< 2 Тимофію 2 >

1 Отже, ти, сину мій, зміцнюйся в благодаті, що є в Христі Ісусі.
ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.
2 І те, що ти почув від мене перед багатьма свідками, довір надійним людям, які спроможні навчати інших.
ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.
3 Як добрий воїн Христа Ісуса, приєднайся до страждань.
ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.
4 Жоден воїн не бере участі в життєвих справах, аби бути до вподоби тому, хто збирає військо.
ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.
5 І коли хтось бере участь у змаганнях, то не отримує вінка, якщо змагається не за правилами.
ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ.
6 Фермер, що важко працює, повинен першим отримати плоди.
ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ.
7 Розмірковуй над тим, що я кажу, а Господь дасть тобі розуміння в усьому.
ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು.
8 Пам’ятай Ісуса Христа, Який був нащадком Давида і воскрес із мертвих, згідно з моєю Доброю Звісткою,
ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ.
9 заради якої я страждаю і мене ув’язнено, як злочинця. Але Боже Слово не ув’язнити!
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
10 Тому я все терплю заради обраних, щоб і вони одержали спасіння, яке в Христі Ісусі, разом із вічною славою. (aiōnios g166)
೧೦ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ. (aiōnios g166)
11 Правдиве це твердження: «Якщо ми померли разом [із Ним], то й житимемо разом [із Ним].
೧೧ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು,
12 Якщо ми страждаємо, то й царюватимемо разом [із Ним]. Якщо зречемося [Його], то й Він зречеться нас.
೧೨ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
13 Якщо ми невірні, то Він залишається вірним, адже Він не може зректися Самого Себе».
೧೩ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.”
14 Нагадуй [їм] про це й наполегливо проси [їх] перед Богом не сперечатись про слова, [бо від цього] немає ніякої користі, [натомість це приносить] шкоду тим, хто слухає.
೧೪ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.
15 Старайся представити себе перед Богом перевіреною [людиною], працівником, якому немає чого соромитися і який правильно пояснює Слово істини.
೧೫ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
16 Остерігайся світських пустих балачок, бо [ті, хто займається ними, ] усе більше матимуть успіх у безбожності.
೧೬ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.
17 Їхнє слово поширюватиметься, немов гангрена. Такими є Гіменей і Філет,
೧೭ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.
18 які віддалилися від істини, кажучи, що воскресіння вже відбулося, і цим руйнують віру деяких.
೧೮ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.
19 І все ж Божа основа залишається міцною, маючи це підтвердження: «Господь знає тих, хто належить Йому» і «Кожен, хто називає Господнє ім’я, повинен віддалитися від неправди».
೧೯ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.
20 У великому домі є не лише золоті й срібні посудини, але й дерев’яні та глиняні: одні для почесного [вжитку], а інші для непочесного.
೨೦ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.
21 Отже, якщо хтось очистить себе від цього, то буде для почесного [вжитку] – освячений і корисний Володареві, придатний до всякої доброї справи.
೨೧ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.
22 Тікай від пожадливостей молодості та йди за праведністю, вірою, любов’ю [й] миром разом із тими, що призивають Господа від чистого серця.
೨೨ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
23 Уникай нерозумних і безглуздих балачок, знаючи, що вони породжують конфлікти.
೨೩ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
24 А Господній раб не повинен сваритися. Навпаки: він має бути лагідним з усіма, спроможним навчати, терпеливим,
೨೪ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ
25 наставляючи з лагідністю тих, хто противиться, у надії, що Бог дасть їм покаяння, [яке веде] до пізнання істини,
೨೫ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.
26 і вони прийдуть до тями, [вирвавшись] із пастки диявола, який зловив їх живцем, щоб чинили його волю.
೨೬ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.

< 2 Тимофію 2 >