< Об'явлення 7 >
1 Після цього я побачив чотирьох ангелів, що стояли на чотирьох кутах землі. Вони тримали чотири земні вітри, щоб жоден із них не дув ні на землю, ні на море, ні на жодне дерево.
೧ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.
2 Я побачив іншого ангела, який підіймався зі сходу і який мав печатку живого Бога. Він голосно крикнув до чотирьох ангелів, яким було дано силу заподіяти шкоду землі та морю:
೨ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,
3 «Не шкодьте ні землі, ні морю, ні деревам, поки ми не поставимо печатку на чоли рабів нашого Бога».
೩“ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
4 Тоді я почув кількість тих, хто був запечатаний: сто сорок чотири тисячі з усіх племен Ізраїлевих.
೪ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.
5 Із племені Юди було запечатано дванадцять тисяч, із племені Рувима – дванадцять тисяч, із племени Ґада – дванадцять тисяч,
೫ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದ್ ಕುಲದವರಲ್ಲಿ ಹನ್ನೆರಡು ಸಾವಿರ,
6 із племені Ашера – дванадцять тисяч, із племені Нафталі – дванадцять тисяч, із племені Манасії – дванадцять тисяч,
೬ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ,
7 із племені Симеона – дванадцять тисяч, із племені Левія – дванадцять тисяч, із племені Іссахара – дванадцять тисяч,
೭ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ,
8 із племени Завулона – дванадцять тисяч, із племені Йосифа – дванадцять тисяч, із племені Веніаміна – дванадцять тисяч, відмічених печаттю.
೮ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು.
9 Після цього я подивився, і там переді мною було безліч людей, яких ніхто не міг порахувати, з усіх націй, племен, народів та мов, що стояли перед престолом та перед Агнцем. Вони були в білих одежах і тримали в руках пальмові гілки.
೯ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.
10 І вони вигукували гучним голосом: «Спасіння належить нашому Богу, Який сидить на престолі, і Агнцю».
೧೦ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.
11 І всі ангели, що стояли навколо престолу, навколо старійшин та чотирьох живих істот, упали перед престолом долілиць і поклонилися Богові,
೧೧ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,
12 кажучи: «Амінь! Хвала і слава мудрість, подяка і честь, сила та могутність у нашого Бога навіки-віків! Амінь». (aiōn )
೧೨“ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. (aiōn )
13 Тоді один зі старійшин запитав мене: ―Хто ті, одягнені в білі одежі, і звідки вони?
೧೩ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು.
14 Я відповів: ―Пане, ти знаєш, [хто вони]! І він сказав: ―Це ті, хто вийшов із великої скорботи; вони випрали свій одяг і вибілили його у крові Агнця.
೧೪ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.
15 Тому «вони стоять перед престолом Бога та служать Йому день і ніч у Його Храмі. А Той, Хто сидить на престолі, розтягне намет над ними.
೧೫ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.
16 Вони ніколи більше не будуть голодувати; вони більше ніколи не будуть спраглими. І не палитиме їх сонце й жодна спека.
೧೬ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.
17 Бо Агнець, Який у центрі престолу, буде їхнім Пастирем; Він поведе їх до джерел живої води. І Бог витре кожну сльозу з їхніх очей».
೧೭ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.