< Від Марка 10 >
1 [Ісус] піднявся звідти та пішов в околиці Юдеї та в землі, що за Йорданом. До Нього знову сходилися натовпи, і Він, за звичаєм, знову навчав їх.
೧ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
2 Підійшли фарисеї та, випробовуючи Його, запитували: ―Чи дозволено чоловікові розлучатися зі своєю дружиною?
೨ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು.
3 [Ісус] у відповідь запитав: ―Що наказав вам Мойсей?
೩ಅದಕ್ಕೆ ಆತನು “ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?” ಎಂದನು.
4 Вони сказали: ―Мойсей дозволив написати їй листа про розлучення та відпустити.
೪ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು.
5 Ісус же сказав їм: ―Через вашу жорстокість він написав вам цю заповідь.
೫ಆದರೆ ಯೇಸು ಅವರಿಗೆ, “ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು.
6 Від початку творіння [Бог] «чоловіком та жінкою їх створив».
೬ದೇವರಾದರೋ ಸೃಷ್ಟಿಯ ಮೊದಲಿನಿಂದಲೇಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು.
7 «Тому залишить чоловік батька свого й матір свою і прилине до жінки своєї,
೭ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.
8 і будуть двоє одним тілом». Тому більше не буде двох, а одне тіло.
೮ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ.
9 Отже, те, що Бог з’єднав, людина хай не роз’єднує.
೯ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.
10 У домі учні знову запитали про це Ісуса.
೧೦ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು.
11 Він сказав: ―Кожен, хто розлучається зі своєю дружиною та одружується з іншою, чинить перелюб проти неї.
೧೧ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;
12 І якщо дружина розлучається зі своїм чоловіком та одружується з іншим, також чинить перелюб.
೧೨ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು.
13 [Люди] приносили до Нього дітей, щоб Він доторкнувся до них та [благословив], але учні забороняли їм.
೧೩ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು.
14 Ісус же, побачивши це, розгнівався й сказав: «Пустіть дітей приходити до Мене й не забороняйте їм, бо таким, як вони, належить Царство Боже.
೧೪ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.
15 Істинно кажу вам: хто не прийме Царства Божого, як дитя, той не ввійде до нього!»
೧೫ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.
16 Він обійняв дітей і, поклавши на них руки, благословив.
೧೬ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
17 Коли Ісус відправився далі, підбіг до Нього один чоловік, упав перед Ним на коліна й запитав: ―Учителю добрий, що мені робити, щоб успадкувати життя вічне? (aiōnios )
೧೭ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು. (aiōnios )
18 Ісус відповів йому: ―Чому ти називаєш Мене добрим? Ніхто не є Добрий, окрім Самого Бога.
೧೮ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ.
19 Ти знаєш заповіді: «Не вбивай», «Не чини перелюбу», «Не вкради», «Не обманюй», «Не кривдь», «Шануй твого батька та матір».
೧೯ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
20 Він відповів: ―Учителю, усе це я зберіг змалку.
೨೦ಅವನು ಆತನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು,
21 Ісус подивився на нього з любов’ю та сказав йому: ―Одного тобі ще бракує: піди, продай усе, що маєш, та роздай бідним, і матимеш скарб на небесах; а тоді приходь та слідуй за Мною.
೨೧ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
22 Почувши це Слово, чоловік відійшов засмучений, бо мав багато маєтків.
೨೨ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.
23 Ісус подивився навкруги та сказав Своїм учням: ―Як важко багатим увійти в Царство Боже!
೨೩ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.
24 Учні були вражені словами Ісуса. Ісус знову сказав їм: ―Діти, як важко тим, хто покладається на багатства, увійти в Царство Боже.
೨೪ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.
25 Легше верблюдові пройти через вушко голки, ніж багатому ввійти в Царство Боже.
೨೫ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಎಂದು ಹೇಳಿದನು.
26 Тоді вони дуже здивувалися й казали між собою: ―Хто ж тоді може бути спасенний?
೨೬ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
27 Подивившись на них, Ісус сказав: ―Для людей це неможливо, але не для Бога, адже для Бога все можливо.
೨೭ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.
28 Петро почав говорити: ―Ось ми залишили все та пішли за Тобою.
