< До римлян 11 >

1 Я запитую тоді: чи Бог відкинув Свій народ? Зовсім ні! Адже я сам ізраїльтянин, нащадок Авраама з роду Веніаміна.
ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.
2 Бог не відкинув Свого народу, який Він знав заздалегідь. Невже ви не знаєте, що пише Писання про те, як Ілля скаржився Богові на Ізраїль?
ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?
3 «Господи, вони вбили Твоїх пророків і зруйнували Твої жертовники. Я єдиний, хто залишився, і вони намагаються вбити мене».
ಅವನು ದೇವರ ಮುಂದೆ, “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.
4 І що ж йому відповів Бог? «Я зберіг для Себе сім тисяч мужів, які не схилили колін перед Ваалом».
ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.
5 Так само й тепер є останок, обраний благодаттю.
ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.
6 І якщо благодаттю, то не за ділами, інакше благодать уже не була би благодаттю.
ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.
7 І що ж? Того, чого так наполегливо прагнув народ Ізраїлю, він не отримав, але отримали обрані, а інші закам’яніли,
ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.
8 як написано: «Бог дав їм дух затьмарення, щоб очі не бачили й вуха не чули, аж до цього дня».
“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
9 А Давид каже: «Нехай трапеза їхня стане для них пасткою та приманкою на спотикання й на відплату для них.
ಇದಲ್ಲದೆ “ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಅಡೆತಡೆಯೂ, ಪ್ರತಿಕಾರವೂ ಆಗಲಿ;
10 Нехай потемніють їхні очі, щоб не бачили, і нехай їхні спини будуть зігнуті назавжди».
೧೦ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ.
11 Тож я запитую: чи вони спіткнулися, щоб упасти? Зовсім ні! Швидше через їхнє падіння спасіння прийшло до язичників, щоб спонукати їх до ревнощів.
೧೧ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.
12 Але якщо їхнє падіння є багатством для світу, а їхня втрата є багатством для язичників, то наскільки більші багатства принесе їхня повнота!
೧೨ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.
13 Звертаюся до вас, язичників, оскільки я, апостол язичників, звеличую своє служіння
೧೩ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.
14 у надії, що викличу ревнощі в моїх рідних, щоб рятувати декого з них.
೧೪ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.
15 Бо якщо їхнє відторгнення [принесло] світові примирення, [то що принесе] їхнє прийняття, як не воскресіння з мертвих?
೧೫ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.
16 Якщо закваска свята, то й все тісто [святе]; якщо корінь святий, то й гілки [святі].
೧೬ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.
17 Якщо ж деякі гілки були відламані, а ти, дика оливко, була прищеплена серед них і тепер стала живитися з кореня та соку оливкового дерева,
೧೭ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.
18 не вихваляйся перед гілками. Якщо ж вихваляєшся, [то пам’ятай, що] не ти підтримуєш корінь, але корінь підтримує тебе.
೧೮ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.
19 Отже, скажеш: «Гілки були відламані, щоб я був прищеплений».
೧೯ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.
20 Добре. Але вони були відламані через невіру, а ти тримаєшся завдяки вірі. Не будь нахабним, але май страх.
೨೦ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.
21 Бо якщо Бог не пощадив природних гілок, Він не пощадить і тебе.
೨೧ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.
22 Отже, зважай на доброту й суворість Бога: суворість до тих, хто відпав, але доброту до тебе, за умови, що ти залишишся в Його доброті. Інакше Він і тебе відріже.
೨೨ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
23 І якщо вони не залишатимуться в невірі, то будуть прищеплені, адже Бог має силу їх знову прищепити.
೨೩ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.
24 Бо якщо ти, відрізаний від дикого за своєю природою оливкового дерева, всупереч природі був прищеплений до доброго оливкового дерева, то наскільки легше ці природні гілки будуть прищеплені до власного оливкового дерева!
೨೪ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.
25 Брати, щоб ви не вважали себе розумнішими, ніж ви є, я не хочу залишити вас у невіданні щодо цієї таємниці: зачерствіння спало на частину Ізраїлю, і так буде, поки не увійде повна [кількість] язичників,
೨೫ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.
26 і таким чином увесь Ізраїль буде спасенний. Як написано: «Визволитель прийде із Сіону; Він відверне безбожність від Якова.
೨೬ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
27 І це Мій Завіт із ними, коли Я усуну їхні гріхи».
೨೭ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.
28 Щодо Доброї Звістки, то вони вороги задля вас, але щодо обрання, то вони улюблені через праотців,
೨೮ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.
29 адже Божі дари та Його покликання непохитні.
೨೯ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.
30 Так само як ви колись були неслухняні Богові, але тепер отримали милість через їхню непокірність,
೩೦ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,
31 так і вони нині стали непокірними, щоб через милосердя Боже до вас і вони могли отримати милість.
೩೧ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.
32 Адже Бог замкнув усіх у непокору, щоб помилувати всіх. (eleēsē g1653)
೩೨ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ. (eleēsē g1653)
33 О, глибино багатства, мудрості й знання Бога! Які незбагненні Його суди й недосліджені шляхи Його!
೩೩ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.
34 «Хто пізнав задум Господа? Або хто був Його радником?»
೩೪“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?
35 «Хто колись дав щось Богові, щоб Він мусив повернути?»
೩೫ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”
36 Адже все від Нього, через Нього й для Нього. Йому слава навіки! Амінь. (aiōn g165)
೩೬ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್. (aiōn g165)

< До римлян 11 >