< 1 до солунян 3 >

1 Отже, коли ми більше не могли це зносити, то вирішили, що краще самим залишитися в Афінах,
ಆದುದರಿಂದ ನಾನು ಇನ್ನು ತಾಳಲಾರದೆ ಅಥೇನೆಯಲ್ಲಿ ಒಬ್ಬಂಟಿಗನಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿ,
2 а до вас послати Тимофія, нашого брата й Божого працівника [в поширенні] Доброї Звістки Христа, щоб він зміцнив та підбадьорив вас у вашій вірі,
ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.
3 щоб ніхто не захитався в цих стражданнях, бо ви знаєте, що ми на це призначені.
ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.
4 Адже коли ми були з вами, то застерігали, що нас будуть переслідувати. І, як ви знаєте, так і сталося.
ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು.
5 Тож, коли я вже не міг це зносити, я послав його дізнатися про вашу віру, чи спокусник не спокусив вас і чи наш труд не був марним.
ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.
6 Але Тимофій, повернувшись від вас, приніс добру звістку про вашу віру та любов. [Він розповів], що ви завжди добрим словом згадуєте про нас і що бажаєте побачити нас, як і ми вас.
ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.
7 Отже, брати, в усіх наших лихах та стражданнях ми втішилися вашою вірою.
ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು.
8 Адже ми тепер ожили, [знаючи], що ви твердо стоїте в Господі.
ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ.
9 Як ми можемо віддячити Богові за вас, за всю радість, яку ми маємо через вас перед Богом?
ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?
10 Удень та вночі ми ревно молимось, щоб побачити вас знову й додати те, чого не вистачає вашій вірі.
೧೦ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.
11 Тепер нехай наш Бог і Отець і наш Господь Ісус спрямують нашу дорогу до вас.
೧೧ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ.
12 Нехай Господь збільшить та примножить вашу любов одне до одного та до всіх інших так, як і ми [сповнені любові] до вас.
೧೨ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ.
13 Нехай Він зміцнить ваші серця, щоб ви були бездоганними та святими перед нашим Богом та Отцем, коли прийде наш Господь Ісус зі всіма своїми святими. Амінь.
೧೩ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.

< 1 до солунян 3 >