< До євреїв 13 >

1 Братерська любов нехай буде [між вами].
ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.
2 Не забувайте про гостинність до чужинців, бо так деякі [люди], самі того не знаючи, виявляли гостинність до ангелів.
ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
3 Пам’ятайте про тих, хто перебуває у в’язниці, наче ви ув’язнені з ними, [і] про тих, хто страждає, бо й ви перебуваєте в тілі.
ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.
4 Шлюб у всіх нехай буде в пошані, а подружнє ліжко залишиться чистим, адже Бог судитиме розпусників та перелюбників.
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
5 Не будьте грошолюбними, натомість задовольняйтеся тим, що маєте, адже Бог сказав: «Я ніколи тебе не покину й ніколи тебе не залишу!»
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
6 Тому ми сміливо говоримо: «Господь зі мною – не боятимуся! Що зробить мені людина?»
ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
7 Пам’ятайте про своїх наставників, котрі проповідували вам Слово Боже, і, дивлячись на кінець їхнього життя, наслідуйте їхню віру.
ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.
8 Ісус Христос учора, сьогодні й навіки Той Самий. (aiōn g165)
ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು. (aiōn g165)
9 Нехай вас не вводять в оману всілякими чужими вченнями, бо краще зміцнювати серце благодаттю, а не їжею, яка не принесла користі тим, хто її дотримується.
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.
10 Ми маємо жертовник, з якого ті, хто служить в Оселі, не мають права їсти.
೧೦ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.
11 Адже тіла тварин, кров яких первосвященник вносить у святилище як жертву за гріх, спалюють за межами табору.
೧೧ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.
12 Тому й Ісус, щоб освятити людей своєю кров’ю, постраждав поза брамою міста.
೧೨ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.
13 Тож виходьмо до Нього за табір, несучи ганьбу, яку Він поніс.
೧೩ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.
14 Бо тут у нас немає постійного міста, але ми шукаємо майбутнього.
೧೪ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.
15 Отже, приносьмо через Ісуса Богові жертву хвали, тобто плід вуст, які сповідують Його ім’я.
೧೫ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
16 І не забувайте творити добро та ділитися з іншими, бо такі жертви Богові до вподоби.
೧೬ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
17 Слухайтеся своїх наставників і підкоряйтесь [їм], бо вони піклуються про ваші душі, як ті, що мають дати звіт [за вас перед Богом]. [Слухайтеся, ] щоб вони робили це з радістю, а не із зітханням, бо це не корисно для вас.
೧೭ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.
18 Моліться за нас, бо ми впевнені, що маємо добре сумління та бажаємо в усьому поводитись правильно.
೧೮ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.
19 Особливо прошу вас молитися, щоб я найближчим часом міг повернутися до вас.
೧೯ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.
20 Нехай Бог миру, Який через кров вічного Завіту підняв із мертвих нашого Господа Ісуса – великого Пастиря овець, (aiōnios g166)
೨೦ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್. (aiōn g165, aiōnios g166)
21 удосконалить вас у всякому доброму ділі для виконання Його волі й здійснює в нас те, що Йому до вподоби, через Ісуса Христа, Якому слава навіки-віків! Амінь. (aiōn g165)
೨೧
22 Благаю вас, брати, прийміть це слово заохочення, адже я написав вам досить коротко.
೨೨ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.
23 Знайте, що наш брат Тимофій звільнений, і якщо він незабаром приїде, то побачу вас разом із ним.
೨೩ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
24 Вітайте всіх своїх наставників і всіх святих. Вітають вас ті, хто в Італії.
೨೪ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.
25 Благодать [нехай буде] з усіма вами.
೨೫ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.

< До євреїв 13 >