< До филип'ян 4 >

1 Отже, мої улюблені та дорогі брати, ви моя радість і вінок, стійте непохитно в Господі, любі!
ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.
2 Закликаю Еводію та Синтихію бути однодумними в Господі.
ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
3 Так, я прошу тебе, вірний товаришу, допоможи їм. Вони боролися за Добру Звістку разом зі мною, із Клементом та іншими моїми братами, чиї імена є в книзі життя.
ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.
4 Завжди радійте в Господі! І знову кажу: радійте!
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.
5 Нехай ваша лагідність буде відома всім людям! Господь близько.
ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.
6 Ні про що не турбуйтеся, але в усьому з подякою відкривайте ваші прохання Богові в молитві та благанні.
ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
7 І Божий мир, який перевершує будь-яке розуміння, збереже ваші серця й ваші думки в Христі Ісусі.
ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
8 Наостанку, брати: що істинне, що достойне, що праведне, що чисте, що любе, що [гідне] похвали, що доброчесність чи [достойне] слави – про це роздумуйте.
ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.
9 І чого навчилися, що отримали, почули та побачили в мені – те й робіть! І нехай Бог миру буде з вами.
ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
10 Я надзвичайно зрадів у Господі, адже тепер ви знову почали турбуватися про мене в думках. Ви думали про це, але не мали відповідної нагоди.
೧೦ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.
11 Я кажу вам про це не тому, що маю потребу, адже я навчився бути задоволеним незалежно від обставин.
೧೧ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
12 Я вмію [жити] смиренно та вмію [жити] з достатком. Я звик до будь-яких умов: і бути ситим, і бути голодним, і бути в достатку, і мати нестачу.
೧೨ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ.
13 Я все можу в Тому, Хто мене зміцнює.
೧೩ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
14 А втім, ви добре зробили, розділивши зі мною моє страждання.
೧೪ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು.
15 Ви ж, филип’яни, знаєте, що на початку [проповідування] Доброї Звістки, коли я вийшов із Македонії, жодна церква не підтримала мене пожертвами та гостинністю, окрім вас.
೧೫ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ.
16 Адже одного разу, та навіть двічі, ви посилали мені допомогу до Солуня.
೧೬ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ.
17 Не те, щоб я прагнув якогось подарунка, просто прагну плоду, який зростає на вашу користь.
೧೭ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.
18 Я отримав усе і маю з достатком. Маю всього вдосталь, [адже] отримав від Епафродита ваші [дари] – приємний аромат, прийнятну жертву, яка до вподоби Богу.
೧೮ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.
19 Мій Бог сповнить усі ваші потреби згідно з Його багатством у славі, у Христі Ісусі.
೧೯ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.
20 Богу й Отцю нашому [нехай буде] слава навіки-віків! Амінь. (aiōn g165)
೨೦ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್‍. (aiōn g165)
21 Привітайте всіх святих у Христі Ісусі! Брати, які зі мною, вас вітають.
೨೧ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
22 Усі святі вас вітають, а особливо ті, що з дому Кесаря.
೨೨ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.
23 Нехай благодать Господа Ісуса Христа [буде] з вашим духом! Амінь.
೨೩ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.

< До филип'ян 4 >