< Від Матвія 11 >
1 Коли Ісус закінчив навчати дванадцятьох Своїх учнів, то пішов звідти навчати та проповідувати в їхніх містах.
೧ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.
2 Іван, почувши у в’язниці про діла Христові, надіслав своїх учнів
೨ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,
3 спитати Його: ―Ти Той, Хто має прийти, чи нам чекати іншого?
೩“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.
4 Ісус у відповідь сказав: ―Ідіть і скажіть Іванові те, що ви бачите й чуєте:
೪ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ;
5 сліпі прозрівають, каліки ходять, прокажені очищаються, глухі чують, мертві оживають, а бідним проповідується Добра Звістка.
೫ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.
6 І блаженний той, хто не спокуситься через Мене.
೬ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು.
7 Коли ж вони пішли, Ісус почав говорити людям про Івана: «На що ви ходили подивитися в пустелю? На тростину, розхитану вітром?
೭ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
8 На кого ви виходили дивитись? На людину в м’якій одежі? Але ті, що носять м’які одежі, знаходяться в царських палацах.
೮ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.
9 То на кого ж ви ходили дивитись? На пророка? Так, Я кажу вам, навіть більше, ніж на пророка.
೯ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.
10 Він той, про кого написано: „Ось Я посилаю Мого посланця перед обличчям Твоїм, який приготує дорогу перед Тобою“.
೧೦‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ.
11 Істинно кажу вам: серед народжених жінками ще не було більшого за Івана Хрестителя, але найменший у Царстві Небесному більший за нього.
೧೧ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
12 Від днів Івана Хрестителя й донині Царство Небесне здобувається силою, і хто докладає зусиль, той здобуває його.
೧೨ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.
13 Адже всі Пророки та Закон пророкували до Івана.
೧೩ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು.
14 І якщо хочете знати, він – Ілля, який має прийти.
೧೪ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.
15 Хто має вуха, нехай слухає!
೧೫ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.
16 Із ким же Мені порівняти цей рід? Він подібний до дітей, котрі сидять на базарі та, звертаючись до інших,
೧೬ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,
17 кажуть: „Ми грали вам на сопілці, а ви не танцювали. Ми співали вам жалібні пісні, а ви не ридали“.
೧೭‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.
18 Прийшов Іван, який не їсть і не п’є, а вони кажуть: „Має демона!“
೧೮ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.
19 Прийшов Син Людський, Який їсть і п’є, а вони кажуть: „Ось чоловік – ненажера й п’яниця, приятель митників та грішників“. Однак мудрість виправдана її власними ділами».
೧೯ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನುತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.
20 Тоді [Ісус] почав докоряти містам, у яких сталося найбільше Його чудес, бо вони не покаялись:
೨೦ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
21 «Горе тобі, Хоразине! Горе тобі, Віфсаїдо! Бо якби в Тирі та Сидоні сталися ті чудеса, які були у вас, то вони давно би покаялися в мішковині та попелі.
೨೧ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.
22 Проте кажу вам: Тиру та Сидону легше буде в день суду, ніж вам.
೨೨ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.
23 І ти, Капернауме, чи будеш піднесений до неба? Ні, ти до пекла зійдеш! Коли б у Содомі сталися чудеса, які сталися в тебе, він залишився б донині. (Hadēs )
೨೩ಎಲೈ ಕಪೆರ್ನೌಮೇನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. (Hadēs )
24 Проте кажу вам: землі Содомській легше буде в день суду, ніж тобі».
೨೪ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು.
25 У той час Ісус промовив у відповідь: «Славлю Тебе, Отче, Господи неба і землі, за те, що Ти приховав це від мудрих та розумних і відкрив дітям.
೨೫ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
26 Так, Отче, бо такою була Твоя добра воля.
೨೬ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.
27 Усе Мені було доручено Моїм Отцем. Ніхто не знає Сина, окрім Отця, і ніхто не знає Отця, окрім Сина й того, кому Син хоче відкрити.
೨೭ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.
28 Прийдіть до Мене всі втомлені та обтяжені, і Я заспокою вас.
೨೮“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.
29 Візьміть на себе Моє ярмо й навчіться від Мене, бо Я лагідний та покірний серцем, і знайдете спокій вашим душам.
೨೯ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.
30 Бо ярмо Моє добре і тягар Мій легкий».
೩೦ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.