< Malaki 2 >
1 Afei mo asɔfoɔ, saa animka yi wɔ mo.
೧ಯಾಜಕರೇ, ಈ ಅಪ್ಪಣೆಯು ಈಗ ನಿಮಗಾಗಿದೆ.
2 Sɛ moantie, sɛ moannyɛ mo adwene sɛ mobɛhyɛ me animuonyam a, mede nnome bɛba mo so, na mɛdane mo nhyira ama ayɛ nnome. Aane, madome mo dada, ɛfiri sɛ monyɛɛ mo adwene sɛ mobɛhyɛ me animuonyam, sɛdeɛ Asafo Awurade seɛ nie.
೨ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.
3 Mo enti mɛka mo asefoɔ anim, na mede mo afahyɛ afɔrebɔ mmoa no agyanan bɛpete mo anim, na wɔasoa mo aka ho akɔ.
೩ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.
4 Na mobɛhunu sɛ, masoma ma wɔde saa animka yi abrɛ mo sɛdeɛ ɛbɛyɛ a me ne Lewi apam no bɛkɔ so atena hɔ. Sɛdeɛ Asafo Awurade seɛ nie.
೪ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
5 Me ne no yɛɛ apam, nkwa ne asomdwoeɛ apam. Na apam no botaeɛ ne sɛ ɛbɛma Lewi nkwa ne asomdwoeɛ, enti memaa no nkwa ne asomdwoeɛ.
೫“ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು.
6 Nokorɛ nkyerɛkyerɛ firii nʼanom, na wanka nkontomposɛm biara. Ɔne me nantee asomdwoeɛ ne nokorɛdie mu, na ɔmaa bebree danee wɔn ho firii bɔne ho.
೬ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.
7 “Ɛsɛ sɛ ɔsɔfoɔ ano kora nimdeɛ. Nnipa hwehwɛ nkyerɛkyerɛ firi ne nkyɛn, ɛfiri sɛ ɔyɛ Asafo Awurade no somafoɔ.
೭ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;
8 Nanso moamane afiri ɛkwan no so, na mo nkyerɛkyerɛ ama bebree asuntisunti; moabu me ne Lewi apam no so.” Sɛdeɛ Asafo Awurade seɛ nie.
೮“ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
9 “Enti, mama mo anim agu ase na mabrɛ mo ase wɔ nnipa anim, ɛfiri sɛ moannante mʼakwan so na mmom mode animhwɛ abu mmara so.”
೯“ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”
10 Yɛn nyinaa mfiri Agya baako anaa? Ɛnyɛ Onyankopɔn baako na ɔbɔɔ yɛn? Na, afei, adɛn enti na yɛnni yɛn ho yɛn ho nokorɛ, na yɛde bu yɛn agyanom apam no so?
೧೦ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?
11 Yuda anni nokorɛ. Akyiwadeɛ bi asi wɔ Israel ne Yerusalem mu: Yuda agu hyiadan a Awurade dɔ no ho fi, ɛfiri sɛ waware ɔbaa a ɔsom ananafoɔ nyame.
೧೧ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.
12 Ɔbarima a ɔyɛ yei deɛ, sɛdeɛ ɔteɛ biara, Awurade mpam no mfiri Yakob ntomadan mu, mpo sɛ ɔde afɔrebɔdeɛ rebrɛ Asafo Awurade no koraa a.
೧೨ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು.
13 Adeɛ a moyɛ bio ne sɛ: mode nisuo fɔ Awurade afɔrebukyia no. Mote nisuo na motwa adwo ɛfiri sɛ ɔnhwɛ mo afɔrebɔdeɛ no bio, na ɔmmfa anigyeɛ nnye mfiri mo nkyɛn.
೧೩ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.
14 Mobisa sɛ, “Adɛn nti?” Ɛfiri sɛ Awurade te sɛ ɔdanseni a ɔda wo ne wo mmeranteberɛ mu yere ntam, a woanni no nokorɛ.
೧೪“ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.
15 Ɛnyɛ Awurade korɔ no ara na ɔbɔɔ mo? Ɔhonam fam ne honhom fam no, moyɛ ne dea. Deɛn na Onyankopɔn hwehwɛ? Ɔrehwehwɛ mma a onyamesuro wɔ wɔn mu. Enti da wo ho so wɔ honhom mu, na di wo mmeranteberɛ mu yere nokorɛ.
೧೫ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”
16 “Mekyiri awaregyaeɛ!” Sɛdeɛ Awurade Israel Onyankopɔn seɛ nie. “Na metane ɔbarima a ɔde abufuhyeɛ hyɛ ne yere so na ɔsane de ne ntoma kata ne so,” sɛdeɛ Asafo Awurade seɛ nie. Enti da wo ho so wɔ honhom mu, na di nokorɛ.
೧೬ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನಾನು ಪತ್ನಿತ್ಯಾಗವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.”
17 Mode mo nsɛm tuatua Awurade aso. Mobisa sɛ, “Ɛkwan bɛn so na moatuatua nʼaso?” Moka sɛ, “Wɔn a wɔyɛ bɔne nyinaa tene wɔ Awurade anim, na wɔsɔ nʼani,” anaa “Onyankopɔn ɔtemmufoɔ nokwafoɔ no wɔ he?”
೧೭ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.