sɛ Awurade na wahwanyan wo atia me a, ɛnneɛ ma ɔnnye mʼafɔdeɛ. Na sɛ nso ɛyɛ onipa nhyehyɛeɛ a, ɛnneɛ, Awurade nnome wɔn a wɔyɛɛ saa nhyehyɛeɛ no. Ɛfiri sɛ, moapam me afiri me fie sɛdeɛ ɛbɛyɛ a, merentumi ne Awurade nkurɔfoɔ ntena, nsom sɛdeɛ ɛsɛ.
೧೯ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.
20 Menwu wɔ ananafoɔ asase so a ɛhɔ ne Awurade anim ɛkwan ware anaa? Adɛn enti na Israelhene atu sa, rehwehwɛ edwie baako pɛ? Adɛn enti na mokɔ me atwee sɛdeɛ ɔbɔfoɔ kɔ ha pɛ akokɔhwedeɛ wɔ mmepɔ so?”
೨೦ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಲು ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲರ ಅರಸನು ಹೊರಟು ಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ” ಅಂದನು.
21 Ɛnna Saulo kaa nokorɛ sɛ, “Mayɛ bɔne. Sane bra fie, me ba na merenha wo bio, ɛfiri sɛ ɛnnɛ, woama me nkwa asom wo bo. Mayɛ nkwaseadeɛ na mafom yie.”
೨೧ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು
22 Dawid buaa sɛ, “Ao, ɔhene, wo pea nie. Ma wo mmeranteɛ no mu baako mmra mmɛgye.
೨೨ದಾವೀದನು ಅರಸನಿಗೆ, “ಅರಸನೇ, ಇಗೋ ನಿನ್ನ ಬರ್ಜಿ ಇಲ್ಲಿದೆ, ಸೇವಕರಲ್ಲೊಬ್ಬನು ಬಂದು ಅದನ್ನು ತೆಗೆದುಕೊಂಡು ಹೋಗಲಿ.
23 Awurade na ɔma papayɛ ne nokorɛdie so akatua. Awurade de wo hyɛɛ me tumi ase mpo, mampɛ sɛ mɛkum wo, ɛfiri sɛ woyɛ obi a Awurade asra no.
೨೩ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.
24 Afei, me kra nsom Awurade bo, sɛdeɛ wo deɛ asom me bo ɛnnɛ yi. Ɔnnye me mfiri me haw nyinaa mu.”
೨೪ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು.
25 Na Saulo ka kyerɛɛ Dawid sɛ, “Nhyira nka wo, me ba Dawid. Wobɛyɛ mmaninneɛ ne nkonimdini kɛseɛ.” Na Dawid kɔeɛ ɛna Saulo nso kɔɔ efie.
೨೫ಆಗ ಸೌಲನು ದಾವೀದನಿಗೆ, “ನನ್ನ ಮಗನೇ ದಾವೀದನೇ ನೀನು ಆಶೀರ್ವಾದ ಹೊಂದು. ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ” ಎಂದು ಹೇಳಿ ತನ್ನ ಊರಿಗೆ ಹೊರಟನು. ದಾವೀದನು ತನ್ನ ದಾರಿಯನ್ನು ಹಿಡಿದನು.