< Від Марка 13 >

1 Коли [Ісус] виходив із Храму, один з Його учнів сказав Йому: ―Учителю, поглянь, яке каміння і які будівлі!
ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು.
2 Ісус сказав йому: ―Ти бачиш ці величезні споруди? Не залишиться тут каменя на камені, який не був би зруйнований.
ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.
3 Потім, коли [Ісус] сидів на Оливній горі навпроти Храму, Петро, Яків, Іван та Андрій наодинці запитали Його:
ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,
4 ―Скажи нам, коли все це станеться і яка ознака того, що все це скоро здійсниться?
ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು.
5 Ісус почав їм говорити: ―Дивіться, щоб ніхто не ввів вас в оману!
ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.
6 Бо багато хто прийде в ім’я Моє й казатиме: «Це Я!» І багатьох введуть в оману.
ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.
7 Коли почуєте про війни та чутки про війни, не лякайтеся: це має статися, але це ще не кінець.
ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
8 Повстане народ проти народу й царство проти царства. У різних місцях будуть землетруси та голод. Але це – лише початок страждань.
ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
9 Будьте обережні! Адже видаватимуть вас до судів і в синагогах битимуть вас. Поведуть вас до правителів та царів заради Мене, на свідчення їм.
“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,
10 Але спочатку Добра Звістка має проповідуватись усім народам.
೧೦ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.
11 Коли поведуть вас видавати [до суду], не турбуйтеся, як і що казати. Але говоріть те, що буде дано вам у той час. Адже не ви будете говорити, а Дух Святий.
೧೧“ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,
12 Брат видасть на смерть брата, а батько – дитину. Повстануть діти проти батьків та вбиватимуть їх.
೧೨ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,
13 І всі будуть ненавидіти вас через ім’я Моє. Але хто витримає до кінця, той буде спасенний.
೧೩ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”
14 Коли побачите гидоту спустошення, що сидить там, де їй не слід, – хто читає, нехай зрозуміє, – тоді ті, що в Юдеї, нехай тікають у гори.
೧೪“ಇದಲ್ಲದೆವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
15 Той, що буде на даху, хай не сходить і не входить, аби взяти щось зі свого дому;
೧೫ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.
16 той, що в полі, хай не вертається взяти свою одежу.
೧೬ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ.
17 Горе вагітним і тим, що будуть годувати грудьми в ті дні.
೧೭“ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ!
18 Моліться, щоб це не сталося взимку.
೧೮ಆ ದಿನಗಳುಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ.
19 Бо в ті дні буде таке страждання, якого не було від початку світу, що його створив Бог, дотепер і ніколи не буде.
೧೯ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.
20 І якби Господь не скоротив [тих] днів, то жодна людина не була б врятована, але заради обраних, яких Він обрав, [Господь] скоротив [ті] дні.
೨೦ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.
21 Якщо тоді хтось скаже вам: «Ось тут Христос!», «Ось [Він] там!» – не вірте.
೨೧“ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.
22 Бо постануть лжехристи та лжепророки й робитимуть знамення та чудеса, щоб ввести в оману, якщо можливо, обраних.
೨೨ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
23 Ви ж стережіться. Я про все попередив вас!
೨೩ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.
24 Але в ті дні, після того страждання, «сонце померкне, і місяць не буде світити;
೨೪ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.
25 зірки впадуть із неба, і сили небесні захитаються».
೨೫ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’
26 Тоді побачать Сина Людського, Який приходить на хмарах із великою силою та славою.
೨೬ಆಗಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.
27 Тоді Він надішле ангелів, і вони зберуть Його обраних із чотирьох вітрів, від одного краю землі до краю неба.
೨೭ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”
28 Від смоковниці навчіться її притчі: коли гілка стає вже м’якою й пускає листя, ви знаєте, що літо близько.
೨೮“ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.
29 Так і ви, коли побачите, що це збувається, знайте: [прихід] близько, [уже] біля дверей.
೨೯ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.
30 Істинно кажу вам: не мине цей рід, поки все це не станеться.
೩೦ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
31 Небо та земля проминуть, але слова Мої не проминуть.
೩೧ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”
32 А про той день і про ту годину ніхто не знає: ні ангели небесні, ні Син, а тільки Отець.
೩೨“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.
33 Стережіться, пильнуйте, бо не знаєте, коли прийде той час.
೩೩ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವುಎಚ್ಚರವಾಗಿರಿ, ಜಾಗರೂಕರಾಗಿರಿ.
34 Подібно як чоловік, який, вирушивши в подорож, залишив свій дім і дав своїм рабам владу, кожному своє доручення, а сторожеві наказав пильнувати.
೩೪ಅದುಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
35 Пильнуйте, бо не знаєте, коли господар дому прийде: увечері, опівночі, коли заспіває півень або вранці,
೩೫“ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!
36 щоб, прийшовши несподівано, не знайшов вас уві сні.
೩೬ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು.
37 Те, що Я кажу вам, усім кажу: пильнуйте!
೩೭ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು.

< Від Марка 13 >