< Від Івана 4 >

1 Коли Ісус дізнався, що фарисеї почули, начебто Він хрестить більше учнів, ніж Іван, –
ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,
2 хоча сам Ісус не хрестив, а хрестили Його учні, –
(ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು),
3 то залишив Юдею й знову пішов до Галілеї.
ಆತನು ಯೂದಾಯವನ್ನು ಬಿಟ್ಟು ತಿರುಗಿ ಗಲಿಲಾಯಕ್ಕೆ ಹೊರಟು ಹೋದನು.
4 Йому треба було пройти через Самарію,
ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು.
5 і Він прийшов у самарянське місто Сихар, неподалік від землі, яку Яків дав своєму синові Йосифові.
ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.
6 Там була криниця Якова, і Ісус, утомившись від дороги, сів [відпочити] біля криниці. Було десь близько шостої години.
ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.
7 Одна жінка з Самарії прийшла по воду. Ісус сказав їй: ―Дай Мені напитися!
ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು.
8 (Його учні пішли до міста купити їжі.)
ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು.
9 Жінка-самарянка сказала Йому: ―Як Ти, юдей, просиш пити в мене – жінки-самарянки? (Річ у тім, що юдеї не спілкуються з самарянами.)
ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.
10 Ісус відповів їй: ―Якби ти знала про дар Божий і Хто Той, Що каже тобі: «Дай Мені напитися!», ти б сама просила в Нього, і Він дав би тобі живої води.
೧೦ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.
11 Жінка сказала: ―Господи, Ти навіть відра не маєш, а криниця глибока, звідки ж у Тебе жива вода?
೧೧ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?
12 Невже Ти більший від нашого батька Якова, який дав нам криницю і сам із неї пив, а також його сини та його стада?
೧೨ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು,
13 Ісус відповів: ―Кожен, хто п’є цю воду, знову захоче пити.
೧೩ಯೇಸು ಆಕೆಗೆ, “ಈ ನೀರನ್ನು ಕುಡಿಯುವವರೆಲ್ಲರಿಗೆ ಪುನಃ ನೀರಡಿಕೆಯಾಗುವುದು,
14 Але той, хто п’є воду, яку Я йому дам, повік не відчуватиме спраги. Вода, яку Я йому дам, стане в ньому джерелом води, що тече в життя вічне. (aiōn g165, aiōnios g166)
೧೪ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರುಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು. (aiōn g165, aiōnios g166)
15 Жінка сказала Йому: ―Господи, дай мені такої води, щоб я більше не хотіла пити й не приходила сюди черпати.
೧೫ಆ ಸ್ತ್ರೀಯು, “ಅಯ್ಯಾ, ನನಗೆ ಆ ನೀರನ್ನು ಕೊಡು, ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗುವುದಿಲ್ಲ. ನೀರು ಸೇದುವುದಕ್ಕೆ ಇಷ್ಟು ದೂರ ಬರಬೇಕಾಗಿರುವುದಿಲ್ಲ” ಅನ್ನಲು,
16 Він сказав їй: ―Іди, поклич свого чоловіка та приходь сюди.
೧೬ಯೇಸು ಆಕೆಗೆ “ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ” ಎಂದು ಹೇಳಿದನು.
17 Вона відповіла: ―У мене немає чоловіка. Ісус сказав: ―Ти добре відповіла, що не маєш чоловіка.
೧೭ಅದಕ್ಕೆ ಆ ಸ್ತ್ರೀಯು “ನನಗೆ ಗಂಡನಿಲ್ಲ” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯೇ.
18 Адже в тебе було п’ять чоловіків, і той, з ким ти зараз живеш, тобі не чоловік. Тут ти сказала правду.
೧೮ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ” ಎಂದನು.
19 Жінка сказала Йому: ―Господи, я бачу, що Ти пророк.
೧೯ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.
20 Наші батьки поклонялися на цій горі, а ви, [юдеї, ] кажете, що в Єрусалимі те місце, де потрібно Йому поклонятися.
೨೦ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.
21 Ісус відповів: ―Повір Мені, жінко, прийде час, коли не будете поклонятися Отцеві ні на цій горі, ні в Єрусалимі.
೨೧ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.
22 Ви, [самаряни], поклоняєтесь тому, чого не знаєте, ми ж знаємо, Кому поклоняємося, бо спасіння – від юдеїв.
೨೨ಸಮಾರ್ಯದವರಾದನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.
23 Але прийде час, і вже прийшов, коли справжні поклонники будуть поклонятися Отцеві в Дусі та істині, бо таких поклонників шукає Собі Отець.
೨೩ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.
24 Бог є Дух, і хто поклоняється Йому, той повинен поклонятися в Дусі та істині.
೨೪ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರುಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.
25 Жінка сказала Йому: ―Я знаю, що має прийти Месія, Якого називають Христос. Коли Він прийде, Він нам усе пояснить.
