< Ісая 62 >
1 Не буду мовчати я ради Сіо́ну, і ради Єрусалиму не буду спокі́йний, аж поки не ви́йде, як ся́йво, його праведність, а спасі́ння його — як горю́чий світи́льник!
೧ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.
2 І побачать наро́ди твою праведність, а славу твою — всі царі́, і йме́нням нови́м будуть звати тебе, що уста Господні докла́дно озна́чать його́.
೨ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.
3 І ти станеш короною слави в Господній руці й діяде́мою царства в долоні Бога свого!
೩ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ.
4 Вже не скажуть на тебе „поки́нута“, а на край твій не будуть казати вже „пустиня“, бо тебе будуть кли́кати „в ній моя втіха“, а край твій „замі́жня“, бо Господь пожада́є тебе, і твій край буде взятий за жінку!
೪ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.
5 Як юна́к бере панну за жінку, так з тобою одру́житься Сам Будівни́чий, і як ті́шиться той молоди́й нарече́ною, так раді́тиме Бог твій тобо́ю!
೫ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.
6 На му́рах твоїх, Єрусалиме, Я поставив сторо́жу, — ніко́ли не буде мовчати вона цілий день та всю ніч. Ви, хто пригадує Господа, не замо́вкніть, —
೬ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,
7 і перед Ним не вмовкайте, аж поки не змі́цнить, і аж поки не вчи́нить Він Єрусалима за славу Свою́ на землі!
೭ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ.
8 Господь присягну́в був Своєю прави́цею й поту́жним раме́ном Своїм: Направду, не дам уже збі́жжя твого ворога́м твоїм, і пити не будуть чужи́нці твого виногра́дного со́ку, що ти працюва́в біля нього!
೮ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;
9 Бо ті, хто збирає його́, будуть їсти його та й хвали́тимуть Господа, і ті, хто грома́дить його́, будуть пити його на подві́р'ях святині Моєї!
೯ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ.
10 Проходьте, проходьте ви бра́мами, чи́стьте доро́гу наро́дові! Будуйте доро́гу, будуйте дорогу, дорогу ту биту, очи́стьте від ка́меня, підіймі́ть над наро́дами пра́пора!
೧೦ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!
11 Ось звіщає Господь аж до кра́ю землі: Розкажі́те сіо́нській дочці́: Ось прихо́дить Спасі́ння твоє, ось із Ним нагоро́да Його, і заплата Його перед Ним!
೧೧“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.
12 І будуть їх звати наро́дом святим, вику́пленцями Господа, а на тебе закличуть „жада́на“, незали́шене місто!
೧೨ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.