೨೮ಪೇತ್ರನು ಆತನಿಗೆ, “ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ” ಎಂದು ಹೇಳುವುದಕ್ಕೆ ಪ್ರಾರಂಭಿಸಿದನು.
29 Ісус відповів: ―Істинно кажу вам: немає нікого, хто б залишив дім, братів, сестер, батька, матір, дітей і поля заради Мене та заради Доброї Звістки
೨೯ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,
30 і хто б не отримав у сто разів більше в цей час домів, братів, сестер, матерів, дітей і поля разом із гоніннями, а в майбутньому віці – вічне життя. (aiōn , aiōnios )
೩೦ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು. (aiōn , aiōnios )
31 Багато перших будуть останніми, а останні – першими.
೩೧ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು” ಎಂದು ಹೇಳಿದನು.
32 Вони йшли дорогою до Єрусалима. Ісус ішов попереду учнів, а вони, здивовані та сповнені страху, ішли за Ним. Він знов узяв дванадцятьох окремо й почав говорити про те, що має з Ним статися.
೩೨ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;
33 «Ось ми йдемо до Єрусалима, і там Син Людський буде виданий первосвященникам і книжникам. Вони засудять Його на смерть та віддадуть язичникам.
೩೩ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.
34 Ті насміхатимуться з Нього, плюватимуть на Нього, бичуватимуть Його та вб’ють, але через три дні Він воскресне».
೩೪ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
35 Яків та Іван, сини Зеведеєві, підійшли до Нього й сказали: ―Учителю, бажаємо, щоб Ти зробив для нас те, що ми попросимо.
೩೫ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, “ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು” ಹೇಳಿದರು.
36 Він запитав їх: ―Що бажаєте, щоб Я зробив для вас?
೩೬ಅದಕ್ಕೆ ಆತನು ಅವರಿಗೆ, “ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಲು,
37 Вони сказали Йому: ―Дозволь, щоб ми сиділи: один праворуч, а інший ліворуч від Тебе у славі Твоїй.
೩೭ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು.
38 Ісус сказав їм: ―Не знаєте, чого просите. Чи зможете ви пити чашу, яку Я п’ю, або хреститися хрещенням, яким Я хрещуся?
೩೮ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು.
39 Вони відповіли: ―Зможемо! Ісус сказав: ―Чашу, яку Я п’ю, ви будете пити, і хрещенням, яким Я хрещуся, ви будете хрещені.
೩೯ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.
40 Але сидіти праворуч або ліворуч від Мене – не Мені це вирішувати: ці місця належать тим, кому приготовлені.
೪೦ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
41 Решта десятеро учнів, почувши про це, розгнівалися на Якова та Івана.
೪೧ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.
42 Ісус же, покликавши їх, сказав: «Ви знаєте, що ті, кого вважають керівниками народів, володіють ними, а сильні світу панують над ними.
೪೨ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.
43 Але серед вас не так: хто хоче стати великим між вами, той має стати вашим слугою.
೪೩ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು.
44 І хто хоче бути першим, нехай буде рабом для всіх.
೪೪ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು.
45 Адже Син Людський прийшов не для того, щоб Йому служили, але щоб служити й віддати Своє життя як викуп за багатьох».
೪೫ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.
46 Вони прийшли до Єрихона, і, коли [Ісус] разом зі Своїми учнями та великим натовпом людей виходили з Єрихона, син Тимея, Вартимей, сліпий жебрак, сидів біля дороги.
೪೬ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.
47 Почувши, що Ісус із Назарета проходить, він почав кричати: ―Сину Давидів, змилуйся наді мною!
೪೭ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.
48 Багато людей почали докоряти йому, щоб він замовк, але він ще голосніше закричав: ―Сину Давидів, змилуйся наді мною!
೪೮ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು.
49 Ісус зупинився та сказав: «Покличте його!» Вони покликали сліпого, кажучи: «Не бійся! Вставай! Він кличе тебе».
೪೯ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.
50 Той скинув верхню одежу, підскочив та прийшов до Ісуса.
೫೦ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.
51 Ісус у відповідь сказав: ―Що ти хочеш, щоб Я зробив для тебе? Сліпий Йому відповів: ―Равві, щоб я знову бачив!
೫೧ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು.
52 Ісус сказав йому: ―Іди, твоя віра спасла тебе! Сліпий відразу ж прозрів та пішов дорогою за Ісусом.
೫೨ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.