೨೫ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,
26 Ісус сказав їй: ―Це Я, Той, Хто говорить із тобою.
೨೬ಯೇಸು ಆಕೆಗೆ “ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದನು.
27 У той час повернулися Його учні й дивувалися, що Він говорить із жінкою. Однак ніхто не запитав: «Чого хочеш?» або: «Чому розмовляєш із нею?»
೨೭ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.
28 Тоді жінка залишила своє відро, повернулася до міста та сказала людям:
೨೮ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ,
29 «Ходіть та побачите Чоловіка, Який сказав мені все, що я зробила! Чи Він часом не Христос?»
೨೯“ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.
30 Тоді [люди] вийшли з міста та прийшли до Ісуса.
೩೦ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು.
31 У цей час Його учні просили Його: ―Равві, поїж!
೩೧ಅಷ್ಟರೊಳಗೆ ಶಿಷ್ಯರು “ಗುರುವೇ, ಊಟಮಾಡು” ಎಂದು ಆತನನ್ನು ಕೇಳಿಕೊಂಡರು.
32 Але Він сказав їм: ―Я маю їсти іншу їжу, про яку ви не знаєте.
೩೨ಆದರೆ ಆತನು ಅವರಿಗೆ “ನಿಮಗೆ ತಿಳಿಯದಿರುವ ಆಹಾರವು ನನ್ನ ಬಳಿಯಲ್ಲಿ ಉಂಟು” ಎಂದು ಹೇಳಲು
33 Тоді учні почали говорити один до одного: «Чи не приніс Йому хтось їсти?»
೩೩ಶಿಷ್ಯರು, “ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
34 Ісус сказав їм: ―Моя їжа в тому, щоб чинити волю Того, Хто надіслав Мене, і звершити Його справу.
೩೪ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.
35 Хіба ви не говорите: «Ще чотири місяці, і будуть жнива?» Отже, Я кажу вам: підійміть ваші очі й подивіться на поля, бо вони вже білі, готові для жнив.
೩೫‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.
36 Жнець отримує свою винагороду. Він збирає врожай для вічного життя, щоб раділи разом – той, хто сіє, і той, хто жне. (aiōnios g166)
೩೬ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು. (aiōnios g166)
37 У цьому справджується слово: один сіє, а інший жне.
೩೭‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.
38 Я надіслав вас жати не те, над чим ви трудилися. Інші трудилися, а ви їхню працю пожинаєте.
೩೮ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು.
39 Багато самарян із того міста увірувало в Ісуса через слова, засвідчені жінкою: «Він сказав мені все, що я зробила».
೩೯“ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.
40 Коли самаряни прийшли до Нього, то просили Його залишитися з ними, і Він залишався там два дні.
೪೦ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.
41 І ще більше увірувало через Його Слово.
೪೧ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು,
42 Вони казали жінці: «Ми вже віримо не через твої слова, а тому що ми самі чули й знаємо, що Він дійсно Спаситель світу».
೪೨ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.
43 Через два дні Він вирушив звідти до Галілеї.
೪೩ಎರಡು ದಿನಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
44 Адже Ісус Сам свідчив, що пророк на своїй батьківщині пошани не має.
೪೪ಏಕೆಂದರೆ ಪ್ರವಾದಿಗೆ ಸ್ವಂತದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು.
45 Проте коли Він прибув до Галілеї, галілеяни прийняли Його гостинно, тому що вони були в Єрусалимі на святі Пасхи та бачили все, що Він там зробив.
೪೫ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.
46 [Ісус] знов прийшов у Кану Галілейську, де перетворив воду у вино. На той час у Капернаумі син одного придворного був хворий.
೪೬ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.
47 Почувши, що Ісус прийшов з Юдеї до Галілеї, він прийшов до Нього й благав, щоб Він прийшов зцілити його сина, який був при смерті.
೪೭ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.
48 Ісус сказав йому: ―Якщо ви не побачите ознак та чудес, ніколи не повірите!
೪೮ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.
49 Придворний відповів Йому: ―Господи, прийди, доки мій син не помер.
೪೯ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು
50 Ісус відповів йому: ―Іди, твій син буде жити. Чоловік повірив тому, що сказав Ісус, та пішов.
೫೦ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು.
51 Коли він був іще в дорозі, раби зустріли його й сказали, що його син живий.
೫೧ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.
52 Він запитав, о котрій годині йому стало краще, і вони сказали: «Вчора о сьомій годині гарячка залишила його».
೫೨ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು.
53 Батько зрозумів, що це сталося тоді, коли Ісус сказав: «Твій син буде жити». І повірив він та увесь його дім.
೫೩ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.
54 Це було друге знамення, яке зробив Ісус після того, як повернувся з Юдеї в Галілею.
೫೪ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.

< Від Івана 4 >