< 1 Івана 1 >

1 Що було від почину, про що ми чули, що бачили очима нашими і на що дивили ся, і чого руки наші дотикали ся, про Слово життя -
ಆದಿಯಿಂದ ಇರುವಂಥದ್ದೂ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದ ಆ ಜೀವವಾಕ್ಯವನ್ನೇ ಸಾರುತ್ತಿದ್ದೇವೆ.
2 (бо життє явилось, і ми бачили, і сьвідкуємо, і звіщаєм вам життє вічне, що було в Отця, а явилось нам; ) (aiōnios g166)
ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ. (aiōnios g166)
3 що ми бачили і чули, звіщаєм вам, щоб і ви мали спільність з нами; а спільність наша з Отцем і Сином Його Ісусом Христом,
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.
4 І се пишемо вам, щоб радість ваша була повна.
ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ.
5 І се обітниця, котру ми чули від Нього, і звіщаємо вам, бо Бог сьвітло, і ніякої у Нього темряви.
ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ.
6 Коли говоримо, що спільність маємо з Ним, а в темряві ходимо, то не говоримо по правді і не творимо правди;
ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ.
7 коли ж у сьвітлї ходимо, яко ж Він сам у сьвітлї, то маємо спільність один з одним, і кров Ісуса Христа, Сина Його, очищав нас од усякого гріха.
ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
8 Коли говоримо, що гріха не маємо, то самі себе обманюємо, і нема правди в нас.
ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
9 Коли визнаєм гріхи наші, то Він вірний і праведний, щоб простив нам гріхи, і очистив нас од всякої неправди.
ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
10 Коли кажімо, що ми не згрішили, то й слова Його нема в нас.
ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ. ಅವರ ವಾಕ್ಯವು ನಮ್ಮಲ್ಲಿ ಬಾಳುವುದಿಲ್ಲ.

< 1 Івана 1 >