< Sakaria 8 >
1 Asafo Awurade asɛm baa me nkyɛn bio.
೧ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
2 Yei ne deɛ Asafo Awurade seɛ: “Metwe Sion ho ninkunu pa ara; metwe ne ho ninkunu anibereɛ so.”
೨ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.”
3 Deɛ Awurade seɛ nie, “Mɛsane akɔ Sion na makɔtena Yerusalem. Afei wɔbɛfrɛ Yerusalem Nokorɛ Kuropɔn, na Asafo Awurade bepɔ no, wɔbɛfrɛ no Bepɔ Kronkron.”
೩ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”
4 Deɛ Asafo Awurade seɛ nie: “Nkɔkoraa ne mmerewa bɛtenatena Yerusalem mmɔntene so bio a obiara kura poma, ɛsiane onyini enti.
೪ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು.
5 Na mmarimaa ne mmaayewa a wɔredi agorɔ bɛhyɛ kuropɔn no mmɔntene so ma.”
೫ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಮತ್ತು ಬಾಲಕಿಯರು ತುಂಬಿಕೊಂಡಿರುವರು.”
6 Deɛ Asafo Awurade seɛ nie: “Nkaeɛfoɔ yi deɛ, ɛbɛyɛ wɔn nwanwa saa ɛberɛ no, na me nso ɛbɛyɛ me nwanwa anaa?”
೬ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ.
7 Deɛ Asafo Awurade seɛ nie: “Mɛgye me nkurɔfoɔ afiri aman a ɛwɔ apueeɛ ne atɔeɛ no so.
೭ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,
8 Mede wɔn bɛsane aba abɛtena Yerusalem; wɔbɛyɛ me nkurɔfoɔ, na mayɛ wɔn Onyankopɔn wɔ nokorɛ ne tenenee mu.”
೮ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”
9 Deɛ Asafo Awurade seɛ nie: “Mo a afei na morete nsɛm a adiyifoɔ no kaeɛ no; adiyifoɔ a na wɔwɔ hɔ ɛberɛ a wɔtoo Asafo Awurade fie fapem no, monhyɛ mo ho den, na moatumi asi asɔredan no.
೯ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!
10 Ɛberɛ no nnya nsoeɛ no, na wɔntua apaadie ho ka mma nnipa anaa mmoa. Atamfoɔ enti, na obiara ntumi nkɔ nʼadwuma so asomdwoeɛ mu, ɛfiri sɛ na mede mpaapaemu aba wɔn mu.
೧೦ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು.
11 Nanso, afei deɛ, merenyɛ nkaeɛfoɔ yi sɛdeɛ meyɛɛ kane no,” sɛdeɛ Asafo Awurade seɛ nie.
೧೧ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರುವುದಿಲ್ಲ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
12 “Aba no bɛnyini yie, bobe bɛso nʼaba, asase no bɛbɔ nʼaduane na ɔsoro nso bɛtɔ ne bosuo. Mede saa nneɛma yi nyinaa bɛma nkaeɛfoɔ yi sɛ wɔn agyapadeɛ.
೧೨“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.
13 Mo, Yuda ne Israel, moayɛ nnome wɔ aman no mu, nanso mɛgye mo na moayɛ nhyira. Monnsuro, na monhyɛ mo ho den.”
೧೩ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”
14 Deɛ Asafo Awurade seɛ nie: “Sɛdeɛ meyɛɛ mʼadwene sɛ mede atoyerɛnkyɛm bɛba mo so, na mannya ahummɔborɔ ɛberɛ a mo agyanom fuu me bo no,
೧೪ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ
15 saa ara na afei mayɛ mʼadwene sɛ, mɛyɛ Yerusalem ne Yuda yie. Monnsuro.
೧೫ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನ ನುಡಿ.
16 Deɛ ɛsɛ sɛ moyɛ nie: Monni mo ho mo ho nokorɛ. Mommu atɛntenenee wɔ mo asɛnniiɛ;
೧೬“ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;
17 mommmɔ po bɔne ntia mo ho mo ho, na monnnɔ ntam hunu. Mekyiri saa nneɛma yi nyinaa,” sɛdeɛ Awurade seɛ nie.
೧೭ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”
18 Asafo Awurade asɛm baa me nkyɛn bio.
೧೮“ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
19 Deɛ Asafo Awurade seɛ nie: “Abosome ɛnan, enum, nson ne edu mu mmuadadie no bɛyɛ anigyeɛ ne ahosɛpɛ mmerɛ, na ɛbɛyɛ anigyeɛ afahyɛ ama Yuda. Enti monnɔ nokorɛ ne asomdwoeɛ.”
೧೯ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”
20 Deɛ Asafo Awurade seɛ nie, “Nnipa bebree ne wɔn a wɔtete nkuropɔn bebree so bɛba ara,
೨೦ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;
21 na nnipa a wɔfiri kuropɔn baako so bɛkɔ foforɔ so akɔka sɛ, ‘Momma yɛnkɔ seesei ara nkɔsrɛ Awurade na yɛnhwehwɛ Asafo Awurade. Me deɛ, merekɔ.’
೨೧ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು.
22 Na nnipa bebree ne aman akɛseɛ bɛba Yerusalem abɛhwehwɛ Asafo Awurade no, na wɔakoto asrɛ no.”
೨೨ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.”
23 Deɛ Asafo Awurade seɛ nie: “Nna no mu, nnipa edu a wɔka kasa ahodoɔ na wɔfiri aman ahodoɔ so bɛba abɛsɔ Yudani atadeɛ mmuano mu na wɔbɛka sɛ, ‘Wo ne yɛn nkɔ, ɛfiri sɛ yɛate sɛ Onyankopɔn ka wo ho.’”
೨೩ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.