< Від Луки 18 >

1 Тоді [Ісус] розповів їм притчу про те, що їм треба завжди молитися та не занепадати духом.
ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
2 Він сказав: ―В одному місті був суддя, який не боявся Бога та не соромився людей.
ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.
3 У тому ж місті була вдова, котра приходила до нього й просила: «Захисти мене від мого кривдника!»
ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು.
4 Деякий час він відмовлявся, але потім промовив до себе: «Хоч я і Бога не боюся, і людей не соромлюся,
ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,
5 але через те, що ця вдова не дає мені спокою, захищу її, щоб вона не приходила безперестанку й не докучала мені».
ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.”
6 І сказав Господь: ―Почуйте, що каже неправедний суддя!
ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.
7 Так невже Бог не захистить Своїх обраних, котрі взивають до Нього день і ніч? Чи забариться Він?
ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?
8 Кажу вам: Він негайно захистить їх. Але коли прийде Син Людський, чи знайде Він віру на землі?
ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.
9 Тим, хто був упевнений в особистій праведності та принижував інших, [Ісус] розповів таку притчу:
ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
10 ―Двоє чоловіків прийшли в Храм помолитися. Один був фарисеєм, а інший – митником.
೧೦ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.
11 Фарисей стояв і так собі молився: «Боже, дякую Тобі за те, що я не такий, як інші люди, – грабіжники, неправедні, невірні або як цей митник.
೧೧ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.
12 Я пощу двічі на тиждень, даю десятину зі всякого прибутку!»
೧೨ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.
13 А митник стояв здалека й не смів навіть очей звести на небо, але бив себе в груди та казав: «Боже, змилуйся наді мною, грішним!»
೧೩ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.
14 Кажу вам: цей чоловік повернувся додому виправданий, а не той; бо кожний, хто себе підносить, буде принижений, а хто себе принижує, буде піднесений.
೧೪ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
15 Деякі люди приносили до Нього також і дітей, щоб Він доторкнувся до них [та благословив], але учні, побачивши це, забороняли їм.
೧೫ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.
16 Ісус покликав їх до себе й сказав: «Пустіть дітей приходити до Мене й не забороняйте їм, бо таким, як вони, належить Царство Боже.
೧೬ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ.
17 Істинно кажу вам: хто не прийме Царства Божого, як дитя, той не ввійде до нього!»
೧೭ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು.
18 Один із керівників сказав: ―Учителю добрий, що мені робити, щоб успадкувати життя вічне. (aiōnios g166)
೧೮ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ, (aiōnios g166)
19 Ісус відповів йому: ―Чому ти називаєш Мене добрим? Ніхто не є Добрий, окрім Самого Бога.
೧೯ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.
20 Ти знаєш заповіді: «Не чини перелюбу», «Не вбивай», «Не вкради», «Не обманюй», «Шануй твого батька та матір».
೨೦‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
21 Він же сказав: ―Усе це я зберіг змалку.
೨೧ಅದಕ್ಕವನು, “ನಾನು ಬಾಲ್ಯದಿಂದಲೂ ಇವೆಲ್ಲನ್ನು ಸರಿಯಾಗಿ ಪಾಲಿಸುತ್ತಾ ಬಂದಿದ್ದೇನೆ” ಎಂದು ಹೇಳಿದನು.
22 Почувши це, Ісус сказав йому: ―Одного тобі ще бракує: продай усе, що маєш, та роздай бідним, і матимеш скарб на небесах; а тоді приходь та слідуй за Мною.
೨೨ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
23 Почувши це, він глибоко засмутився, адже був дуже багатий.
೨೩ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.
24 Ісус же, побачивши, що він засмутився, сказав: ―Як важко багатому ввійти в Царство Боже!
೨೪ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.
25 Адже легше верблюдові пройти через вушко голки, ніж багатому ввійти в Царство Боже.
೨೫ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು.
26 Ті, що почули це, запитали: ―Хто ж тоді може бути спасенний?
೨೬ಈ ಮಾತನ್ನು ಕೇಳಿದವರು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು?” ಎಂದು ಕೇಳಲು,
27 [Ісус] відповів: ―Неможливе для людей – можливе для Бога.
೨೭ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು.
28 Тоді Петро сказав: ―Ось ми залишили, що в нас було, та пішли за Тобою.
೨೮ಆಗ ಪೇತ್ರನು, “ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು” ಎಂದು ಹೇಳಲು,
29 Він відповів: ―Істинно кажу вам: немає нікого, хто б залишив дім, дружину, дітей, батьків і братів заради Царства Божого
೨೯ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,
30 й не отримав би значно більше в цей час, а в майбутньому віці – вічне життя. (aiōn g165, aiōnios g166)
೩೦ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು. (aiōn g165, aiōnios g166)
31 [Ісус] узяв дванадцятьох та сказав їм: «Ось ми йдемо до Єрусалима, і збудеться все, написане пророками про Сина Людського.
೩೧ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.
32 Він буде виданий язичникам, і насміхатимуться з Нього, і зневажатимуть Його, і плюватимуть на Нього.
೩೨ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,
33 Будуть бичувати Його та вб’ють, але третього дня Він воскресне».
೩೩ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
34 Та вони нічого з цього не зрозуміли. Ці слова були приховані від них, і вони не розуміли сказаного.
೩೪ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.
35 Коли ж Він наближався до Єрихона, один сліпий сидів біля дороги та просив милостиню.
೩೫ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು,
36 Почувши, що проходить натовп, він запитав, що відбувається.
೩೬ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.
37 Йому сказали, що Ісус із Назарета проходить.
೩೭ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ,
38 Тоді він закричав: ―Ісусе, Сину Давидів, змилуйся наді мною!
೩೮ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು.
39 Ті, що йшли попереду, почали докоряти йому, щоб він мовчав, але він ще голосніше закричав: ―Сину Давидів, змилуйся наді мною!
೩೯ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.
40 Ісус зупинився та звелів привести сліпого до Себе. Коли той наблизився до Нього, [Ісус] спитав його:
೪೦ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ,
41 ―Що хочеш, щоб Я зробив для тебе? Той відповів: ―Господи, щоб я знову бачив!
೪೧ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.
42 Ісус сказав йому: ―Прозрій! Віра твоя спасла тебе!
೪೨ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು.
43 І він умить прозрів та пішов за [Ісусом], прославляючи Бога. І весь народ, побачивши це, теж славив Бога.
೪೩ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.

< Від Луки 18 >